AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಬಳಿಕ ಬೆಂಗಳೂರಿನಲ್ಲಿಯೂ ನಕಲಿ ತುಪ್ಪ ಪತ್ತೆ; ಕೆಎಂಎಫ್ ಅಧಿಕಾರಿಗಳಿಂದ ಪರಿಶೀಲನೆ

ನಗರದ ಹನುಮಂತನಗರ, ಜಯನಗರ, ರಾಜಾಜಿನಗರ ನೆಲಮಂಗಲ ಬಳಿಯ ಮಾಕಳಿ, ಹೊಸಕೋಟೆಯ ದೇವನಗೊಂದಿ ಹಾಗೂ ಇನ್ನಿತರ ಕಡೆಗಳಲ್ಲಿ ಕೆಎಂಎಫ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾರಾಟದ ಅಂಗಡಿಗಳು ಮತ್ತು ಗೋದಾಮುಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಬಳಿಕ ಬೆಂಗಳೂರಿನಲ್ಲಿಯೂ ನಕಲಿ ತುಪ್ಪ ಪತ್ತೆ; ಕೆಎಂಎಫ್ ಅಧಿಕಾರಿಗಳಿಂದ ಪರಿಶೀಲನೆ
ನಕಲಿ ನಂದಿನಿ ತುಪ್ಪ
Follow us
TV9 Web
| Updated By: preethi shettigar

Updated on: Jan 28, 2022 | 9:49 AM

ಬೆಂಗಳೂರು: ನಕಲಿ ತುಪ್ಪ (Ghee) ಪ್ರಕರಣ ಮೈಸೂರು ಬಳಿಕ ಬೆಂಗಳೂರು ನಗರದಲ್ಲಿ ಕಂಡುಬಂದಿದೆ. ನಗರದಲ್ಲಿ ನಕಲಿ ತುಪ್ಪದ ಜಾಲ ಪತ್ತೆ ಹಚ್ಚಿದ ಕೆಎಂಎಫ್(KMF) ಅಧಿಕಾರಿಗಳು, ಮೈಸೂರಿನಲ್ಲಿ ಉತ್ಪಾದಿಸಲ್ಪಟ್ಟ ನಕಲಿ ತುಪ್ಪ ಬೆಂಗಳೂರು ಹಾಗೂ ಸುತ್ತಮುತ್ತ ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಪರಿಶೀಲನೆ ವೇಳೆ ನಕಲಿ ಹಾವಳಿ ಬಯಲಾಗಿದೆ. ಬೆಂಗಳೂರಿನಲ್ಲಿ ನಕಲಿ ತುಪ್ಪದ ಬಗ್ಗೆ ಸಂಶಯಗೊಂಡಿದ್ದ ಅಧಿಕಾರಿಗಳು, ನಕಲಿ ತುಪ್ಪ ಪತ್ತೆಗಾಗಿ ಹಲವು ತಂಡಗಳನ್ನು ಕೆಎಂಎಫ್ ರಚನೆ ಮಾಡಿದೆ. ಹೀಗಾಗಿ ಬೆಂಗಳೂರು ನಗರ ಸೇರಿ ಹತ್ತಾರು ಕಡೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ನಗರದ ಹನುಮಂತನಗರ, ಜಯನಗರ, ರಾಜಾಜಿನಗರ ನೆಲಮಂಗಲ ಬಳಿಯ ಮಾಕಳಿ, ಹೊಸಕೋಟೆಯ ದೇವನಗೊಂದಿ ಹಾಗೂ ಇನ್ನಿತರ ಕಡೆಗಳಲ್ಲಿ ಕೆಎಂಎಫ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾರಾಟದ ಅಂಗಡಿಗಳು ಮತ್ತು ಗೋದಾಮುಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಎಫ್​ಎಸ್​ಎಸ್​ಎಐ ಮತ್ತು ಸ್ಥಳೀಯ ಪೊಲೀಸರ ಜೊತೆಗೂಡಿ ಕೆಎಂಎಫ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ನಂದಿನಿ ತುಪ್ಪದ 1000 ಮಿಲಿ ಸ್ಯಾಚಿ ಹಾಗೂ 15 ಕೆಜಿ ತೂಕದ ಟಿನ್​ಗಳ ಪರಿಶೀಲನೆ ನಡೆಸಿದ್ದಾರೆ. ಬಳಿಕ 1000 ಮಿಲಿ ಸ್ಯಾಚಿ ಮಾದರಿಯನ್ನು ಎಫ್​ಎಸ್​ಎಸ್​ಎಐಗೆ ರವಾನೆ ಮಾಡಿದ್ದಾರೆ.

ಅದೇ ರೀತಿ ಮತ್ತೊಂದು ಮಾದರಿಯನ್ನು ಕೆಎಂಎಫ್ ಗುಣ ಭರವಸೆ ವಿಭಾಗದಲ್ಲಿ ಪರಿಶೀಲನೆ ವೇಳೆ ನಕಲಿ ತುಪ್ಪ ಎಂಬುವುದು ಪತ್ತೆಯಾಗಿದೆ. ಕೆಎಂಎಫ್ ಅಧಿಕಾರಿಗಳ ಪರಿಶೀಲನೆ ವೇಳೆ ನಕಲಿ ತುಪ್ಪ ಬೆಳಕಿಗೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.

ಕೆಎಂಎಫ್ ಮಾರ್ಕೆಟಿಂಗ್ ವಿಭಾಗದ ಅಪರ ನಿರ್ದೇಶಕ ಬಿ. ಪಿ. ಸುರೇಶ್ ತುಪ್ಪ ಸಗಟು ಮಾರಾಟ ಮಾಡುವ ಸಂಸ್ಥೆ ಮೇಲೆ​ ದೂರು ನೀಡಿದ್ದಾರೆ. ಸುರೇಶ್ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿದ ಬಸವನಗುಡಿ ಪೊಲೀಸರು, ಕೇಸ್ ದಾಖಲಿಸಿ ನಕಲಿ ತುಪ್ಪದ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರಿನ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲು

ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ತುಪ್ಪ ಪೂರೈಕೆ ಮಾಡಿದ್ದ ಬೆಂಗಳೂರಿನ ಕೆಎಂಎಫ್ ಒಕ್ಕೂಟದ ಸಗಟು ಮಾರಾಟಗಾರ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ಶ್ರುತಿ ಮಾರ್ಕೆಟಿಂಗ್ ಕಾರ್ಪೊರೇಷನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಎಂಎಫ್ ಹೆಚ್ಚುವರಿ ನಿರ್ದೇಶಕ ಡಾ. ಬಿಪಿ ಸುರೇಶ್ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಮೈಸೂರು ಜಿಲ್ಲೆಯ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪದ ಗೋಡಾನ್ ಪತ್ತೆಯಾಗಿತ್ತು. ಸ್ಥಳೀಯರಿಗೆ ಮೊದಲು ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರಿಗೆ ಈ ಜಾಲದ ಬಗ್ಗೆ ಮಾಹಿತಿ ನೀಡಿದ್ದರು. ಡಿಸೆಂಬರ್ 16ರಂದು ಸ್ಥಳಕ್ಕೆ ಸಮಿತಿ ಸದಸ್ಯರು ಹೋಗಿ ಪರಿಶೀಲಿಸಿದಾಗ ನಕಲಿ ಜಾಲ ಪತ್ತೆಯಾಗಿತ್ತು. ಇಲ್ಲಿ ನಂದಿನ ತುಪ್ಪದ ಕವರ್ ತಯಾರಿಸುವ ಕೆಲಸ, ಅಸಲಿ ನಂದಿನಿ ತುಪ್ಪಕ್ಕೆ ಕಲಬೆರಕೆ ಮಾಡುವ ಕೆಲಸ ಹಾಗೂ ಟಿನ್​ಗಳಿಗೆ ತುಂಬುವ ಕೆಲಸ ಮಾಡಲಾಗುತಿತ್ತು.

ತಲಾ 15 ಕೆಜಿ ತೂಕದ ಸುಮಾರು 1,000 ಟಿನ್​ಗಳು ದೊರಕಿವೆ. ರಾಶಿಗಟ್ಟಲೆ ವನಸ್ಪತಿ, ಪಾಮ್ ಆಯಿಲ್, ಕಲರಿಂಗ್ ಕೆಮಿಕಲ್, ನಂದಿನಿ ಬ್ರ್ಯಾಂಡ್ ತುಪ್ಪದ ನಕಲಿ ಕವರ್, ಪ್ಯಾಕಿಂಗ್ ಯೂನಿಟ್ ಎಲ್ಲವನ್ನೂ ಕಂಡು ಸಮಿತಿ ಸದಸ್ಯರೂ ಅವಕ್ಕಾಗಿದ್ದಾರೆ. ಕೂಡಲೇ ಪೊಲೀಸರು, ಕರ್ನಾಟಕ ಹಾಲು ಉತ್ಪನ್ನಗಳ ಸಹಕಾರ ಒಕ್ಕೂಟ, ಫುಡ್ ಸೇಫ್ಟಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು.

 

ಇದನ್ನೂ ಓದಿ:

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಿನ್ನಿಸುವ ವ್ಯವಸ್ಥಿತ ಜಾಲವೊಂದು ಪತ್ತೆ; ವಿಡಿಯೋ ನೋಡಿ

ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಪ್ರಕರಣ; ಬೆಂಗಳೂರಿನ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲು