AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ, ಯುವತಿಯರನ್ನು ಚುಡಾಯಿಸುತ್ತಿದ್ದ ಪುಂಡನಿಗೆ ಧರ್ಮದೇಟು, ಕಾಲುವೆಗೆ ಬಿದ್ದು ಲಾರಿ ಚಾಲಕ ಸಾವು

ಬ್ಯಾಂಕ್ ಮಿತ್ರ ನೌಕರಿ ನೀಡುವ ಏಜೆನ್ಸಿಯಿಂದ ಮೋಸವಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಾಗರ ತಾಲ್ಲೂಕಿನ ಕೆಳದಿ ಗ್ರಾಮದಲ್ಲಿ ನಡೆದಿದೆ

Crime News: ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ, ಯುವತಿಯರನ್ನು ಚುಡಾಯಿಸುತ್ತಿದ್ದ ಪುಂಡನಿಗೆ ಧರ್ಮದೇಟು, ಕಾಲುವೆಗೆ ಬಿದ್ದು ಲಾರಿ ಚಾಲಕ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Feb 11, 2022 | 5:25 PM

Share

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ. ಗಂಗೊಂಡಹಳ್ಳಿ ನಿವಾಸಿ ಶಶಿಧರ್ (33) ಆತ್ಮಹತ್ಯೆ ಮಾಡಿಕೊಂಡವರು. ಮನೆ ಕಟ್ಟಲು ಶಶಿಧರ್ ಬ್ಯಾಂಕ್​​ನಿಂದ ಸಾಲ ಪಡೆದಿದ್ದರು. ಪ್ರತಿ ತಿಂಗಳು ಇಎಂಐ ಕಟ್ಟುವಂತೆ ಬ್ಯಾಂಕ್​​ ಸಿಬ್ಬಂದಿ ಒತ್ತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಪತಿ-ಪತ್ನಿ ನಡುವೆ ನಿರಂತರ ಜಗಳಗಳು ಆಗುತ್ತಿದ್ದವು. ಪತ್ನಿ ಆಕೆಯ ತಾಯಿ ಮನೆಗೆ ಹೋಗಿದ್ದಾಗ ಶಶಿಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರ್ಕಾವತಿ ನದಿಯ ಕಾಲುವೆಗೆ ಬಿದ್ದು ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದೊಂಬರಹಳ್ಳಿ ಬಳಿ ನಡೆದಿದೆ. ಹರಿಯಾಣ ಮೂಲದ ರಿಂಕು ಕುಮಾರ್ (38) ಮೃತ ಚಾಲಕ. ನದಿಯ ಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ತೇಲುತ್ತಿತ್ತು. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೋಷಕರು ಮಾದನಾಯಕನಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

ಬ್ಯಾಂಕ್ ಮಿತ್ರ ಏಜೆನ್ಸಿಯಿಂದ ಮೋಸ

ಬ್ಯಾಂಕ್ ಮಿತ್ರ ನೌಕರಿ ನೀಡುವ ಏಜೆನ್ಸಿಯಿಂದ ಮೋಸವಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಾಗರ ತಾಲ್ಲೂಕಿನ ಕೆಳದಿ ಗ್ರಾಮದಲ್ಲಿ ನಡೆದಿದೆ. ನೂರಾರು ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಬ್ಯಾಂಕ್ ಮಿತ್ರ ಏಜೆನ್ಸಿಯ ವಿರುದ್ಧ ಉದ್ಯೋಗ ವಂಚಿತರು ಪ್ರತಿಭಟನೆ ನಡೆಸಿದರು. ಈ ವೇಳೆ ವಿಷ ಸೇವಿಸಿ ಅಸ್ವಸ್ಥರಾದ ಶಕುಂತಲಾ ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರೋಡ್ ರೋಮಿಯೋಗೆ ಥಳಿತ

ಟೈಲರಿಂಗ್​ ಕ್ಲಾಸ್​ಗೆ ಹೋಗುತ್ತಿದ್ದ ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ನಡೆದಿದೆ. ಸ್ಥಳೀಯರು ಯುವಕನನ್ನು ಥಳಿಸುವ ವಿಡಿಯೊ ಇದೀಗ ವೈರಲ್ ಆಗಿದೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವೈದ್ಯರ ವಿರುದ್ಧ ಪ್ರಕರಣ ದಾಖಲು

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬಲ್ಲಾಹುಣಸಿ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಈ ಪ್ರಕರಣದ ಆರೋಪಿ ಡಾ.ರಾಜೇಶ್ ನಾಯ್ಕ್‌ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಇವರು ಹಗರಿಬೊಮ್ಮನಹಳ್ಳಿಯ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಅವರ ದೂರದ ಸಂಬಂಧಿ. ಅಪಘಾತದಲ್ಲಿ ಸ್ಥಳೀಯರಾದ ಶಂಕರಪ್ಪ ಗೊಲ್ಲರ್ (40) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸವಾರ ಬಸವರಾಜಗೆ ಗಂಭೀರ ಗಾಯವಾಗಿತ್ತು. ವೈದ್ಯ ಡಾ.ರಾಜೇಶ್ ನಾಯ್ಕ್‌ ವಿರುದ್ಧ ಐಪಿಸಿ ಸೆಕ್ಷನ್​ 279, 337, 30 (ಎ) ಕಲಂ ಅಡಿ ಎಫ್​ಐಆರ್​ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಬಿದ್ದ ಕಾರು; ಅಪಘಾತದಲ್ಲಿ ವ್ಯಕ್ತಿ ದವಡೆ ಹೊಕ್ಕಿದ ಕಟ್ಟಿಗೆಯ ತುಂಡು

ಇದನ್ನೂ ಓದಿ: Crime News: ಪೊಲೀಸ್ ಇನ್ಸ್‌ಪೆಕ್ಟರ್ ಕಾರಿನ ಗಾಜನ್ನೇ ಒಡೆದು ಬೆಲೆ ಬಾಳುವ ವಸ್ತುಗಳನ್ನು ಕದ್ದ ಖದೀಮರು

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ