AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಪತ್ರ; ಎಫ್​ಐಆರ್​ ದಾಖಲು

ಇತ್ತೀಚಿಗೆ ರಾಜ್ಯದಲ್ಲಿ ನಕಲಿ ಪತ್ರದ ವಿಚಾರ ಸಾಕಷ್ಟು ಚರ್ಚೆಯಾಗಿತ್ತಿದೆ. ಸಚಿವರ ವಿರುದ್ಧ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದಾದ ಬೆನ್ನಲ್ಲೇ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಎರಡು ಪ್ರಕರಣಗಳು ತನಿಖೆಯಲ್ಲಿರುವಾಗಲೇ ಇದೀಗ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ಮಗದೊಂದು ನಕಲಿ ಆದೇಶ ಪತ್ರ ಬರೆದಯಲಾಗಿದೆ.

ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಪತ್ರ; ಎಫ್​ಐಆರ್​ ದಾಖಲು
ನಕಲಿ ಪತ್ರ
Jagadisha B
| Updated By: ವಿವೇಕ ಬಿರಾದಾರ|

Updated on: Aug 16, 2023 | 11:38 AM

Share

ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ ನಕಲಿ ಪತ್ರದ (Fake Letter) ವಿಚಾರ ಸಾಕಷ್ಟು ಚರ್ಚೆಯಾಗಿತ್ತಿದೆ. ಸಚಿವರು ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಶೀಘ್ರದಲ್ಲೇ ಶಾಸಕಾಂಗ ಸಭೆ ಕರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಬಿಆರ್ ಪಾಟೀಲ್​ (BR Patil) ಅವರು ಪತ್ರ ಬರೆದಿದ್ದಾರೆ ಎಂದು ಸುದ್ದಿಯಾಗಿತ್ತು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿತ್ತು. ಈ ಪತ್ರ ನನ್ನದಲ್ಲ ಇದು ನಕಲಿ ಪತ್ರ ಎಂದು ಬಿಆರ್​ ಪಾಟೀಲ್​​ ಹೇಳಿದ್ದರು. ಇದಾದ ಬೆನ್ನಲ್ಲೇ ಸಚಿವ ಚಲುವರಾಯಸ್ವಾಮಿ (Chaluvarayswamy) ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದ ವಿಷಯ ಮುನ್ನಲೆಗೆ ಬಂದಿತ್ತು. ಇದು ಕೂಡ ನಕಲಿ ಎಂದು ಆಢಳಿತಾರೂಡ ಪಕ್ಷದ ಶಾಸಕರು ಮತ್ತು ಸಚಿವರು ಹೇಳತೊಡಗಿದರು. ಈ ಎರಡು ಪ್ರಕರಣಗಳು ತನಿಖೆಯಲ್ಲಿರುವಾಗಲೇ ಇದೀಗ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಆದೇಶ ಪತ್ರ ಸೃಷ್ಠಿಯಾಗಿದೆ.

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಮ್ಮ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ನಕಲಿ ಪೆನ್ ಡ್ರೈವ್ ನಂತರ ನಕಲಿ ಪತ್ರದ ಮೊರೆ ಹೋದ ವಿಪಕ್ಷದ ಬೃಹಸ್ಪತಿಗಳು: ಕಾಂಗ್ರೆಸ್

ಆಯುಕ್ತರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಅಂತ ನಮೂದಿಸಿ, ಶಾಲೆಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಡುವ ಬಗ್ಗೆ ದೇಶಪಾಂಡೆ ಸರ್ವೀಸಸ್​ನಿಂದ ಖರೀದಿಸುವಂತೆ ರಾಜ್ಯದ ಎಲ್ಲ ಉಪನಿರ್ದೇಶಕರುಗಳಿಗೆ ಪ್ರಧಾನಕಾರ್ಯದರ್ಶಿ ಅವರ ಹೆಸರಿನಲ್ಲಿ ಮತ್ತು ನಕಲಿ ಸಹಿ ಹೊಂದಿದ ಆದೇಶ ಪತ್ರ ಬರೆಯಲಾಗಿದೆ. ಈ ನಕಲಿ ಆದೇಶವನ್ನು ದುರ್ಬಳಕೆ ಮಾಡಿಕೊಂಡು ವಂಚಿಸುವ ಸಾಧ್ಯತೆ ಹಿನ್ನಲೆಯಲ್ಲಿ ಈ ಪತ್ರವನ್ನು ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ