ಬೆಂಗಳೂರು: ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚುಂಚನಕಟ್ಟೆ ಸರ್ಕಲ್ ಬಳಿಯ ಮನೆಯಲ್ಲಿ ನಡೆದಿದೆ. ದಂಪತಿ, ಮಗುವಿನ ಶವ ಮನೆಯಲ್ಲಿ ಪತ್ತೆಯಾಗಿದೆ. ಅನಾರೋಗ್ಯ ಹಿನ್ನೆಲೆ ಮಗು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಹೇಶ್ ಗೌಡ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ತಾನು ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ರೆ ಕುಟುಂಬ ಅನಾಥವಾಗುತ್ತೆ. ಪತ್ನಿ, ಮಗು ಎಲ್ಲರೂ ಬೀದಿಗೆ ಬರುತ್ತಾರೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ತನ್ನ ಸಾವಿನ ನಂತರ ತನ್ನ ಹೆಂಡ್ತಿ ಮಕ್ಕಳ ಜೀವನ ಕಷ್ಟ ಆಗುವ ಆತಂಕದಲ್ಲಿ ಕುಟುಂಬ ಈ ನಿರ್ಧಾರ ಕೈಗೊಂಡಿರಬಹುದು ಎನ್ನಲಾಗುತ್ತಿದೆ. ಸದ್ಯ ಈ ಪ್ರಕರಣ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ಬಳಿಕ ಸತ್ಯ ಬಯಲಾಗಲಿದೆ.
ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವು
ಚಿಕ್ಕಮಗಳೂರು: ಬಂಡಿಹಳ್ಳಿ ಬಳಿ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಿರಿಜಮ್ಮ(56) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಪತಿಗೆ ಊಟ ಕೊಟ್ಟು ಹಿಂದಿರುಗುವಾಗ ದುರ್ಘಟನೆ ನಡೆದಿದೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು, ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published On - 6:43 pm, Thu, 18 August 22