ಬೆಂಗಳೂರು ಮತ್ತು ಮೈಸೂರಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು
ಬೆಂಗಳೂರು ಮತ್ತು ಮಂಡ್ಯದಲ್ಲಿ ಉಳುಮೆ ಮಾಡುವ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಮತ್ತು ಎತ್ತು ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು: ನಗರದಲ್ಲಿ ನಿನ್ನೆ(ಜೂನ್ 13) ಭಾರೀ ಮಳೆಯಾಗಿದ್ದು ವಿದ್ಯುತ್ ತಂತಿ ತಗುಲಿ ಓರ್ವ ರೈತ ಮತ್ತು ಹಸು ಮೃತಪಟ್ಟ ಘಟನೆ ಕಾಡುಗೋಡಿ ಸಮೀಪದ ಚನ್ನಸಂದ್ರದಲ್ಲಿ ನಡೆದಿದೆ. ಚನ್ನಸಂದ್ರ ನಿವಾಸಿ ಕೃಷ್ಣಪ್ಪ (55) ಮೃತ ರೈತ. ನಿನ್ನೆ ಸುರಿದ ಮಳೆಗೆ ವಿದ್ಯುತ್ ವೈರ್ ಕಟ್ ಆಗಿ ಬಿದಿತ್ತು. ಇಂದು(ಜೂನ್ 14) ಬೆಳಗ್ಗೆ ಮೇವಿಗೆಂದು ಕೃಷ್ಣಪ್ಪ ತನ್ನ ಹಸುವನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಘಟನೆ ನಡೆದಿದೆ. ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಂಡ್ಯದಲ್ಲೂ ರೈತ ಮತ್ತು ಎತ್ತು ಸಾವು
ಇನ್ನು ಮತ್ತೊಂದೆಡೆ ಇದೇ ರೀತಿಯ ಘಟನೆ ಮರುಕಳಿಸಿದೆ. ಉಳುಮೆ ಮಾಡುವ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಮತ್ತು ಎತ್ತು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮಾಲಗಾರಹಳ್ಳಿ ಗ್ರಾಮದ ರೈತ ಮುತ್ತುರಾಜ್(45) ಮೃತ ದುರ್ದೈವಿ. ಸ್ಥಳಕ್ಕೆ ಪೊಲೀಸರು, ಸೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು: ಮತ್ತಿಬ್ಬರ ರಕ್ಷಣೆ
ಆಟೋಗೆ ಹಿಂದಿನಿಂದ ಕಾರು ಡಿಕ್ಕಿ, ಮೂವರಿಗೆ ಗಾಯ
ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೋ ಪಲ್ಟಿಯಾಗಿದ್ದು ಮೂವರಿಗೆ ಗಾಯಗಳಾಗಿವೆ. ಆಟೋ ಚಾಲಕ, ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾರ್ಕೆಟ್ ಫ್ಲೈಓವರ್ ಮೇಲೆ ತಡರಾತ್ರಿ 12.15ಕ್ಕೆ ಘಟನೆ ನಡೆದಿದೆ. ಅಪಘಾತದ ನಂತರ ಕಾರನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸಿಟಿ ಮಾರ್ಕೆಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:48 am, Wed, 14 June 23