ನಕಲಿ ಜಾತಿ ಪ್ರಮಾಣಪತ್ರ ಕೇಸ್; ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯಗೆ ಮತ್ತೆ ಸಂಕಷ್ಟ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ಕೆಂಪಯ್ಯ ಸುಳ್ಳು ಜಾತಿ ಪ್ರಮಾಣಪತ್ರ ನೀಡಿ IPS ಹುದ್ದೆಗೇರಿದ್ದ ಆರೋಪ ಕೇಳಿ ಬಂದಿತ್ತು. ನಿವೃತ್ತ ಐಪಿಎಸ್ ಅಧಿಕಾರಿ ಕುರುಬ ಜಾತಿಗೆ ಸೇರಿದವರಾಗಿದ್ದಾರೆ. ಆದರೆ ಕಾಡು ಕುರುಬರು ಎಂದು ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದಾರೆಂಬ ಆರೋಪವಿತ್ತು.
ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ವಿರುದ್ಧ ನಕಲಿ ಜಾತಿ ಪ್ರಮಾಣಪತ್ರ ಆರೋಪ ಕೇಸ್ಗೆ ಸಂಬಂಧಿಸಿ ಕೆಂಪಯ್ಯಗೆ ಮತ್ತೆ ಸಂಕಷ್ಟ ಆರಂಭವಾಗಿದೆ. ದಶಕಗಳ ಹಿಂದಿನ ಕೆಂಪಯ್ಯ ಪ್ರಕರಣ ಸಂಬಂಧ ಮತ್ತೆ ವಿಚಾರಣೆ ಶುರುವಾಗಿದೆ. ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಕೆಂಪಯ್ಯಗೆ ನೋಟಿಸ್ ಜಾರಿ ಮಾಡಿದೆ. ಪೂರಕ ದಾಖಲೆ ಜತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.
ಕೆಂಪಯ್ಯ ಸುಳ್ಳು ಜಾತಿ ಪ್ರಮಾಣಪತ್ರ ನೀಡಿ IPS ಹುದ್ದೆಗೇರಿದ್ದ ಆರೋಪ ಕೇಳಿ ಬಂದಿತ್ತು. ನಿವೃತ್ತ ಐಪಿಎಸ್ ಅಧಿಕಾರಿ ಕುರುಬ ಜಾತಿಗೆ ಸೇರಿದವರಾಗಿದ್ದಾರೆ. ಆದರೆ ಕಾಡು ಕುರುಬರು ಎಂದು ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದಾರೆಂಬ ಆರೋಪವಿತ್ತು. ಪರಿಶಿಷ್ಟ ಪಂಗಡ ಕೋಟಾದಡಿ IPS ಹುದ್ದೆಗೆ ಏರಿರುವ ಆರೋಪವಿದೆ. ಈ ಬಗ್ಗೆ ದಶಕಗಳ ಹಿಂದೆಯೇ ಕೆಂಪಯ್ಯ ವಿರುದ್ಧ ದೂರು ದಾಖಲಾಗಿತ್ತು. ನಂತರ ಕೆಂಪಯ್ಯ ವಿರುದ್ಧದ ದೂರಿನ ಬಗ್ಗೆ ವಿಚಾರಣೆ ನಡೆಸಿರಲಿಲ್ಲ. ಫೈಲ್ ಪತ್ತೆಯಾದ ನಂತರ ಮತ್ತೆ ವಿಚಾರಣೆಗೆ ಬಂದ ಪ್ರಕರಣ. ಸೂಕ್ತ ದಾಖಲೆಗಳ ಜತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಡಿಸಿಆರ್ಬಿ ಕೇಂದ್ರ ಕಚೇರಿಯಲ್ಲಿ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಎದುರು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯಗೆ ಡಿಸಿಆರ್ಇ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಡಾ.ಪಿ.ರವೀಂದ್ರರಿಂದ ನೋಟಿಸ್ ಜಾರಿಯಾಗಿದೆ.
ಇಂದು ವಿಚಾರಣೆಗೆ ಗೈರಾದ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಇಂದು ವಿಚಾರಣೆಗೆ ಗೈರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಬರುವಂತೆ ಸೂಚಿಸಲಾಗಿತ್ತು. ಆದರೆ ವಿಚಾರಣೆಗೆ ನಿವೃತ್ತ IPS ಅಧಿಕಾರಿ ಕೆಂಪಯ್ಯ ಹಾಜರಾಗಿಲ್ಲ.
ನಕಲಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ ದಾವಣಗೆರೆ: ಬೇಡ ಜಂಗಮ ಜಾತಿ ಹೆಸರಿನಲ್ಲಿ ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕುಟುಂಬ ಸಂಕಷ್ಟದಲ್ಲಿದೆ. ರಾಜ್ಯದಲ್ಲಿ 2010ರಿಂದ ಬೇಡ ಜಂಗಮ ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದವರ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಯಿಂದ ಪ್ರಾದೇಶಿಕ ಆಯುಕ್ತರಿಗೆ ಪತ್ರ ರವಾನಿಸಲಾಗಿದೆ.
ಸುಳ್ಳು ಬೇಡ ಜಂಗಮ ಎಸ್ಸಿ ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನ ತಕ್ಷಣಕ್ಕೆ ಸೇವೆಯಿಂದ ಅಮಾನತು ಅಥವಾ ವಾರ್ಷಿಕ ವೇತನ ಕಡಿತಗೊಳಿಸಿ ಸೇವಾ ಪುಸ್ತಕದಲ್ಲಿ ದಾಖಲು ಮಾಡಲು ನಿರ್ಧಾರ ಮಾಡಿದೆ. ಪ್ರಾದೇಶಿಕ ಆಯುಕ್ತರ ಮೂಲಕ ಆಯಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಕ್ಕೆ ಕಂದಾಯ ಇಲಾಖೆ ನಿರ್ಧಾರ ಮಾಡಿದೆ. ರಾಜ್ಯದಲ್ಲಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದವರು ಹಾಗೂ ಅವರ ಮೂಲ ಶಾಲಾ ದಾಖಲಾತಿ ಪರಿಶೀಲನೆ ಮಾಡಿ ವರದಿ ನೀಡುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಿಂದ ಪ್ರಾದೇಶಿಕ ಅಸಯುಕ್ತರಿಗೆ ಪತ್ರ ಬರೆಯಲಾಗಿದೆ. ಹೀಗಾಗಿ ಸರ್ಕಾರದ ನಿರ್ಧಾರದಿಂದಾಗಿ ರೇಣುಕಾಚಾರ್ಯ ಕುಟುಂಬಕ್ಕೆ ಸಂಕಷ್ಟಕ್ಕೆ ಸಿಲುಕಿದೆ.
ರೇಣುಕಾಚಾರ್ಯ ಸಹೋದರ ಎಂ.ಪಿ.ದ್ವಾರಕೇಶ್ವರಯ್ಯ, ರೇಣುಕಾಚಾರ್ಯ ಪುತ್ರಿ ಚೇತನಾ ಬೇಡ ಜಂಗಮ ಎಸ್ಸಿ ಪ್ರಮಾಣ ಪತ್ರ ಪಡೆದಿದ್ದಾರೆ. ಮೂಲ ಶಾಲಾ ದಾಖಲಾತಿಗಳಲ್ಲಿ ಹಿಂದು ಲಿಂಗಾಯತ ಜಾತಿ. ರಾಜ್ಯದ ಬಹುತೇಕ ಕಡೆ ದಲಿತ ಸಂಘಟನೆಗಳ ಹೋರಾಟದ ಹಿನ್ನೆಲೆ ಕಂದಾಯ ಇಲಾಖೆ ದಿಟ್ಟ ನಿರ್ಧಾರಕ್ಕೆ ಮುಂದಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಶಾಲೆಯೊಂದರಲ್ಲಿ ಬೈಬಲ್ ಕಡ್ಡಾಯ ಆರೋಪ; ಕ್ರಮದ ಭರವಸೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ರಜೆಯ ಮೂಡ್ನಲ್ಲಿ ‘ಕೆಜಿಎಫ್ 2’ ತಂಡ; ವೈರಲ್ ಆಗುತ್ತಿವೆ ಫೋಟೋಗಳು
Published On - 7:19 am, Mon, 25 April 22