AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಖರೀದಿ ಪ್ರಕರಣ; ಭೈರತಿ ಬಸವರಾಜ್​, ಶಂಕರ್ ವಿರುದ್ಧದ ಸಮನ್ಸ್‌ಗೆ ತಡೆ ಮುಂದುವರಿಕೆ

ಸಚಿವ ಭೈರತಿ ಬಸವರಾಜ್​ ಅವರು ಎನ್​ಆರ್​ಐ ಲೇಜೌಟ್​ನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 22 ಎಕರೆ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಈ ಹಿಂದೆ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ನ್ಯಾಯಾಲಯ ವಿಚಾರಣೆ ಶುರು ಮಾಡಿತ್ತು. ಸದ್ಯ ನ್ಯಾ.ಸುನಿಲ್ ದತ್ ಯಾದವ್‌ರವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆಯಾಜ್ಞೆ ವಿಸ್ತರಣೆ ಮಾಡಿದೆ.

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಖರೀದಿ ಪ್ರಕರಣ; ಭೈರತಿ ಬಸವರಾಜ್​, ಶಂಕರ್ ವಿರುದ್ಧದ ಸಮನ್ಸ್‌ಗೆ ತಡೆ ಮುಂದುವರಿಕೆ
ಸಚಿವ ಭೈರತಿ ಬಸವರಾಜ್
TV9 Web
| Updated By: preethi shettigar|

Updated on:Jan 25, 2022 | 4:47 PM

Share

ಬೆಂಗಳೂರು: ನಕಲಿ ದಾಖಲೆ (Fake documents) ಸೃಷ್ಟಿಸಿ ಭೂಮಿ(Land) ಖರೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭೈರತಿ ಬಸವರಾಜ್(Byrathi Basavaraj)​ ಮತ್ತು ಶಂಕರ್‌ಗೆ ಸದ್ಯ ನಿರಾಳತೆ ದೊರೆತಿದೆ. ಭೈರತಿ ಬಸವರಾಜ್​,‌ ಶಂಕರ್ ವಿರುದ್ಧದ ಸಮನ್ಸ್‌ಗೆ ತಡೆ ಮುಂದುವರಿಕೆಯಾಗಲಿದೆ ಎಂದು ನ್ಯಾ.ಸುನಿಲ್ ದತ್ ಯಾದವ್‌ರವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರ್ಜಿ ವಿಚಾರಣೆ ಫೆಬ್ರವರಿ 2ನೇ ವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. ಎಸಿಎಂಎಂ ನ್ಯಾಯಾಲಯ ಅಲ್ಲಿಯವರೆಗೆ ಸಮನ್ಸ್ ಆದೇಶಕ್ಕೆ ತಡೆಯಾಜ್ಞೆ ವಿಸ್ತರಣೆಯಾಗಿದೆ ಎಂದು ತಿಳಿಸಿದೆ.

ಸಚಿವ ಭೈರತಿ ಬಸವರಾಜ್​ ಅವರು ಎನ್​ಆರ್​ಐ ಲೇಜೌಟ್​ನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 22 ಎಕರೆ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಈ ಹಿಂದೆ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ನ್ಯಾಯಾಲಯ ವಿಚಾರಣೆ ಶುರು ಮಾಡಿತ್ತು. ಸದ್ಯ ನ್ಯಾ.ಸುನಿಲ್ ದತ್ ಯಾದವ್‌ರವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆಯಾಜ್ಞೆ ವಿಸ್ತರಣೆ ಮಾಡಿದೆ.

ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಬಾರದು: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ

ಸರ್ಕಾರ, ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಬಾರದು. ನಾವು ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆಯೇ ಇಲ್ಲ. ಹೈಕಮಾಂಡ್ ಸಂಪುಟ ಪುನಾರಚನೆ ಬಗ್ಗೆ ನಿರ್ಧರಿಸುತ್ತೆ. ಬಿಜೆಪಿಯಲ್ಲಿ ಎಲ್ಲರೂ ಶಿಸ್ತು ಅನುಸರಿಸಬೇಕು. ಸಿಎಂ, ಅಧ್ಯಕ್ಷರು, ಶಾಸಕರಿಗೆ ಬೇರೆ ಶಿಸ್ತು ಅಂತಾ ಇಲ್ಲ. ಬಿಜೆಪಿಯಲ್ಲಿ ಶಿಸ್ತು ಉಲ್ಲಂಘನೆ ಸಹಿಸಲ್ಲ ಎಂದು ಬಿಜೆಪಿ ಶಾಸಕರಿಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದ್ದಾರೆ.

ಯಾರೂ ಕೂಡ ಬಹಿರಂಗ ಹೇಳಿಕೆಯನ್ನು ನೀಡಬಾರದು. ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ಬಹಿರಂಗವಾಗಿ ಮಾತನಾಡುವವರ ಜತೆ ಮಾತಾಡುತ್ತೇನೆ. ಶಿಸ್ತು ಸಮಿತಿ ಮೂಲಕ‌ ಕೇಂದ್ರಕ್ಕೆ ವರದಿ ಸಲ್ಲಿಸಿ ಕ್ರಮ ಕೈಗೊಳ್ಳುತ್ತೇವೆ. ಕೆಲವರಿಗೆ ಈಗಾಗಲೇ ಸ್ಪಷ್ಟೀಕರಣ ಕೇಳಿದ್ದು ಕೊಟ್ಟಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಹೇಳಿಕೆ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿದ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಜಿಲ್ಲೆಯಲ್ಲಿ ಅದೇ ಜಿಲ್ಲೆಯವರು ಇರುವುದಿಲ್ಲ. ಇದು ನಮ್ಮ ಪಕ್ಷದಲ್ಲಿ ಇರುವ ನಿಯಮ. ಅದನ್ನೇ ರಾಜ್ಯದಲ್ಲಿ ಕೂಡ ಅನುಷ್ಠಾನ ಮಾಡಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲ, ಸಿಎಂ ಬಸವರಾಜ ಬೊಮ್ಮಾಯಿ ಅವಧಿ ಪೂರ್ಣ ಮಾಡ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಬೊಮ್ಮಾಯಿ‌ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ ಪಕ್ಷ, ಸರ್ಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಮೊದಲು ಬಿಜೆಪಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ, ಬಸನಗೌಡ ಪಾಟೀಲ ಯತ್ನಾಳ್, ತಿಪ್ಪಾರೆಡ್ಡಿ ಸಹಿತ ಕೆಲವರು ಸಚಿವ ಸ್ಥಾನದ ಆಕಾಂಕ್ಷೆಯ ಬಗ್ಗೆ ದನಿ ಎತ್ತಿದ್ದರು. ಸಚಿವ ಸಂಪುಟ ವಿಸ್ತರಣೆ ಆಗಬೇಕು, ಹೊಸ ಮುಖಗಳಿಗೆ ಮಣೆ ಹಾಕಬೇಕು ಎಂದು ಬಯಸಿದ್ದರು. ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಸರ್ಕಾರ ಸಂಪುಟ ರಚನೆ ಮಾಡಬೇಕು ಎಂದು ಹೇಳಿಕೆಗಳನ್ನು ಕೊಡುತ್ತಿದ್ದರು. ಇದರಿಂದ ಪಕ್ಷ ಮುಜುಗರ ಎದುರಿಸುವಂತೆ ಆಗಿತ್ತು. ಇದೀಗ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

ಬಿಜೆಪಿ ಮುಖಂಡನಿಂದ ರೈತನಿಗೆ ಜಮೀನು ಖರೀದಿಯಲ್ಲಿ ಮೋಸ ಆರೋಪ; ರೈತನಿಗೆ ನ್ಯಾಯ ಕೊಡಿಸಲು ಮನೆ ಮುಂದೆ ಪ್ರತಿಭಟನೆ

ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ನೀಡಲಾಗುವ ನಿವೇಶನಗಳಲ್ಲಿ ಶೇ. 5ರಷ್ಟು ಪತ್ರಕರ್ತರಿಗೆ ಮೀಸಲು; ಸಚಿವ ಭೈರತಿ ಬಸವರಾಜ್

Published On - 4:42 pm, Tue, 25 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ