AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fake Medicine Racket: ರಾಮನಗರ ನಕಲಿ ಔಷಧ ಜಾಲ; ಸಂಪೂರ್ಣ ತನಿಖೆಗೆ ಗೃಹ ಇಲಾಖೆ ಮೊರೆ ಹೋದ SIT!

ರಾಮನಗರದ ದೊಡ್ಡೇರಿ ಫಾರ್ಮ್‌ಹೌಸ್ ನಕಲಿ ಔಷಧ ಜಾಲದ ಪ್ರಕರಣ ದಿನಕ್ಕೊಂದು ಹೊಸ ಮೈಲಿಗಲ್ಲು ತಲುಪುತ್ತಿದೆ. ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಸರ್ಕಾರ ಎಸ್‌ಐಟಿ ನೇಮಿಸಿದೆಯಾದರೂ, ಔಷಧ ಕಾಯ್ದೆಯಡಿ ತನಿಖೆ ನಡೆಸಲು ಇರುವ ಕಾನೂನು ತೊಡಕನ್ನು ನಿವಾರಿಸಲು ಎಸ್‌ಐಟಿ ಅಧಿಕಾರಿಗಳು ಈಗ ಗೃಹ ಇಲಾಖೆಯ ಮೊರೆ ಹೋಗಿದ್ದಾರೆ.

Fake Medicine Racket: ರಾಮನಗರ ನಕಲಿ ಔಷಧ ಜಾಲ; ಸಂಪೂರ್ಣ ತನಿಖೆಗೆ ಗೃಹ ಇಲಾಖೆ ಮೊರೆ ಹೋದ SIT!
ಸಂಪೂರ್ಣ ತನಿಖೆಗೆ ಗೃಹ ಇಲಾಖೆ ಮೊರೆ ಹೋದ SIT!
ಶಿವಪ್ರಸಾದ್​ ಬಿ.
| Edited By: |

Updated on: Aug 22, 2026 | 11:23 AM

Share

ಮುಖ್ಯಾಂಶಗಳು

  • ನಕಲಿ ಔಷಧ ಪ್ರಕರಣದ ಸಂಪೂರ್ಣ ತನಿಖೆಗೆ ಗೃಹ ಇಲಾಖೆಗೆ ಎಸ್‌ಐಟಿ ಪತ್ರ.
  • ಔಷಧ ಕಾಯ್ದೆಯಡಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
  • ಪೋರ್ಟರ್ ಆ್ಯಪ್ ಬಳಸಿ ಫಾರ್ಮ್‌ಹೌಸ್‌ನಿಂದ ನಕಲಿ ಔಷಧಗಳನ್ನು ಸರಬರಾಜು ಮಾಡಲಾಗುತ್ತಿತ್ತು.

ಬೆಂಗಳೂರು, ಆಗಸ್ಟ್ 22: ರಾಮನಗರದ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾದ ನಕಲಿ ಔಷಧದ ಬೃಹತ್ ಜಾಲದ ತನಿಖೆ ದಿನಕ್ಕೊಂದು ಮೈಲಿಗಲ್ಲು ತಲುಪುತ್ತಿದೆ. ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಸರ್ಕಾರ ಎಸ್‌ಐಟಿ (SIT) ರಚಿಸಿದೆಯಾದರೂ, ಕಾನೂನು ತೊಡಕುಗಳು ಎದುರಾಗಿವೆ. ಹೀಗಾಗಿ ಔಷಧ ಸಂಬಂಧಿತ ಅಪರಾಧಗಳ ಸಂಪೂರ್ಣ ತನಿಖೆಗೆ ವಿಶೇಷ ಅಧಿಕಾರ ಕೋರಿ ಗೃಹ ಇಲಾಖೆಗೆ ಪತ್ರ ಬರೆಯಲು ಎಸ್‌ಐಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಗೃಹ ಇಲಾಖೆಯ ಅನುಮತಿ ಕೋರಲು ಎಸ್‌ಐಟಿ ನಿರ್ಧಾರ

ನಿನ್ನೆ ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಎಸ್‌ಐಟಿಗೆ ಕೇವಲ ದೂರಿನ ಆಧಾರದಲ್ಲಿ ಶಂಕಿತರ ವಿರುದ್ಧ ಕ್ರಮ ಕೈಗೊಳ್ಳಲಷ್ಟೇ ಅವಕಾಶವಿದೆ. ನಿಯಮಗಳ ಪ್ರಕಾರ ‘ಔಷಧ ಮತ್ತು ಕಾಸ್ಮೆಟಿಕ್ಸ್ ಕಾಯ್ದೆ’ಯಡಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುವ ಅಧಿಕಾರ ಡ್ರಗ್ ಕಂಟ್ರೋಲ್ ಬೋರ್ಡ್‌ಗೆ (Drug Control Board) ಮಾತ್ರ ಇರುತ್ತದೆ.

ಆದರೆ ಈ ನಕಲಿ ಔಷಧ ಜಾಲದ ಅಪರಾಧಕ್ಕೆ ಕಾನೂನಿನಲ್ಲಿ ಜೀವಾವಧಿ ಶಿಕ್ಷೆಯವರೆಗೂ ಅವಕಾಶವಿದೆ. ಪ್ರಕರಣವು ಅತ್ಯಂತ ಗಂಭೀರವಾಗಿರುವುದರಿಂದ, ತಮಗೇ ಸಂಪೂರ್ಣವಾಗಿ ತನಿಖೆ ನಡೆಸಲು ವಿಶೇಷ ಅಧಿಕಾರ ನೀಡುವಂತೆ ಕೋರಿ ಎಸ್‌ಐಟಿ ಗೃಹ ಇಲಾಖೆಗೆ ಮನವಿ ಸಲ್ಲಿಸಲಿದೆ.

‘ಪೋರ್ಟರ್’ ಆ್ಯಪ್ ಮೂಲಕ ಸಪ್ಲೈ, ಫಾರ್ಮ್‌ಹೌಸ್ ದಾಳಿ!

ಈ ಪ್ರಕರಣದಲ್ಲಿ ಮುಖ್ಯ ಸೂತ್ರಧಾರ ಪ್ರಶಾಂತ್ ವಿರುದ್ಧ ಈಗಾಗಲೇ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಆರೋಪಿಗಳು ಖಾಸಗಿ ‘ಪೋರ್ಟರ್’ (Porter) ಆ್ಯಪ್ ಬಳಸಿ, ಬೆಂಗಳೂರಿನಲ್ಲಿ ಕುಳಿತು ರಾಮನಗರದ ಫಾರ್ಮ್‌ಹೌಸ್‌ನಿಂದ ಪ್ರತಿ ವಾರ ಸುಮಾರು 100 ಬಾಟಲಿ ನಕಲಿ ಔಷಧಗಳನ್ನು ಸರಬರಾಜು ಮಾಡುತ್ತಿದ್ದರು.

ಇದನ್ನೂ ಓದಿ Fake Medicine: ರಾಮನಗರ ನಕಲಿ ಔಷಧ ಜಾಲ: ಪೋರ್ಟರ್’ ಆ್ಯಪ್ ಮೂಲಕ ನಡೆಯುತ್ತಿತ್ತು ಸಪ್ಲೈ!

ವಾರದಲ್ಲಿ 2-3 ಬಾರಿ ರಹಸ್ಯವಾಗಿ ಕಾರುಗಳು ಬಂದು ಹೋಗುತ್ತಿದ್ದ ಈ ಫಾರ್ಮ್‌ಹೌಸ್ ಬಗ್ಗೆ ಸ್ಥಳೀಯರಿಗೆ ಅನುಮಾನ ಮೂಡಿತ್ತು. ಯಾರೂ ಒಳಗೆ ಬರದಂತೆ ಕ್ರೂರ ತಳಿಯ ನಾಯಿಯನ್ನು ಸಾಕಲಾಗಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದಾಗ ಈ ದಂಧೆ ಬಯಲಿಗೆ ಬಂದಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ