AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ, ಪೇಟ, ಶಾಲುಗೆ ಬ್ರೇಕ್; ರಾಜ್ಯ ಸರ್ಕಾರದ ಆದೇಶ ವಿರೋಧಿಸಿ ರೈತರಿಂದ ಧರಣಿ

ಸರ್ಕಾರ ರೈತರು, ಹೂವು ವ್ಯಾಪಾರಿಗಳ ಬೆನ್ನಿಗೆ ಚೂರಿ ಹಾಕಿದೆ. ಪ್ಲಾಸ್ಟಿಕ್ ಹೂಗಳನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದ ರೈತರು, ಕೂಡಲೇ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತಿದ್ದಾರೆ.

ಹಾರ, ಪೇಟ, ಶಾಲುಗೆ ಬ್ರೇಕ್; ರಾಜ್ಯ ಸರ್ಕಾರದ ಆದೇಶ ವಿರೋಧಿಸಿ ರೈತರಿಂದ ಧರಣಿ
ರೈತರ ಪ್ರತಿಭಟನೆ
TV9 Web
| Edited By: |

Updated on:Aug 12, 2021 | 12:54 PM

Share

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ಪೇಟ, ಶಾಲು ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಹೂವು ಹರಾಜು ಕೇಂದ್ರದ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೂಗುಚ್ಛ, ಹಣ್ಣಿನ ಬುಟ್ಟಿ, ನೆನಪಿನ ಕಾಣಿಕೆ ಸೇರಿದಂತೆ ಹಲವು ಉಡುಗೊರೆ ಹಿಂದೆ ಸಾಕಷ್ಟು ಜನರ ಬದುಕು ಇದೆ. ಹೂವಿನ ವ್ಯಾಪಾರಿಗಳು, ಕರಕುಶಲಕರ್ಮಿಗಳ ಜೀವನವಿದೆ. ಸರ್ಕಾರ ಏಕಾಏಕಿ ಹಾರ, ತುರಾಯಿ ಬ್ಯಾನ್ ಮಾಡಿದ್ರೆ ಕಷ್ಟ. ಹೀಗಾಗಿ ಆದೇಶವನ್ನು ಹಿಂಪಡೆಯಲು ರೈತರು (Farmers) ಆಗ್ರಹಿಸುತ್ತಿದ್ದಾರೆ.

ಸರ್ಕಾರ ರೈತರು, ಹೂವು ವ್ಯಾಪಾರಿಗಳ ಬೆನ್ನಿಗೆ ಚೂರಿ ಹಾಕಿದೆ. ಪ್ಲಾಸ್ಟಿಕ್ ಹೂಗಳನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದ ರೈತರು, ಕೂಡಲೇ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತಿದ್ದಾರೆ.

ಆಗಸ್ಟ್ 10ಕ್ಕೆ ಪೊಲೀಸ್ ಅಧಿಕಾರಿಗಳ ಸಭೆಗೆ ಹೋಗಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಹೂಗುಚ್ಚ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಮುಖ್ಯಮಂತ್ರಿ ತಿಳಿಸುತ್ತಿದ್ದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶವನ್ನು ಜಾರಿಗೊಳಿಸಿದ್ದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ.ಎಂ.ಅರವಿಂದ್‌ ಮಾತನಾಡಿ, ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಆದೇಶವನ್ನು ಹೊರಡಿಸಿದ್ದಾರೆ. ಇದು ರಾಜ್ಯದ 7,500 ಹೆಕ್ಟೇರ್‌ ಪ್ರದೇಶದಲ್ಲಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವ ಸಾವಿರಾರು ಜನ ರೈತರ ಕುಟುಂಬಗಳ ಮೇಲಿನ ಗಧಾಪ್ರಹಾರವಾಗಿದೆ. ಈ ನಿರ್ಧಾರದ ಹಿಂದೆ ಯಾವುದೇ ವೈಜ್ಞಾನಿಕ ಅಥವಾ ಸಂಶೋಧನಾತ್ಮ ಅಂಶಗಳ ಕಂಡು ಬರುತ್ತಿಲ್ಲ. ಈ ನಿಷೇಧದಿಂದಾಗಿ ಕೊರೊನಾ ಸಂಕಷ್ಟದಿಂದ ತೊಂದರೆಗೀಡಾಗಿರುವ ಪುಷ್ಪ ಬೆಳೆಗಾರರ ಚೇತರಿಕೆ ಮತ್ತಷ್ಟು ನಿಧಾನವಾಗುತ್ತದೆ. ವರ್ಷಗಳಿಂದ ಯಾವುದೇ ಸಭೆ ಸಮಾರಂಭಗಳು ನಡೆಯದೇ ತೊಂದರೆಗೀಡಾಗಿದ್ದ ರೈತರು ಇನ್ನಷ್ಟು ಕಷ್ಟಕ್ಕೆ ಸಿಲುಕಿಕೊಂಡು ಆತ್ಮಹತ್ಯೆಯಂತಹ ದಾರಿಯನ್ನು ಕಂಡುಕೊಳ್ಳುವಂತಾಗಿದೆ. ಕೋಟ್ಯಾಂತರ ರೂಪಾಯಿಗಳ ಹಣವನ್ನು ತೊಡಗಿಸಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವರು ಬಹಳಷ್ಟು ಸಂಕಷ್ಟಕ್ಕೆ ಬೀಳುವಂತಾಗಿದೆ ಎಂದು ಹೇಳಿದರು.

ಫ್ಲವರ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಅಧ್ಯಕ್ಷರಾದ ಶ್ರೀಕಾಂತ್‌ ಬೊಲ್ಲಪಳ್ಳಿ ಮಾತನಾಡಿ, ಪುಷ್ಪ ಕೃಷಿ ಕ್ಷೇತ್ರ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡುತ್ತಿದೆ. 7,500 ಹೆಕ್ಟೇರ್​ನಷ್ಟು ಭೂಮಿಯಲ್ಲಿ ಗ್ರೀನ್‌ ಹೌಸ್‌ ಮೂಲಕ ಪುಷ್ಪ ಕೃಷಿಯನ್ನು ನಡೆಸಲಾಗುತ್ತಿದೆ. ಅಲ್ಲದೆ ಇದನ್ನು ಹೊರಪಡಿಸಿ ಲಕ್ಷಾಂತರ ಎಕರೆಗಳಲ್ಲಿ ಹೂವನ್ನು ಬೆಳೆಯಲಾಗುತ್ತಿದೆ. ಒಂದು ಎಕರೆಯಲ್ಲಿ ಸುಮಾರು ಆರು ಜನ ಒಂದು ಹೆಕ್ಟೇರ್‌ ನಲ್ಲಿ ಸುಮಾರು 15 ಜನರು ಕಾರ್ಯನಿರ್ವಹಿಸುತ್ತಾರೆ. ಬೆಂಗಳೂರು ನಗರ ದೇಶದ ಪುಷ್ಪೋದ್ಯಮದ ಪ್ರಮುಖ ಹಬ್‌ ಆಗಿದ್ದು, ಬೆಂಗಳೂರಿನಿಂದ ದೇಶ ಹಾಗೂ ವಿದೇಶಕ್ಕೆ ಹೂಗಳು ರಫ್ತಾಗುತ್ತವೆ. ವಿದೇಶಿ ವಿನಿಮಯ ಹಾಗೂ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಪುಷ್ಪ ಕೃಷಿಗೆ ಈ ರೀತಿ ನಿಷೇಧ ಹೇರುವ ಮೂಲಕ ಹೊಡೆತ ನೀಡುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ಹಾಕುವಂತಿಲ್ಲ: ರಾಜ್ಯ ಸರ್ಕಾರದಿಂದ ಆದೇಶ

ಹೂಗುಚ್ಚ, ಹಾರ, ತುರಾಯಿ ನಿಷೇಧ ಹಿಂಪಡೆಯುವಂತೆ ಆಗ್ರಹ; ಆಗಸ್ಟ್ 12ಕ್ಕೆ ಬೃಹತ್ ಪ್ರತಿಭಟನೆ ನಡೆಸಲು ಪುಷ್ಪ ಬೆಳೆಗಾರರ ಸಂಘ ನಿರ್ಧಾರ

(Farmers are protest and urging the state government to withdraw the bouquet banned order in Bengaluru)

Published On - 12:48 pm, Thu, 12 August 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್