ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ ನಕಲಿ ಪತ್ರದ (Fake Letter) ವಿಚಾರ ಸಾಕಷ್ಟು ಚರ್ಚೆಯಾಗಿತ್ತಿದೆ. ಸಚಿವರು ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಶೀಘ್ರದಲ್ಲೇ ಶಾಸಕಾಂಗ ಸಭೆ ಕರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಬಿಆರ್ ಪಾಟೀಲ್ (BR Patil) ಅವರು ಪತ್ರ ಬರೆದಿದ್ದಾರೆ ಎಂದು ಸುದ್ದಿಯಾಗಿತ್ತು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿತ್ತು. ಈ ಪತ್ರ ನನ್ನದಲ್ಲ ಇದು ನಕಲಿ ಪತ್ರ ಎಂದು ಬಿಆರ್ ಪಾಟೀಲ್ ಹೇಳಿದ್ದರು. ಇದಾದ ಬೆನ್ನಲ್ಲೇ ಸಚಿವ ಚಲುವರಾಯಸ್ವಾಮಿ (Chaluvarayswamy) ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದ ವಿಷಯ ಮುನ್ನಲೆಗೆ ಬಂದಿತ್ತು. ಇದು ಕೂಡ ನಕಲಿ ಎಂದು ಆಢಳಿತಾರೂಡ ಪಕ್ಷದ ಶಾಸಕರು ಮತ್ತು ಸಚಿವರು ಹೇಳತೊಡಗಿದರು. ಈ ಎರಡು ಪ್ರಕರಣಗಳು ತನಿಖೆಯಲ್ಲಿರುವಾಗಲೇ ಇದೀಗ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಆದೇಶ ಪತ್ರ ಸೃಷ್ಠಿಯಾಗಿದೆ.
ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಮ್ಮ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: ನಕಲಿ ಪೆನ್ ಡ್ರೈವ್ ನಂತರ ನಕಲಿ ಪತ್ರದ ಮೊರೆ ಹೋದ ವಿಪಕ್ಷದ ಬೃಹಸ್ಪತಿಗಳು: ಕಾಂಗ್ರೆಸ್
ಆಯುಕ್ತರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಅಂತ ನಮೂದಿಸಿ, ಶಾಲೆಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಡುವ ಬಗ್ಗೆ ದೇಶಪಾಂಡೆ ಸರ್ವೀಸಸ್ನಿಂದ ಖರೀದಿಸುವಂತೆ ರಾಜ್ಯದ ಎಲ್ಲ ಉಪನಿರ್ದೇಶಕರುಗಳಿಗೆ ಪ್ರಧಾನಕಾರ್ಯದರ್ಶಿ ಅವರ ಹೆಸರಿನಲ್ಲಿ ಮತ್ತು ನಕಲಿ ಸಹಿ ಹೊಂದಿದ ಆದೇಶ ಪತ್ರ ಬರೆಯಲಾಗಿದೆ. ಈ ನಕಲಿ ಆದೇಶವನ್ನು ದುರ್ಬಳಕೆ ಮಾಡಿಕೊಂಡು ವಂಚಿಸುವ ಸಾಧ್ಯತೆ ಹಿನ್ನಲೆಯಲ್ಲಿ ಈ ಪತ್ರವನ್ನು ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ