ಖ್ಯಾತ ಜನಪದ ಗಾಯಕ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ ನಿಧನ

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ ನಿಧನರಾಗಿದ್ದಾರೆ. ಹುಟ್ಟೂರು ಬಿಡದಿಯಲ್ಲಿ ಆಲೂರು ನಾಗಪ್ಪ ಅಂತ್ಯಕ್ರಿಯೆ ನಡೆಯಲಿದೆ. ನಿಂಗವ್ವ ಬೆಂಗಳೂರಿಗೆ ಬಂದು ನೋಡವ್ವ, ನೀನು ಮದುಕಿಯಂಗೆ ಮುಸುಕಾಕೊಂಡು ಇವರ ಪ್ರಸಿದ್ಧ ಹಾಡುಗಳು.

ಖ್ಯಾತ ಜನಪದ ಗಾಯಕ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ ನಿಧನ
ಆಲೂರು ನಾಗಪ್ಪ
Follow us
Shivaprasad
| Updated By: ಆಯೇಷಾ ಬಾನು

Updated on:Jul 23, 2024 | 11:13 AM

ಬೆಂಗಳೂರು, ಜುಲೈ.23: ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ(74) ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಾಗಪ್ಪ (Alur Nagappa) ಅವರು ಅನಾರೋಗ್ಯದಿಂದಾಗಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಹುಟ್ಟೂರು ಬಿಡದಿಯಲ್ಲಿ ಆಲೂರು ನಾಗಪ್ಪ ಅಂತ್ಯಕ್ರಿಯೆ ನಡೆಯಲಿದೆ.

ನಿಂಗವ್ವ ಬೆಂಗಳೂರಿಗೆ ಬಂದು ನೋಡವ್ವ ಹಾಡಿನ ಖ್ಯಾತಿಯ ಆಲೂರು ನಾಗಪ್ಪ ಅವರು ಸಾವಿರಾರು ಲಾವಣಿ, ತತ್ವಪದಗಳ ಹರಿಕಾರಕ. ಇವರು ರಚಿಸಿ, ಹಾಡಿರುವ ಹಾಡುಗಳು ಇಂದಿಗೂ ಜನಪ್ರಿಯತೆ ಕಳೆದುಕೊಂಡಿಲ್ಲ. ಇವರಿಗೆ ಜಾನಪದ ಸಂಗೀತದ ಮೇಲಿದ್ದ ಪ್ರೀತಿ ಎಂತಹದ್ದು ಎಂದರೆ ಇವರು ಹೆಡ್‌ ಕಾನ್‌ಸ್ಟೇಬಲ್‌ ಹುದ್ದೆಗೆ ರಿಸೈನ್‌ ಮಾಡಿ ತಮ್ಮ ಆಸಕ್ತಿಗೆ ಒತ್ತು ನೀಡಿದ್ದರು.

ಆಲೂರು ನಾಗಪ್ಪ, ಗಾಯಕರಾಗಿ ಮಾತ್ರವಲ್ಲ, ಕನ್ನಡಪರ ಹೋರಾಟಗಾರರಾಗಿ ಕೂಡಾ ಗುರುತಿಸಿಕೊಂಡಿದ್ದಾರೆ. ಇನ್ನು ಇವರ ಮಗಳು ದಿವ್ಯ ಅಲೂಕು ಕೂಡ ನಿರೂಪಕಿ, ಗಾಯಕಿಯಾಗಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ರಾಜ್ಯದ 8 ರೈಲುಗಳು ಎರಡು ದಿನಗಳ ಕಾಲ ರದ್ದು!

ಆಲೂರು ನಾಗಪ್ಪ ಅವರು ಯುವಜನತೆ, ಮಹಿಳೆಯರು, ನಾಡುನುಡಿಗೆ ಸಂಬಂಧಿಸಿದ ಎಲ್ಲಾ ರೀತಿಯ ಹಾಡುಗಳನ್ನೂ ಬರೆದಿದ್ದಾರೆ. ಭಕ್ತಿ ಗೀತೆಗಳನ್ನೂ ರಚಿಸಿದ್ದಾರೆ. ವಿಶೇಷವೆಂದರೆ ಇವರು ತಾವು ರಚಿಸಿದ, ಹಾಡಿದ ಯಾವ ಹಾಡುಗಳ ಹಕ್ಕನ್ನೂ ಬೇರೆಯವರಿಗೆ ಕೊಟ್ಟಿಲ್ಲ. ದೊಡ್ಡ ದೊಡ್ಡ ಕಂಪನಿಗಳು ಬಂದು ಮನವಿ ಮಾಡಿದರೂ ನನ್ನ ಶಾರದೆಯನ್ನು ಯಾರಿಗೂ ಕೊಡುವುದಿಲ್ಲ ಎಂದು ಹೇಳುತ್ತಿದ್ದರಂತೆ. ಈ ಬಗ್ಗೆ ಅವರ ಮಗಳು ದಿವ್ಯ ಪತ್ರಿಕೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಕನ್ನಿಕೇರಿ ಹುಡುಗಿಯೊಬ್ಬಳು, ನೀನು ಮದುಕಿಯಂಗೆ ಮುಸುಕಾಕೊಂಡು, ಬೆಂಗಳೂರ್‌ ಹುಡ್ಗ ಬಂದವನಂತ ಬಗ್ಗಿ ಬಗ್ಗಿ ನೋಡ್ತೀಯಲ್ಲೇ, ತವರಿಂದ ಕಳಿಸಿ ನನ್ನ ಮರಿಬೇಡ ಅಣ್ಣಯ್ಯ, ಅಳಬ್ಯಾಡ ತಂಗಿ ಅಳಬ್ಯಾಡ, ಹೆತ್ತ ತಾಯಿ ಋಣವ ತೀರಿಸೋ, ಎಚ್ಚರಾಗು ಕನ್ನಡಿಗ ಇವು ಆಲೂರು ನಾಗಪ್ಪ ಅವರ ಪ್ರಸಿದ್ಧ ಹಾಡುಗಳು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:29 am, Tue, 23 July 24

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ