AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್ ಅಪಹರಣ: 5 ಲಕ್ಷಕ್ಕೆ ಬೇಡಿಕೆ, ರೌಡಿಶೀಟರ್ ಸೇರಿ ಐವರ ಬಂಧನ

Bangalore Crime: ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್‌ನನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ, ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ 5 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ರೌಡಿಶೀಟರ್ ಸೇರಿ ಐವರನ್ನು ಬಂಧಿಸಲಾಗಿದೆ.

ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್ ಅಪಹರಣ: 5 ಲಕ್ಷಕ್ಕೆ ಬೇಡಿಕೆ, ರೌಡಿಶೀಟರ್ ಸೇರಿ ಐವರ ಬಂಧನ
ರೌಡಿಶೀಟರ್ ಸೇರಿ ಐವರ ಬಂಧನImage Credit source: tv9
ರಾಚಪ್ಪಾಜಿ ನಾಯ್ಕ್
| Edited By: |

Updated on: Jul 15, 2026 | 11:01 AM

Share

ಮುಖ್ಯಾಂಶಗಳು

  • ಸಿಸಿಬಿ ಪೊಲೀಸರ ಸೋಗಿನಲ್ಲಿ ಅಪಹರಣ ಆರೋಪ
  • 5 ಲಕ್ಷಕ್ಕೆ ಹಣ ಬೇಡಿಕೆ ಇಟ್ಟ ಗ್ಯಾಂಗ್
  • ರೌಡಿಶೀಟರ್ ಸೇರಿ ಐವರು ಪೊಲೀಸ್ ವಶಕ್ಕೆ

ಬೆಂಗಳೂರು, ಜುಲೈ 15: ಬೆಂಗಳೂರು (Bengaluru) ನಗರದಲ್ಲಿ ಸಿಸಿಬಿ ಪೊಲೀಸರ (CCB Police) ಸೋಗಿನಲ್ಲಿ ಜಿಮ್ ಟ್ರೈನರ್‌ನನ್ನು ಅಪಹರಿಸಿ ಹಣ ವಸೂಲಿ ಮಾಡಲು ಯತ್ನಿಸಿದ್ದ ಗ್ಯಾಂಗ್‌ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ರೌಡಿಶೀಟರ್ ತ್ರಿವೇಣ್ ಕುಮಾರ್ ಅಲಿಯಾಸ್ ತಿರುಮಲ ಸೇರಿದಂತೆ ಐವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜಿಮ್ ಟ್ರೈನರ್ ಮಿಥುಲ್ ಆಟೋದಲ್ಲಿ ತೆರಳುತ್ತಿದ್ದ ವೇಳೆ, ‘ನಾವು ಸಿಸಿಬಿ ಪೊಲೀಸರು’ ಎಂದು ಪರಿಚಯಿಸಿಕೊಂಡ ಆರೋಪಿಗಳು ಅವರನ್ನು ಬಲವಂತವಾಗಿ ಕಾರಿಗೆ ಎಳೆದುಕೊಂಡು ಹೋಗಿದ್ದರು. ಬಳಿಕ, ‘500 ಕೆಜಿ ಗಾಂಜಾ ತರಿಸಿದ್ದೀಯಾ’ ಎಂದು ಬೆದರಿಸಿ, ಅವರ ಮೊಬೈಲ್ ಹಾಗೂ ಬ್ಯಾಗ್ ಕಸಿದುಕೊಂಡಿದ್ದರು.

ಪೊಲೀಸ್ ಠಾಣೆಯೊಳಕ್ಕೇ ಹೋಗಿ ಬಂದಿದ್ದ ಆರೋಪಿಗಳು!

ಇದಾದ ಬಳಿಕ, ಎಲ್‌ಎಸ್‌ಡಿ ಸ್ಟ್ರಿಪ್ಸ್ ಇಟ್ಟು ಫೋಟೋ ತೆಗೆದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ನಾಟಕೀಯವಾಗಿ ಜೆ.ಪಿ.ನಗರ ಪೊಲೀಸ್ ಠಾಣೆ ಬಳಿ ಕಾರು ನಿಲ್ಲಿಸಿ, ಇಬ್ಬರು ಆರೋಪಿಗಳು ಠಾಣೆಯೊಳಗೆ ಹೋಗಿ ಬಂದು, ‘ಸಾಹೇಬರು ಬ್ಯುಸಿಯಾಗಿದ್ದಾರೆ’ ಎಂದು ಹೇಳುವ ಮೂಲಕ ತಮ್ಮನ್ನು ನಿಜವಾದ ಪೊಲೀಸ್ ಅಧಿಕಾರಿಗಳೆಂದು ನಂಬಿಸುವ ಪ್ರಯತ್ನ ಮಾಡಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಸಂತ್ರಸ್ತನನ್ನು 4 ಗಂಟೆ ಕಾರಿನಲ್ಲಿ ಬೆಂಗಳೂರಿನ ವಿವಿಧೆಡೆ ಸುತ್ತಾಡಿಸಿದ್ದ ಆರೋಪಿಗಳು

ಆರೋಪಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ಮಿಥುಲ್ ಅವರನ್ನು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಕಾರಿನಲ್ಲಿ ಸುತ್ತಾಡಿಸಿ, 5 ಲಕ್ಷ ರೂಪಾಯಿ ನೀಡದಿದ್ದರೆ ಡ್ರಗ್ಸ್ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಸಂಬಂಧ ಜೂನ್ 22ರಂದು ಶಂಕರಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

ಬಂಧಿತರನ್ನು ರೌಡಿಶೀಟರ್ ತ್ರಿವೇಣ್ ಕುಮಾರ್ ಅಲಿಯಾಸ್ ತಿರುಮಲ, ರಂಜಿತ್ ರಾವ್, ನಮಿತ್, ಪ್ರೇಮ್ ಸಾಯಿ ಹಾಗೂ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಈ ಹಿಂದೆಯೂ ಕೊಲೆ, ಕೊಲೆಯತ್ನ, ದರೋಡೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ