ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ದಂಪತಿ, ಮಗು ಶವ ಪತ್ತೆ: ಅನಾರೋಗ್ಯಕ್ಕೆ ಹೆದರಿ ಕೃತ್ಯ ಶಂಕೆ

ಮಹೇಶ್ ಗೌಡ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ತಾನು ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ರೆ ಕುಟುಂಬ ಅನಾಥವಾಗುತ್ತೆ. ಪತ್ನಿ, ಮಗು ಎಲ್ಲರೂ ಬೀದಿಗೆ ಬರುತ್ತಾರೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ದಂಪತಿ, ಮಗು ಶವ ಪತ್ತೆ: ಅನಾರೋಗ್ಯಕ್ಕೆ ಹೆದರಿ ಕೃತ್ಯ ಶಂಕೆ
ಸಾಂಕೇತಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Aug 18, 2022 | 6:47 PM

ಬೆಂಗಳೂರು: ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚುಂಚನಕಟ್ಟೆ ಸರ್ಕಲ್ ಬಳಿಯ ಮನೆಯಲ್ಲಿ ನಡೆದಿದೆ. ದಂಪತಿ, ಮಗುವಿನ ಶವ ಮನೆಯಲ್ಲಿ ಪತ್ತೆಯಾಗಿದೆ. ಅನಾರೋಗ್ಯ ಹಿನ್ನೆಲೆ ಮಗು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಹೇಶ್ ಗೌಡ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ತಾನು ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ರೆ ಕುಟುಂಬ ಅನಾಥವಾಗುತ್ತೆ. ಪತ್ನಿ, ಮಗು ಎಲ್ಲರೂ ಬೀದಿಗೆ ಬರುತ್ತಾರೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ತನ್ನ ಸಾವಿನ ನಂತರ ತನ್ನ ಹೆಂಡ್ತಿ ಮಕ್ಕಳ ಜೀವನ ಕಷ್ಟ ಆಗುವ ಆತಂಕದಲ್ಲಿ ಕುಟುಂಬ ಈ ನಿರ್ಧಾರ ಕೈಗೊಂಡಿರಬಹುದು ಎನ್ನಲಾಗುತ್ತಿದೆ. ಸದ್ಯ ಈ ಪ್ರಕರಣ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ಬಳಿಕ ಸತ್ಯ ಬಯಲಾಗಲಿದೆ.

ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವು

ಚಿಕ್ಕಮಗಳೂರು: ಬಂಡಿಹಳ್ಳಿ ಬಳಿ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಿರಿಜಮ್ಮ(56) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಪತಿಗೆ ಊಟ ಕೊಟ್ಟು ಹಿಂದಿರುಗುವಾಗ ದುರ್ಘಟನೆ ನಡೆದಿದೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು, ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 6:43 pm, Thu, 18 August 22

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ