AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಬಯಲಾಯ್ತು ಖೋಟಾ ನೋಟು ಜಾಲ: 21.68 ಲಕ್ಷ ರೂ. ನಕಲಿ ಕಂತೆ, 17 ಪ್ರಿಂಟಿಂಗ್ ಮಷಿನ್ ಜಪ್ತಿ!

ಬೆಂಗಳೂರಿನಲ್ಲಿ ಖೋಟಾ ನೋಟು ಮುದ್ರಿಸುವ ಬಹು ದೊಡ್ಡ ಜಾಲವೊಂದು ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಜಾಲವು ವಿವಿಧ ರಾಜ್ಯಗಳಲ್ಲಿಯೂ ಹಬ್ಬಿದೆ ಎನ್ನುವುದು ಬೆಳಕಿಗೆ ಬಂದಿದೆ. ಈ ವೇಳೆ 500 ರೂ. ಮುಖಬೆಲೆಯ 4,337 ನಕಲಿ ನೋಟುಗಳು ಪತ್ತೆಯಾಗಿದ್ದಲ್ಲದೆ, ತಮಿಳುನಾಡಿನಲ್ಲಿ ಹೆಚ್ಚುವರಿ 6 ಲಕ್ಷ ರೂ. ಮೌಲ್ಯದ ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದೆ.

ಬೆಂಗಳೂರಲ್ಲಿ ಬಯಲಾಯ್ತು ಖೋಟಾ ನೋಟು ಜಾಲ: 21.68 ಲಕ್ಷ ರೂ. ನಕಲಿ ಕಂತೆ, 17 ಪ್ರಿಂಟಿಂಗ್ ಮಷಿನ್ ಜಪ್ತಿ!
ವಶಕ್ಕೆ ಪಡೆಯಲಾದ ಖೋಟಾ ನೋಟುಗಳ ಕಂತೆ
ವಿಕಾಸ್​ ಬಿಎಂ
| Edited By: |

Updated on:Oct 02, 2026 | 7:44 AM

Share

ಮುಖ್ಯಾಂಶಗಳು

  • ಮೈಸೂರು ರೋಡ್ ಫ್ಲೈಓವರ್ ಬಳಿ ಇಬ್ಬರು ಖೋಟಾ ನೋಟು ಆರೋಪಿಗಳು ಸಿಕ್ಕಿಬಿದ್ದರು.
  • ತಮಿಳುನಾಡಿನಲ್ಲಿ 17 ಪ್ರಿಂಟಿಂಗ್ ಯಂತ್ರಗಳು ಹಾಗೂ ನಕಲಿ ನೋಟುಗಳು ಪತ್ತೆಯಾಗಿವೆ.
  • ಒಟ್ಟು ಏಳು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

ಬೆಂಗಳೂರು, ಅಕ್ಟೋಬರ್ 02: ನಗರದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ಮುದ್ರಿಸಿ ಚಲಾವಣೆಗೆ ಹೊಂಚು ಹಾಕಿದ್ದ ಬೃಹತ್ ಅಂತರರಾಜ್ಯ ಜಾಲವೊಂದನ್ನು ಭೇದಿಸುವಲ್ಲಿ ಚಾಮರಾಜಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಕಲಿ ನೋಟುಗಳು ಹಾಗೂ ಪ್ರಿಂಟಿಂಗ್ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೈಸೂರು ರೋಡ್ ಫ್ಲೈಓವರ್ ಬಳಿ ಸಿಕ್ಕಿಬಿದ್ದ ಆರೋಪಿಗಳು

ಮೈಸೂರು ರಸ್ತೆಯ ಫ್ಲೈಓವರ್ ಬಳಿಯಿರುವ ಪೆಟ್ರೋಲ್ ಬಂಕ್‌ ಬಳಿ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡು ಚಲಾವಣೆಗೆ ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದರು. ಕಾರನ್ನು ಪರಿಶೀಲಿಸಿದಾಗ 500 ರೂಪಾಯಿ ಮುಖಬೆಲೆಯ 4,337 ನಕಲಿ ನೋಟುಗಳು ಪತ್ತೆಯಾಗಿದ್ದು, ಇವುಗಳ ಒಟ್ಟು ಮೌಲ್ಯ 21,68,500 ರೂಪಾಯಿ ಎಂದು ಅಂದಾಜಿಸಲಾಗಿದೆ.

ತಮಿಳುನಾಡು, ತೆಲಂಗಾಣಕ್ಕೆ ವಿಸ್ತರಿಸಿದ್ದ ನೆಟ್‌ವರ್ಕ್!

ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಈ ಖೋಟಾ ನೋಟು ಜಾಲದ ಹಿಂದೆ ದೊಡ್ಡ ಅಂತರರಾಜ್ಯ ನೆಟ್‌ವರ್ಕ್ ಇರುವುದು ಬೆಳಕಿಗೆ ಬಂದಿದೆ. ತಮಿಳುನಾಡಿನ ಕೃಷ್ಣಗಿರಿ ಹಾಗೂ ತೆಲಂಗಾಣ ಭಾಗಗಳಲ್ಲಿ ತನಿಖೆ ನಡೆಸಿದ ಪೊಲೀಸರಿಗೆ ನಕಲಿ ನೋಟು ಮುದ್ರಿಸುತ್ತಿದ್ದ ಜಾಗದ ಮಾಹಿತಿ ಲಭಿಸಿತ್ತು. ತಮಿಳುನಾಡಿನ ಪ್ರಿಂಟಿಂಗ್ ಅಡ್ಡ ಮೇಲಿನ ದಾಳಿ ವೇಳೆ 17 ಪ್ರಿಂಟಿಂಗ್ ಮಷಿನ್‌ಗಳು, ಕಾಗದಗಳು, ನೋಟಿನ ಸ್ಟ್ರಿಪ್ಸ್‌‌ ಹಾಗೂ ಪ್ರಿಂಟಿಂಗ್ ಜಾಗದಲ್ಲಿದ್ದ ಹೆಚ್ಚುವರಿ 6 ಲಕ್ಷ ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದೆ.

LIVE TV

ತಲೆಮರೆಸಿಕೊಂಡವರಿಗೆ ಶೋಧ

ಪ್ರಕರಣದಲ್ಲಿ ಸತ್ಯಂ, ಮುರುಗೇಶ್, ಗೋವಿಂದನ್, ಬರ್ಕತ್, ಸರವಣನ್, ಲಕ್ಷ್ಮಣ ಹಾಗೂ ಕೃಷ್ಣ ಎಂಬ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ವೇಳೆ ಒಂದು ಕಾರು ಹಾಗೂ 8 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್. ಅವರು ಮಾಹಿತಿ ನೀಡಿದ್ದು, ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ತಲೆಮರೆಸಿಕೊಂಡಿರುವ ಉಳಿದ ನಾಲ್ವರು ಆರೋಪಿಗಳಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 am, Fri, 2 October 26

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR