ಡಿಸಿಎಂ ಡಿಕೆ ಶಿವಕುಮಾರ್​ ಲೆಟರ್​ ಹೆಡ್​ನಲ್ಲಿ ನಕಲಿ ಪತ್ರ ವೈರಲ್: ಎಫ್​ಐಆರ್ ದಾಖಲು

ಡಿಸಿಎಂ ಡಿಕೆ ಶಿವಕುಮಾರ್​​ ಲೆಟರ್​ ಹೆಡ್​ನಲ್ಲಿ ವೈರಲ್ ಆದ ನಕಲಿ ಪತ್ರದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಂ.ಎನ್.ರಾಜೇಂದ್ರ ಪ್ರಸಾದ್ ದೂರು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ. ಕರ್ನಾಟಕ ಸರ್ಕಾರದ ಲೆಟರ್ ಹೆಡ್ ಮತ್ತು ಡಿಕೆ ಶಿವಕುಮಾರ್​​ ಸಹಿ ನಕಲು ಮಾಡಿದ ಆರೋಪ ಕೇಳಿಬಂದಿದೆ.

ಡಿಸಿಎಂ ಡಿಕೆ ಶಿವಕುಮಾರ್​ ಲೆಟರ್​ ಹೆಡ್​ನಲ್ಲಿ ನಕಲಿ ಪತ್ರ ವೈರಲ್: ಎಫ್​ಐಆರ್ ದಾಖಲು
ನಕಲಿ ಪತ್ರ, ಡಿಸಿಎಂ ಡಿಕೆ ಶಿವಕುಮಾರ್​
Follow us
Jagadish PB
| Updated By: ಗಂಗಾಧರ​ ಬ. ಸಾಬೋಜಿ

Updated on: Nov 04, 2023 | 7:53 PM

ಬೆಂಗಳೂರು, ನವೆಂಬರ್​​​​ 04: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​​ ಲೆಟರ್​ ಹೆಡ್​ನಲ್ಲಿ ವೈರಲ್ ಆದ ನಕಲಿ ಪತ್ರದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಂ.ಎನ್.ರಾಜೇಂದ್ರ ಪ್ರಸಾದ್ ದೂರು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ. ಕರ್ನಾಟಕ ಸರ್ಕಾರದ ಲೆಟರ್ ಹೆಡ್ ಮತ್ತು ಡಿಕೆ ಶಿವಕುಮಾರ್​​ ಸಹಿ ನಕಲು ಮಾಡಿದ ಆರೋಪ ಕೇಳಿಬಂದಿದೆ. ಆ್ಯಪಲ್ ಏರ್​​ಪೋಡ್ ಉತ್ಪಾದನಾ ಘಟಕವನ್ನು ಹೈದರಾಬಾದ್​ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಬರೆದಿದ್ದ ನಕಲಿ ಪತ್ರ ವೈರಲ್​ ಆಗಿದೆ. ನಕಲಿ ಪತ್ರ ಸೃಷ್ಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಅಸಮಾಧಾನಿತ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಳಂದ ಶಾಸಕ ಬಿಆರ್ ಪಾಟೀಲ್​​ ಅವರ ಲೆಟರ್‌ಹೆಡ್‌ ಬಳಸಿ ಪತ್ರ ಬರೆದು ವೈರಲ್ ಮಾಡಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಶಾಸಕ ಬಿಆರ್ ಪಾಟೀಲ್, ನನ್ನ ಹಳೆಯ ಲೆಟರ್‌ಹೆಡ್‌ ಬಳಸಿ ಪತ್ರ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದು ಗಮನ ಸೆಳೆದ ಯುವಕ

ವಿಜಯಪುರ: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಅನುನೋದನೆಗೊಂಡ ಹೊಸ 46 ಪಿಯು ಕಾಲೇಜುಗಳನ್ನು ಆರಂಭಿಸಬೇಕೆಂದು ವಿಜಯಪುರ ಜಿಲ್ಲೆಯ ಯುವಕನೋರ್ವ ಸಿಎಂ ಹಾಗೂ ಇತರರಿಗೆ ರಕ್ತದಲ್ಲಿ ಪತ್ರ ಬರೆದು ಇತ್ತೀಚೆಗೆ ಗಮನ ಸೆಳೆದಿದ್ದ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ವಿಜಯರಂಜನ್ ಜೋಷಿ ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ನಿರ್ದೇಶಕರು, ಶಾಸಕರಿಗೆ ರಕ್ತದಲ್ಲಿ ಪತ್ರ ಬರೆದು ನೂತನ ಪಿಯು ಕಾಲೇಜು ಆರಂಭಿಸಬೇಕೆಂದು ಮನವಿ ಮಾಡಿ ವಿನೂತನ ಹೋರಾಟ ಮಾಡಿದ್ದ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮೇಲೆ ಸಚಿವರು, ಶಾಸಕರು ವಿಶ್ವಾಸ ಕಳೆದುಕೊಂಡಿದ್ದಾರೆ: ನಳಿನ್ ಕುಮಾರ್ ಕಟೀಲ್​​

2022-23ನೇ ಸಾಲಿನಲ್ಲಿ ರಾಜ್ಯದಲ್ಲಿ 46 ಹೊಸ ಪಿಯು ಕಾಲೇಜುಗಳಿಗೆ ಅನುಮೋದನೆಯನ್ನು ಹಿಂದಿನ ಬಿಜೆಪಿ ಸರ್ಕಾರ ನೀಡಿತ್ತು. ಆದರೆ ಇದೀಗ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರವೇಶಾತಿ ಮುಗಿಯುತ್ತಾ ಬಂದಿದ್ದರೂ ಇನ್ನೂ ಹೊಸ ಪಿಯು ಕಾಲೇಜುಗಳು ಆರಂಭವಾಗಿಲ್ಲ. ಕೂಡಲೇ ಹೊಸ ಪಿಯುಸಿ ಕಾಲೇಜುಗಳನ್ನು ಆರಂಭಿಸಿದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನಕೂಲಕವಾಗುತ್ತದೆ ಎಂದು ರಕ್ತದಲ್ಲಿ ಪತ್ರ ಬರೆದು ವಿಜಯರಂಜನ್ ಜೋಷಿ ಒತ್ತಾಯಿಸಿದ್ದ.

ಇದನ್ನೂ ಓದಿ: ಬರಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ 7 ತಾಲೂಕುಗಳ ಸೇರ್ಪಡೆ: ಸರ್ಕಾರ ಆದೇಶ

ರಾಜ್ಯದಲ್ಲಿ 46 ಪಿಯುಸಿ ನೂತನ ಕಾಲೇಜುಗಳು ಆರಂಭವಾದರೆ 15 ರಿಂದ 20ಸಾವಿರ ಬಡವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುದ್ದೇಬಿಹಾಳ ಶಾಸಕ ಸಿಎಸ್ ನಾಡಗೌಡ ಹಾಗೂ ಡಿಡಿಪಿಯು ಆಧಿಕಾರಿಗಳಿಗೆ ರಕ್ತದಲ್ಲಿ ಪತ್ರ ಬರೆದು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು