AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೂಗಳತೆ ದೂರದಲ್ಲೇ ನಕಲಿ ಔಷಧ ಜಾಲ! ನಕಲಿ ಕ್ಯಾನ್ಸರ್ ಔಷಧಿ ಮಾರುತ್ತಿದ್ದ ಬೃಹತ್ ಜಾಲ ಪತ್ತೆ, ಕಿಂಗ್​ಪಿನ್​ಗೆ ಬಲೆ

ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ದುಬಾರಿ ಔಷಧಗಳನ್ನು ನಕಲಿ ರೂಪದಲ್ಲಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲದ ಕೃತ್ಯ ಬೆಂಗಳೂರು ಹೊರವಲಯದಲ್ಲಿ ಬಯಲಾಗಿದೆ. ಪೊಲೀಸರು ಹಾಗೂ ಔಷಧ ಆಡಳಿತ ವಿಭಾಗದ ಅಧಿಕಾರಿಗಳು ಜಾಲವನ್ನು ಭೇದಿಸಿ ಸುಮಾರು 6 ಕೋಟಿ ರೂ. ಮೌಲ್ಯದ ನಕಲಿ ಔಷಧಗಳನ್ನು ಸೀಜ್ ಮಾಡಿದ್ದಾರೆ.

ಬೆಂಗಳೂರು ಕೂಗಳತೆ ದೂರದಲ್ಲೇ ನಕಲಿ ಔಷಧ ಜಾಲ! ನಕಲಿ ಕ್ಯಾನ್ಸರ್ ಔಷಧಿ ಮಾರುತ್ತಿದ್ದ ಬೃಹತ್ ಜಾಲ ಪತ್ತೆ, ಕಿಂಗ್​ಪಿನ್​ಗೆ ಬಲೆ
ದೊಡ್ಡೇರಿ ಸಮೀಪದ ಸಿ.ಕೆ. ತಾಂಡ್ಯಾ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ನಕಲಿ ಔಷಧ ತಯಾರಿImage Credit source: tv9
ವಿನಯ್​ ಕಾಶಪ್ಪನವರ್​
| Edited By: |

Updated on:Aug 19, 2026 | 10:47 AM

Share

ಮುಖ್ಯಾಂಶಗಳು

  • ₹6 ಕೋಟಿ ನಕಲಿ ಔಷಧಗಳು ವಶಕ್ಕೆ
  • ಪ್ರಮುಖ ಆರೋಪಿ ಚೇತನ್‌ಗಾಗಿ ಪೊಲೀಸರ ಶೋಧ
  • QR ಕೋಡ್‌ಗೆ 504 ದೂರುಗಳು ದಾಖಲು

ಬೆಂಗಳೂರು, ಆಗಸ್ಟ್ 19: ಬೆಂಗಳೂರು (Bengaluru) ಹೊರವಲಯದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಬಳಸುವ ದುಬಾರಿ ಔಷಧಗಳನ್ನು ನಕಲಿ ರೂಪದಲ್ಲಿ (Fake Medicine) ತಯಾರಿಸಿ, ಕೋಟ್ಯಂತರ ರೂಪಾಯಿ ವಂಚನೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸರು ಹಾಗೂ ಔಷಧ ಆಡಳಿತ ವಿಭಾಗದ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ನಕಲಿ ಔಷಧ ತಯಾರಿಕಾ ಅಡ್ಡೆಯನ್ನು ಪತ್ತೆಹಚ್ಚಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡೇರಿ ಸಮೀಪದ ಸಿ.ಕೆ. ತಾಂಡ್ಯಾ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ನಕಲಿ ಔಷಧ ತಯಾರಿಸಲಾಗುತ್ತಿತ್ತು. ಹೊರಗಿನಿಂದ ಸಾಮಾನ್ಯ ತೋಟದ ಮನೆಯಂತೆ ಕಂಡುಬರುತ್ತಿದ್ದ ಫಾರ್ಮ್‌ಹೌಸ್‌ನಲ್ಲಿ ದುಬಾರಿ ಕ್ಯಾನ್ಸರ್ ಔಷಧಗಳ ನಕಲಿ ತಯಾರಿಕೆ ನಡೆಯುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6 ಕೋಟಿ ರೂ. ಮೌಲ್ಯದ ನಕಲಿ ಔಷಧ ವಶ

ದಾಳಿ ವೇಳೆ ಸುಮಾರು 6 ಕೋಟಿ ರೂ. ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳೀಯರೊಬ್ಬರಿಗೆ ಸೇರಿದ ಫಾರ್ಮ್‌ಹೌಸ್‌ ಅನ್ನು ಲೀಸ್‌ಗೆ ಪಡೆದಿದ್ದ ಬೆಂಗಳೂರು ಮೂಲದ ಚೇತನ್ ಎಂಬಾತ ಈ ದಂಧೆಯ ಪ್ರಮುಖ ಆರೋಪಿ ಎನ್ನಲಾಗಿದೆ.

ಪ್ರತಿಷ್ಠಿತ ಕಂಪನಿ ಹೆಸರಲ್ಲೇ ತಯಾರಾಗ್ತಿತ್ತು ಕ್ಯಾನ್ಸರ್ ನಕಲಿ ಔಷಧಿ

ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಔಷಧಗಳಿಗೆ ಪ್ರತಿಷ್ಠಿತ ಔಷಧ ಕಂಪನಿಯ ಹೆಸರಿನ ಲೇಬಲ್‌ಗಳನ್ನು ಅಂಟಿಸಿ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಸುಮಾರು 600 ರೂ. ಮೌಲ್ಯದ ಔಷಧಗಳನ್ನು 6 ಸಾವಿರದಿಂದ 8 ಸಾವಿರ ರೂ.ವರೆಗೆ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಮೂಲಕ ರೋಗಿಗಳ ಆರೋಗ್ಯದ ಜೊತೆ ಚೆಲ್ಲಾಟವಾಡುವುದರ ಜೊತೆಗೆ ಭಾರೀ ಪ್ರಮಾಣದಲ್ಲಿ ಹಣ ಸಂಪಾದಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಒಬ್ಬ ಆರೋಪಿಯ ಬಂಧನ: ಕಿಂಗ್​ಪಿನ್​ಗಾಗಿ ಶೋಧ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಚೇತನ್‌ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ನಕಲಿ ಔಷಧಗಳನ್ನು ಎಲ್ಲೆಲ್ಲಿ ಪೂರೈಕೆ ಮಾಡಲಾಗುತ್ತಿತ್ತು ಹಾಗೂ ಈ ಜಾಲದಲ್ಲಿ ಇನ್ನೂ ಯಾರಾದರೂ ಶಾಮೀಲಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

QR ಕೋಡ್‌ಗೆ 24 ಗಂಟೆಯಲ್ಲೇ 504 ದೂರು

ಇನ್ನೊಂದೆಡೆ, ಹೋಟೆಲ್, ರೆಸ್ಟೋರೆಂಟ್, ಮೆಡಿಕಲ್ ಸ್ಟೋರ್ ಹಾಗೂ ಆಸ್ಪತ್ರೆಗಳಲ್ಲಿ ಕಂಡುಬರುವ ಸಮಸ್ಯೆಗಳ ಕುರಿತು ಸಾರ್ವಜನಿಕರು ದೂರು ನೀಡಲು ಆರೋಗ್ಯ ಇಲಾಖೆ ಆರಂಭಿಸಿರುವ QR ಕೋಡ್ ವ್ಯವಸ್ಥೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸೋಮವಾರ QR ಕೋಡ್ ವ್ಯವಸ್ಥೆಯನ್ನು ಬಿಡುಗಡೆ ಮಾಡಿದ್ದರು. ವಿವಿಧ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮೆಡಿಕಲ್ ಶಾಪ್‌ಗಳು ಹಾಗೂ ಆಸ್ಪತ್ರೆಗಳ ಮುಂಭಾಗ QR ಕೋಡ್ ಅಳವಡಿಸಲಾಗಿದ್ದು, ಸಾರ್ವಜನಿಕರು ಅದನ್ನು ಸ್ಕ್ಯಾನ್ ಮಾಡಿ ತಮ್ಮ ದೂರುಗಳನ್ನು ದಾಖಲಿಸಬಹುದಾಗಿದೆ.

ಇದನ್ನೂ ಓದಿ: ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್ ಹಾಕಲು ಹೊಸ ‘QR ಕೋಡ್’ ಅಸ್ತ್ರ!

ವ್ಯವಸ್ಥೆ ಆರಂಭವಾದ ಕೇವಲ 24 ಗಂಟೆಗಳಲ್ಲೇ 504 ದೂರುಗಳು ದಾಖಲಾಗಿವೆ ಎನ್ನಲಾಗಿದೆ. ಆಹಾರ ಗುಣಮಟ್ಟ, ವೈದ್ಯಕೀಯ ಸೇವೆ, ಮೆಡಿಕಲ್ ಸ್ಟೋರ್‌ಗಳಲ್ಲಿನ ಸಮಸ್ಯೆಗಳು ಸೇರಿದಂತೆ ವಿವಿಧ ದೂರುಗಳನ್ನು ಸಾರ್ವಜನಿಕರು ದಾಖಲಿಸುತ್ತಿದ್ದಾರೆ. ಆರೋಗ್ಯ ಮತ್ತು ಆಹಾರ ಕ್ಷೇತ್ರದಲ್ಲಿನ ಅಕ್ರಮ ಹಾಗೂ ಲೋಪಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ತಂತ್ರಜ್ಞಾನ ಆಧಾರಿತ ದೂರು ವ್ಯವಸ್ಥೆಯನ್ನು ಬಳಸುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 am, Wed, 19 August 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ