AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಮೇಲ್ದಂಡೆ ಯೋಜನೆಗೆ ತುಂಗಾ ನೀರು ಹರಿಸಲು ಒತ್ತಾಯ: ರೈತಸಂಘ, ಹಸಿರುಸೇನೆ ನಿಯೋಗದಿಂದ ಸಿಎಂ ಭೇಟಿ

ಕೇಂದ್ರ ಸರ್ಕಾರವು ಕೃಷಿ ಕಾಯ್ದೆ ವಾಪಸ್ ಪಡೆದಿದ್ದರೂ, ರಾಜ್ಯ ಸರ್ಕಾರ ಇನ್ನೂ ಹಿಂಪಡೆದಿಲ್ಲ. ಹೀಗಾಗಿ ಈ ಬಾರಿಯ ಅಧಿವೇಶನದಲ್ಲಿಯೇ ಕೃಷಿ ಕಾಯ್ದೆ ಹಿಂಪಡೆಯುವ ಬಗ್ಗೆ ಸರ್ಕಾರ ಘೋಷಣೆ ಮಾಡಬೇಕು ಎಂದು ರೈತರು ಒತ್ತಾಯಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ತುಂಗಾ ನೀರು ಹರಿಸಲು ಒತ್ತಾಯ: ರೈತಸಂಘ, ಹಸಿರುಸೇನೆ ನಿಯೋಗದಿಂದ ಸಿಎಂ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರೈತಸಂಘಟನೆಗಳ ಪ್ರತಿನಿಧಿಗಳು ಭೇಟಿಯಾಗಿ ಮನವಿ ಸಲ್ಲಿಸಿದರು.
TV9 Web
| Edited By: |

Updated on: Feb 18, 2022 | 8:47 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನಿಯೋಗ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಶುಕ್ರವಾರ ಭೇಟಿಯಾಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಿತು. ಕೇಂದ್ರ ಸರ್ಕಾರವು ಕೃಷಿ ಕಾಯ್ದೆ ವಾಪಸ್ ಪಡೆದಿದ್ದರೂ, ರಾಜ್ಯ ಸರ್ಕಾರ ಇನ್ನೂ ಹಿಂಪಡೆದಿಲ್ಲ. ಹೀಗಾಗಿ ಈ ಬಾರಿಯ ಅಧಿವೇಶನದಲ್ಲಿಯೇ ಕೃಷಿ ಕಾಯ್ದೆ ಹಿಂಪಡೆಯುವ ಬಗ್ಗೆ ಸರ್ಕಾರ ಘೋಷಣೆ ಮಾಡಬೇಕು. ಕೃಷಿ ಬೆಲೆ ಆಯೋಗಕ್ಕೆ ಕಾನೂನಿನ ಮಾನ್ಯತೆ ನೀಡಬೇಕು. ಆಯೋಗ ನಿಗದಿಪಡಿಸಿದ ಬೆಲೆಯನ್ನು ರೈತರಿಗೆ ಕೊಡಬೇಕು. ರಾಜ್ಯದಲ್ಲಿ ನನೆಗುದಿಗೆ ಬಿದ್ದ ನೀರಾವರಿ ಯೋಜನೆಗಳಿಗೆ ಬಜೆಟ್​ನಲ್ಲಿ ಹೆಚ್ಚಿನ ಅನುದಾನ ನೀಡಬೇಕು. ಈ ಮೂಲಕ ಕಾಮಗಾರಿಗಳನ್ನು ತ್ವರಿತವಾಗಿ ಜಾರಿ ಮಾಡುವ ಕೆಲಸ ಮಾಡಬೇಕು ಎಂದು ನಿಯೋಗ ಒತ್ತಾಯಿಸಿತು.

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಗೆ ತುಂಗಾ ನದಿಯಿಂದ 29.9 ಟಿಎಂಸಿ ಅಡಿ ನೀರು ಒದಗಿಸಬೇಕು. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ, ಕಾಮಗಾರಿಯನ್ನು ತಕ್ಷಣವೇ ಪೂರ್ಣಗೊಳಿಸಬೇಕು. ವೈಜ್ಞಾನಿಕ ಬೆಲೆ ಮತ್ತು ಬೆಳೆನಷ್ಟ ಪರಿಹಾರ ಕೊಡದ ಕಾರಣ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಬೇಕು. ಕಾಡುಪ್ರಾಣಿಗಳು, ವಿದ್ಯುತ್ ಶಾರ್ಟ್ ಸರ್ಕೀಟ್​ ಮತ್ತು ಬೆಂಕಿ ಅನಾಹುತದಿಂದ ಬೆಳೆನಾಶವಾಗುವ ಅಪಾಯವಿದೆ. ಇದಕ್ಕೂ ಪರಿಹಾರ ಕೊಡಬೇಕು ಎಂದು ಹೇಳಿದರು. ಈ ಬಾರಿ ಸಕ್ಕರೆಯ ಬೆಲೆ ಜಾಸ್ತಿ ಇರುವುದರಿಂದ ಪ್ರತಿ ಟನ್​ ಕಬ್ಬಿಗೆ ಸಕ್ಕರೆ ಕಾರ್ಖಾನೆಗಳು ₹ 4000 ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರಧಾನ ಮಂತ್ರಿ ಆತ್ಮನಿರ್ಭರ್ ಯೋಜನೆಯಡಿ ಕೃಷಿ ಉತ್ಪನ್ನ ಸಂಸ್ಕರಣ ಘಟಕಗಳಿಗೆ ಆದ್ಯತೆ ಮೇಲೆ ಅನುದಾನ ಹಾಗೂ ಸಬ್ಸಿಡಿ ನೀಡಬೇಕು. ದುಬಾರಿಯಾಗಿರುವ ರಸಗೊಬ್ಬರ ಬೆಲೆಗೆ ನಿಯಂತ್ರಣ ಬೇಕು. ರಸಗೊಬ್ಬರಕ್ಕೆ ನೀಡುತ್ತಿರುವ ಸಬ್ಸಿಡಿಯನ್ನು ಹೆಚ್ಚಿಸಲು ಕೇಂದ್ರಕ್ಕೆ ಒತ್ತಾಯಿಸಬೇಕು. ಅನ್ನಭಾಗ್ಯ ಯೋಜನೆಗೆ ಬೇರೆ ರಾಜ್ಯದಿಂದ ಬರುವ ಅಕ್ಕಿಯನ್ನು ನಿಲ್ಲಿಸಿ, ನಮ್ಮ ರಾಜ್ಯದಲ್ಲಿ ಬೆಳೆದ ಭತ್ತವನ್ನು ಖರೀದಿ ಮಾಡಬೇಕು. 50 ರೂಪಾಯಿ ಕೊಟ್ಟು ರೈತರಿಂದ ಹಾಲು ಖರೀದಿಸಬೇಕು. ಹಾಲು ಖರೀದಿಗೂ ಸಬ್ಸಿಡಿ ಕೊಡಬೇಕು. 60 ವರ್ಷ ಮೇಲ್ಪಟ್ಟ ರೈತರಿಗೆ ವೃದ್ಧಾಪ್ಯ ವೇತನ ನೀಡಬೇಕು ಎಂಬ ಬೇಡಿಕೆಗಳನ್ನು ರೈತ ನಿಯೋಗ ಮುಖ್ಯಮಂತ್ರಿಗೆ ಮನವಿ ಮಾಡಿದೆ.

ಸಚಿವರಾದ ಮಾಧುಸ್ವಾಮಿ, ಬಿ.ಸಿ.ಪಾಟೀಲ್​, ಸೋಮಶೇಖರ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೃಷಿ ಮತ್ತು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕೋಲಾರ​: ರಾಗಿ ಖರೀದಿ ಕೇಂದ್ರದಲ್ಲಿ ಇಲ್ಲ ಸರಿಯಾದ ಸೌಕರ್ಯ; ರೈತರಲ್ಲಿ ಹೆಚ್ಚಿದ ಆತಂಕ

ಇದನ್ನೂ ಓದಿ: ರೈತರ ಬಗ್ಗೆ ಸಚಿವರ ಉಡಾಫೆ ಧೋರಣೆ: ರಾಗಿ ಬೆಳೆಗಾರರ ಕಷ್ಟಕ್ಕೆ ಕನ್ನಡಿ ಹಿಡಿದ ಜೆಡಿಎಸ್ ನಾಯಕ ವೈಎಸ್​ವಿ ದತ್ತ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​