AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ಹಣ ವಸೂಲಿ ಆರೋಪ: ಬೆಂಗಳೂರಲ್ಲಿ ಆರ್​ಟಿಐ ಕಾರ್ಯಕರ್ತ ಅರೆಸ್ಟ್​

ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಕೋಲಾರ ಮೂಲದ ಆರ್‌ಟಿಐ ಕಾರ್ಯಕರ್ತ ಮುರಳಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಹಣ ವಸೂಲಿಗೆ ಆರೋಪಿ ಬಳಸಿದ್ದ ಬ್ಯಾಂಕ್ ಖಾತೆಗಳ ವಹಿವಾಟಿನ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಖಾತೆಗಳು ಮೂರನೇ ವ್ಯಕ್ತಿಯ ಹೆಸರಿನಲ್ಲಿ ನೋಂದಣಿಯಾಗಿರುವುದು ಕಂಡುಬಂದಿದೆ ಎನ್ನಲಾಗಿದೆ.

ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ಹಣ ವಸೂಲಿ ಆರೋಪ: ಬೆಂಗಳೂರಲ್ಲಿ ಆರ್​ಟಿಐ ಕಾರ್ಯಕರ್ತ ಅರೆಸ್ಟ್​
ನಕಲಿ ಐಡಿ ಕಾರ್ಡ್​​Image Credit source: Tv9 Kannada
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 08, 2026 | 1:08 PM

Share

ಬೆಂಗಳೂರು, ಅಕ್ಟೋಬರ್​​ 08: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ಹಣ ವಸೂಲಿ ಆರೋಪ ಹಿನ್ನಲೆ ಆರ್​ಟಿಐ ಕಾರ್ಯಕರ್ತನೋರ್ವನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಮುರಳಿ (45) ಬಂಧಿತ ಆರೋಪಿಯಾಗಿದ್ದು, ಲೋಕಾಯುಕ್ತ ಅಧಿಕಾರಿಗಳ ಲೆಟರ್ ಹೆಡ್​ ನಕಲಿ ಮಾಡ್ತಿದ್ದ ಈತ ಬಳಿಕ ಸರ್ಕಾರಿ ಅಧಿಕಾರಿಗಳಿಗೆ ಕಳುಹಿಸಿ ಹಣವಸೂಲಿ ಮಾಡುತ್ತಿದ್ದ. ಈತ ಅರಣ್ಯಾಧಿಕಾರಿ ಎಂಬಂತೆ ನಕಲಿ ಐಡಿ ಕಾರ್ಡ್ ಕೂಡ ಹೊಂದಿದ್ದ ಎನ್ನಲಾಗಿದೆ.

ಪೊಲೀಸರ ಪ್ರಕಾರ, ಮುರಳಿ ಲೋಕಾಯುಕ್ತ ದೂರುಗಳಿಗಾಗಿ ಬಳಸುವ ನೈಜ ದೂರು ನಮೂನೆಗಳು ಹಾಗೂ ಅಫಿಡವಿಟ್ ಮಾದರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ. ಈಗಾಗಲೇ ಇದ್ದ ದೂರುಗಳಲ್ಲಿನ ಹೆಸರು ಹಾಗೂ ಇತರ ವಿವರಗಳನ್ನು ಬದಲಿಸಿ, ಅಧಿಕಾರಿಗಳ ವಿರುದ್ಧ ಹೊಸದಾಗಿ ಭ್ರಷ್ಟಾಚಾರ ದೂರು ದಾಖಲಾಗಿದೆ ಎಂಬಂತೆ ನಕಲಿ ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದ. ನಂತರ ಈ ನಕಲಿ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ವಿಳಾಸಕ್ಕೆ ಕಳುಹಿಸುತ್ತಿದ್ದ. ಕೆಲವೇ ದಿನಗಳ ಬಳಿಕ ಅಧಿಕಾರಿಗಳನ್ನು ಸಂಪರ್ಕಿಸಿ, ಅವರ ವಿರುದ್ಧ ದಾಖಲಾಗಿರುವುದಾಗಿ ಬಿಂಬಿಸಿದ ದೂರುಗಳನ್ನು ಸೆಟಲ್ ಮಾಡುವ ಅಥವಾ ಹಿಂಪಡೆಯುವ ಭರವಸೆ ನೀಡುತ್ತಿದ್ದ. ಇದಕ್ಕಾಗಿ 3,000 ರೂಪಾಯಿಯಿಂದ 50,000 ರೂಪಾಯಿವರೆಗೆ ಹಣಕ್ಕೆ ಬೇಡಿಕೆ ಇಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

LIVE TV

ಇದನ್ನೂ ಓದಿ: ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಹೊತ್ತಿ ಉರಿದ ಪೆಟ್ರೋಲ್ ಬಂಕ್

ಪ್ರಕರಣ ಬಯಲಾಗಿದ್ದು ಹೇಗೆ?

ಅರಣ್ಯ ಇಲಾಖೆ ಅಧಿಕಾರಿಯೊಬ್ಬರಿಗೆ ಇಂತಹ ದೂರು ತಲುಪಿದ ಬಳಿಕ, ಅವರು ಲೋಕಾಯುಕ್ತ ಕಚೇರಿಯಲ್ಲಿ ದೂರುದ ವಿವರಗಳನ್ನು ಪರಿಶೀಲಿಸಿದ್ದರು. ಈ ವೇಳೆ ಲೋಕಾಯುಕ್ತ ದಾಖಲೆಗಳಲ್ಲಿ ಅಂತಹ ಯಾವುದೇ ದೂರು ದಾಖಲಾಗಿಲ್ಲ ಎಂಬುದು ಪರಿಶೀಲನೆ ವೇಳೆ ದೃಢಪಟ್ಟ ಕಾರಣ ವಂಚನೆ ಬೆಳಕಿಗೆ ಬಂದಿದೆ.

ಹಣ ವಸೂಲಿಗೆ ಆರೋಪಿ ಬಳಸಿದ್ದ ಬ್ಯಾಂಕ್ ಖಾತೆಗಳ ವಹಿವಾಟಿನ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಖಾತೆಗಳು ಮೂರನೇ ವ್ಯಕ್ತಿಯ ಹೆಸರಿನಲ್ಲಿ ನೋಂದಣಿಯಾಗಿರುವುದು ಕಂಡುಬಂದಿದೆ. ಖಾತೆದಾರನಿಗೆ ಪೊಲೀಸರು ನೋಟಿಸ್ ಜಾರಿ ಮಾಡಿ, ಮುರಳಿಯೊಂದಿಗಿನ ಸಂಬಂಧ ಹಾಗೂ ಹಣದ ವಹಿವಾಟಿನಲ್ಲಿ ಅವರ ಪಾತ್ರದ ಕುರಿತು ವಿಚಾರಣೆ ನಡೆಸುತ್ತಿದ್ದಾರೆ. ಇದೇ ರೀತಿಯ ಕಾರ್ಯವಿಧಾನವನ್ನು ಬಳಸಿಕೊಂಡು ಮುರಳಿ ಇತರ ಸರ್ಕಾರಿ ಅಧಿಕಾರಿಗಳಿಂದಲೂ ವಸೂಲಿ ಮಾಡಿದ್ದಾನೆಯೇ ಎಂಬ ಆಯಾಮದಲ್ಲಿಯೂ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:54 pm, Thu, 8 October 26

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!