ರೈತರಿಗೆ ಬೇಕಿರುವುದು ನ್ಯಾಯಯುತ ಪರಿಹಾರವೇ ಹೊರತು, ದಾರಿ ತಪ್ಪಿಸುವ ಮಾತುಗಳಲ್ಲ: ವಿಪಕ್ಷಗಳ ಟೀಕೆ ಡಿಸಿಎಂ ಪರಮೇಶ್ವರ್ ತಿರುಗೇಟು
ಬರ ಪರಿಹಾರ ಮಾರ್ಗಸೂಚಿಗಳ ಕುರಿತು ವಿಪಕ್ಷಗಳ ಟೀಕೆಗೆ ಡಿಸಿಎಂ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ರೈತರಿಗೆ ನ್ಯಾಯಯುತ, ತ್ವರಿತ ಮತ್ತು ಪಾರದರ್ಶಕ ನೆರವು ನೀಡುವುದು ಸರ್ಕಾರದ ಜವಾಬ್ದಾರಿ. ಕೇಂದ್ರದಿಂದ ತುರ್ತಾಗಿ ಅನುದಾನ ಬಿಡುಗಡೆಗೆ ಒತ್ತಾಯಿಸಿದ ಅವರು, ಮಧ್ಯಂತರ ಪರಿಹಾರ ಸೋಮವಾರದಿಂದ ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಾಂಶಗಳು
- ಬರ ಪರಿಹಾರದ ಮಾರ್ಗಸೂಚಿಗೆ ವಿಪಕ್ಷಗಳ ಟೀಕೆ ವಿಚಾರ
- ವಿಪಕ್ಷಗಳ ಟೀಕೆಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ತಿರುಗೇಟು
- ನೆರವು ತಲುಪಿಸುವುದು ನಮ್ಮ ಸರ್ಕಾರದ ಜವಾಬ್ದಾರಿ ಆಗಿದೆ
ಬೆಂಗಳೂರು, ಅಕ್ಟೋಬರ್ 31: ರಾಜ್ಯ ಸರ್ಕಾರ ಇತ್ತೀಚೆಗೆ ರೈತರಿಗೆ 2500 ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಜೊತೆಗೆ ಹತ್ತಾರು ಮಾರ್ಗಸೂಚಿಗಳನ್ನು ವಿಧಿಸಿದೆ. ಸದ್ಯ ರೈತರಿಗೆ ಸರ್ಕಾರದ ಈ ಮಾರ್ಗಸೂಚಿಗಳ ಬಗ್ಗೆ ಟೀಕೆಗಳು ಕೇಳಿಬಂದಿವೆ. ಹೀಗಾಗಿ ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಾ.ಜಿ.ಪರಮೇಶ್ವರ್, ‘ರೈತರಿಗೆ ಬೇಕಿರುವುದು ನ್ಯಾಯಯುತ ಪರಿಹಾರವೇ ಹೊರತು, ದಾರಿ ತಪ್ಪಿಸುವ ಮಾತುಗಳಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ಆರ್ ಅಶೋಕ್ ಮಾಡಿರುವುದು ಆಧಾರರಹಿತ ಆರೋಪಗಳು ಎಂದ ಪರಮೇಶ್ವರ್
ಈ ಕುರಿತಾಗಿ ಡಿಸಿಎಂ ಡಾ.ಜಿ.ಪರಮೇಶ್ವರ್ ಟ್ವೀಟ್ ಮಾಡಿದ್ದು, ‘ಬರ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಮಾಡಿರುವ ಆರೋಪಗಳು ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವಂತಿವೆ. ಸರ್ಕಾರಿ ಆದೇಶದಲ್ಲಿರುವ 17 ಅಂಶಗಳನ್ನು ರೈತರಿಗೆ ವಿಧಿಸಿರುವ 17 ಅಡ್ಡಿಗಳೆಂಬಂತೆ ವಿರೋಧ ಪಕ್ಷದವರು ಬಿಂಬಿಸುತ್ತಿದ್ದಾರೆ. ವಾಸ್ತವವಾಗಿ ಇವು ಅರ್ಹ ರೈತರಿಗೆ ಪರಿಹಾರ ತಲುಪಿಸುವುದು, ಒಂದೇ ವ್ಯಕ್ತಿಗೆ ಎರಡು ಬಾರಿ ಪರಿಹಾರ ಪಾವತಿಯಾಗದಂತೆ ನೋಡಿಕೊಳ್ಳುವುದು ಹಾಗೂ ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದಕ್ಕಾಗಿ ರೂಪಿಸಿರುವ ಆಡಳಿತಾತ್ಮಕ ಕ್ರಮಗಳಾಗಿವೆ’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಡಿಸಿಎಂ ಡಾ.ಜಿ.ಪರಮೇಶ್ವರ್ ಟ್ವೀಟ್
ಬರ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ವಿರೋಧ ಪಕ್ಷದ ನಾಯಕರಾದ ಶ್ರೀ @RAshokaBJP ಅವರು ಮಾಡಿರುವ ಆರೋಪಗಳು ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವಂತಿವೆ.
ಸರ್ಕಾರಿ ಆದೇಶದಲ್ಲಿರುವ 17 ಅಂಶಗಳನ್ನು ರೈತರಿಗೆ ವಿಧಿಸಿರುವ 17 ಅಡ್ಡಿಗಳೆಂಬಂತೆ ವಿರೋಧ ಪಕ್ಷದವರು ಬಿಂಬಿಸುತ್ತಿದ್ದಾರೆ. ವಾಸ್ತವವಾಗಿ ಇವು ಅರ್ಹ ರೈತರಿಗೆ ಪರಿಹಾರ ತಲುಪಿಸುವುದು, ಒಂದೇ ವ್ಯಕ್ತಿಗೆ ಎರಡು ಬಾರಿ ಪರಿಹಾರ ಪಾವತಿಯಾಗದಂತೆ ನೋಡಿಕೊಳ್ಳುವುದು ಹಾಗೂ ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದಕ್ಕಾಗಿ ರೂಪಿಸಿರುವ ಆಡಳಿತಾತ್ಮಕ ಕ್ರಮಗಳಾಗಿವೆ.
ನಮ್ಮ ರೈತರಿಗೆ ನಾನು ಸ್ಪಷ್ಟವಾಗಿ ಹೇಳಬಯಸುವುದೇನೆಂದರೆ, ಬರ ಪರಿಹಾರ ಪಡೆಯಲು ನೀವು ಹೊಸದಾಗಿ ಅರ್ಜಿ ಸಲ್ಲಿಸಬೇಕಿಲ್ಲ. ದಾಖಲೆಗಳನ್ನು ಹಿಡಿದುಕೊಂಡು ಒಂದು ಸರ್ಕಾರಿ ಕಚೇರಿಯಿಂದ ಮತ್ತೊಂದು ಕಚೇರಿಗೆ ಅಲೆಯಬೇಕಿಲ್ಲ.
FRUITS, ಡಿಜಿಟಲ್ ಬೆಳೆ ಸಮೀಕ್ಷೆ, ಪರಿಹಾರ ಪೋರ್ಟಲ್ ಹಾಗೂ ಈಗಾಗಲೇ ಲಭ್ಯವಿರುವ ಕಂದಾಯ ದಾಖಲೆಗಳನ್ನು ಸಂಯೋಜಿಸಿ, ಅರ್ಹ ಫಲಾನುಭವಿಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ಗುರುತಿಸಿ, ಅವರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ಜಮಾ ಮಾಡುವ ವ್ಯವಸ್ಥೆ ಮಾಡಿದ್ದೇವೆ.
1.5 ಕೋಟಿಗೂ ಹೆಚ್ಚು ದಾಖಲೆಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಿ ಪರಿಹಾರ ವಿತರಿಸಲು ಮುಂದಾಗಿದ್ದರೆ ಕನಿಷ್ಠ ಮೂರು ತಿಂಗಳು ಬೇಕಾಗುತ್ತಿತ್ತು. ಆದರೆ ನಮ್ಮ ಡಿಜಿಟಲ್ ವ್ಯವಸ್ಥೆಯಿಂದ ಅನಗತ್ಯ ದಾಖಲೆಗಳ ಪ್ರಕ್ರಿಯೆ ತಪ್ಪಲಿದೆ. ರೈತರ ಅರ್ಹತೆಯನ್ನು ಪರಿಶೀಲಿಸುವ ಜವಾಬ್ದಾರಿ ಅಧಿಕಾರಿಗಳದ್ದೇ ಆಗಿದೆ.
ಪರಿಹಾರಕ್ಕಾಗಿ ರೈತರು ಸರ್ಕಾರದ ಹಿಂದೆ ಅಲೆಯಬಾರದು. ಸರ್ಕಾರದ ವ್ಯವಸ್ಥೆಯೇ ರೈತರ ನೆರವಿಗೆ ಬರಬೇಕು ಎಂಬುದು ನಮ್ಮ ನಿಲುವು.
ಎರಡು ಹೆಕ್ಟೇರ್ ಮಿತಿಯ ಬಗ್ಗೆಯೂ ವಿರೋಧ ಪಕ್ಷದವರು ಪ್ರಶ್ನೆ ಎತ್ತಿದ್ದಾರೆ. ಈ ಮಿತಿ ಕೇಂದ್ರ ಸರ್ಕಾರದ SDRF/NDRF ನಿಯಮಗಳ ಪ್ರಕಾರ 2005ರಿಂದಲೇ ಜಾರಿಯಲ್ಲಿದೆ ಎಂಬುದನ್ನು ಸ್ಪಷ್ಟಪಡಿಸುತ್ತೇನೆ. ಗರಿಷ್ಠ ಎರಡು ಹೆಕ್ಟೇರ್ ಪ್ರದೇಶದ ಬೆಳೆಹಾನಿಗೆ ಪರಿಹಾರ ನೀಡಬಹುದು ಎಂಬುದು ಈ ನಿಯಮದ ಅರ್ಥವೇ ಹೊರತು, ಎರಡು ಹೆಕ್ಟೇರ್ಗಿಂತ ಹೆಚ್ಚು ಜಮೀನು ಹೊಂದಿರುವ ರೈತರಿಗೆ ಪರಿಹಾರ ಸಿಗುವುದಿಲ್ಲ ಎಂದಲ್ಲ.
ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ರಾಜ್ಯದ 226 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಕೇಂದ್ರ ಸರ್ಕಾರದ ಆರ್ಥಿಕ ನೆರವಿಗೆ ಕಾಯದೆ, ನಮ್ಮ ಸರ್ಕಾರವು ಅರ್ಹ ರೈತರಿಗೆ ಗರಿಷ್ಠ ₹2,500 ಮಧ್ಯಂತರ ಪರಿಹಾರ ನೀಡಲು ₹1,250 ಕೋಟಿ ಮೀಸಲಿಟ್ಟಿದೆ. ಸೋಮವಾರದ ನಂತರ ಪರಿಹಾರ ವಿತರಣೆ ಆರಂಭವಾಗಲಿದೆ.
ಇದು ಪರಿಹಾರದ ಮೊದಲ ಕಂತು ಮಾತ್ರ. ಪರಿಷ್ಕೃತ ನಿಯಮಗಳ ಪ್ರಕಾರ ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ ₹11,000, ನೀರಾವರಿ ಬೆಳೆಗಳಿಗೆ ₹22,000 ಹಾಗೂ ಬಹುವಾರ್ಷಿಕ ಮತ್ತು ತೋಟಗಾರಿಕೆ ಬೆಳೆಗಳಿಗೆ ₹30,000 ಪರಿಹಾರ ನೀಡಲು ಅವಕಾಶವಿದೆ. ನಿಗದಿತ ಮಿತಿಯೊಳಗೆ ರೈತರಿಗೆ ಸಲ್ಲಬೇಕಾದ ಉಳಿದ ಪರಿಹಾರವನ್ನು ಕೇಂದ್ರದಿಂದ ಅಗತ್ಯ NDRF ಅನುದಾನ ಬಿಡುಗಡೆಯಾದ ಕೂಡಲೇ ವಿತರಿಸಲಾಗುವುದು.
ರಾಜ್ಯ ಸರ್ಕಾರ ರೈತರ ನೆರವಿಗೆ ಮುಂದಾಗಿದೆ. ಈಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೂ ಅದೇ ರೀತಿ ಸ್ಪಂದಿಸಬೇಕಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುವ ಬದಲು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಿಸಲು ವಿರೋಧ ಪಕ್ಷದವರು ತಮ್ಮ ಪ್ರಭಾವ ಬಳಸಲಿ ಎಂದು ಆಗ್ರಹಿಸುತ್ತೇನೆ.
2024ರಲ್ಲಿ ನಮ್ಮ ರೈತರಿಗೆ ಬರ ಪರಿಹಾರ ಕೊಡಿಸಲು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾಯಿತು. ಪ್ರತಿ ಬಾರಿ ಬರ ಬಂದಾಗಲೂ ಕರ್ನಾಟಕ ಸುಪ್ರೀಂ ಕೋರ್ಟ್ ಬಾಗಿಲು ತಟ್ಟಬೇಕೇ?
ವಿರೋಧ ಪಕ್ಷದವರು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕರ್ನಾಟಕದ ರೈತರ ಪರವಾಗಿ ನಿಲ್ಲಬೇಕು. ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ನಿಭಾಯಿಸುವಂತೆ ಒತ್ತಾಯಿಸಬೇಕು. ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಮತ್ತೊಮ್ಮೆ ಕಾನೂನು ಹೋರಾಟ ನಡೆಸಬೇಕಾದ ಪರಿಸ್ಥಿತಿ ಬರದಂತೆ ನೋಡಿಕೊಳ್ಳಬೇಕು.
ಕರ್ನಾಟಕದ ರೈತರು ಯಾರ ಬಳಿಯೂ ದಾನ ಕೇಳುತ್ತಿಲ್ಲ. ಈಗಾಗಲೇ ಜಾರಿಯಲ್ಲಿರುವ ವಿಪತ್ತು ಪರಿಹಾರ ನಿಯಮಗಳ ಪ್ರಕಾರ ತಮಗೆ ನ್ಯಾಯಯುತವಾಗಿ ಸಲ್ಲಬೇಕಾದ ನೆರವನ್ನು ಸಕಾಲದಲ್ಲಿ ಕೇಳುತ್ತಿದ್ದಾರೆ.
ನಮ್ಮ ರೈತರ ಜೀವನೋಪಾಯವನ್ನು ರಕ್ಷಿಸಲು ಕೇವಲ ತಾತ್ಕಾಲಿಕ ಪರಿಹಾರ ನೀಡಿದರೆ ಸಾಲದು. ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಆಡಳಿತ ವ್ಯವಸ್ಥೆ, ಬರವನ್ನು ಎದುರಿಸುವ ಸಾಮರ್ಥ್ಯವಿರುವ ಕೃಷಿ ಪದ್ಧತಿಗಳು ಹಾಗೂ ಸಂಕಷ್ಟದ ಸಮಯದಲ್ಲಿ ರೈತರಿಗೆ ನೆರವಾಗುವ ವಿಶ್ವಾಸಾರ್ಹ ವ್ಯವಸ್ಥೆಯನ್ನು ಕರ್ನಾಟಕದಲ್ಲಿ ನಿರ್ಮಿಸುವುದು ನಮ್ಮ ಗುರಿಯಾಗಿದೆ.
ಬರ ಎಂಬುದು ನೈಸರ್ಗಿಕ ವಿಕೋಪವಾಗಿರಬಹುದು. ಆದರೆ ಅದರ ನಂತರ ಉಂಟಾಗುವ ರೈತರ ಸಂಕಷ್ಟವು ಆಡಳಿತದ ನಿರ್ಲಕ್ಷ್ಯದಿಂದ ಮತ್ತಷ್ಟು ಹೆಚ್ಚಾಗಲು ಎಂದಿಗೂ ಅವಕಾಶ ನೀಡಬಾರದು.
ಪರಿಹಾರ ಘೋಷಿಸಿದ ಮಾತ್ರಕ್ಕೆ ಸರ್ಕಾರದ ಜವಾಬ್ದಾರಿ ಮುಗಿಯುವುದಿಲ್ಲ. ಆ ಪರಿಹಾರ ರೈತರ ಕೈ ಸೇರಿದಾಗಲೇ ನಮ್ಮ ಜವಾಬ್ದಾರಿ ಪೂರ್ಣಗೊಳ್ಳುತ್ತದೆ. ನಮ್ಮ ಸರ್ಕಾರದ ಕಾರ್ಯವೈಖರಿಯನ್ನು ಅಳೆಯಬೇಕಾದ ಮಾನದಂಡವೂ ಇದೇ ಆಗಿರಬೇಕು. ಆ ಬದ್ಧತೆಯನ್ನು ನಾವು ಖಂಡಿತವಾಗಿ ಉಳಿಸಿಕೊಳ್ಳುತ್ತೇವೆ.
— Dr. G Parameshwara (@DrParameshwara) October 31, 2026
‘ನಮ್ಮ ರೈತರಿಗೆ ನಾನು ಸ್ಪಷ್ಟವಾಗಿ ಹೇಳಬಯಸುವುದೇನೆಂದರೆ, ಬರ ಪರಿಹಾರ ಪಡೆಯಲು ನೀವು ಹೊಸದಾಗಿ ಅರ್ಜಿ ಸಲ್ಲಿಸಬೇಕಿಲ್ಲ. ದಾಖಲೆಗಳನ್ನು ಹಿಡಿದುಕೊಂಡು ಒಂದು ಸರ್ಕಾರಿ ಕಚೇರಿಯಿಂದ ಮತ್ತೊಂದು ಕಚೇರಿಗೆ ಅಲೆಯಬೇಕಿಲ್ಲ. FRUITS, ಡಿಜಿಟಲ್ ಬೆಳೆ ಸಮೀಕ್ಷೆ, ಪರಿಹಾರ ಪೋರ್ಟಲ್ ಹಾಗೂ ಈಗಾಗಲೇ ಲಭ್ಯವಿರುವ ಕಂದಾಯ ದಾಖಲೆಗಳನ್ನು ಸಂಯೋಜಿಸಿ, ಅರ್ಹ ಫಲಾನುಭವಿಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ಗುರುತಿಸಿ, ಅವರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ಜಮಾ ಮಾಡುವ ವ್ಯವಸ್ಥೆ ಮಾಡಿದ್ದೇವೆ’ ಎಂದು ತಿಳಿಸಿದ್ದಾರೆ.
ಸೋಮವಾರದ ನಂತರ ಪರಿಹಾರ ವಿತರಣೆ
‘ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ರಾಜ್ಯದ 226 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಕೇಂದ್ರ ಸರ್ಕಾರದ ಆರ್ಥಿಕ ನೆರವಿಗೆ ಕಾಯದೆ, ನಮ್ಮ ಸರ್ಕಾರವು ಅರ್ಹ ರೈತರಿಗೆ ಗರಿಷ್ಠ ರೂ 2,500 ಮಧ್ಯಂತರ ಪರಿಹಾರ ನೀಡಲು 1,250 ಕೋಟಿ ರೂ ಮೀಸಲಿಟ್ಟಿದೆ. ಸೋಮವಾರದ ನಂತರ ಪರಿಹಾರ ವಿತರಣೆ ಆರಂಭವಾಗಲಿದೆ. ಇದು ಪರಿಹಾರದ ಮೊದಲ ಕಂತು ಮಾತ್ರ. ಪರಿಷ್ಕೃತ ನಿಯಮಗಳ ಪ್ರಕಾರ ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ ರೂ 11,000, ನೀರಾವರಿ ಬೆಳೆಗಳಿಗೆ ರೂ 22,000 ಹಾಗೂ ಬಹುವಾರ್ಷಿಕ ಮತ್ತು ತೋಟಗಾರಿಕೆ ಬೆಳೆಗಳಿಗೆ ರೂ 30,000 ಪರಿಹಾರ ನೀಡಲು ಅವಕಾಶವಿದೆ. ನಿಗದಿತ ಮಿತಿಯೊಳಗೆ ರೈತರಿಗೆ ಸಲ್ಲಬೇಕಾದ ಉಳಿದ ಪರಿಹಾರವನ್ನು ಕೇಂದ್ರದಿಂದ ಅಗತ್ಯ NDRF ಅನುದಾನ ಬಿಡುಗಡೆಯಾದ ಕೂಡಲೇ ವಿತರಿಸಲಾಗುವುದು’ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬರ ಪರಿಹಾರ ವಿಳಂಬ: ರೈತರಿಗೆ ಸರ್ಕಾರದ ಷರತ್ತುಗಳ ವಿರುದ್ಧ ವಿಪಕ್ಷ ನಾಯಕ ಅಶೋಕ್ ಕಿಡಿ
‘ರಾಜ್ಯ ಸರ್ಕಾರ ರೈತರ ನೆರವಿಗೆ ಮುಂದಾಗಿದೆ. ಈಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೂ ಅದೇ ರೀತಿ ಸ್ಪಂದಿಸಬೇಕಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುವ ಬದಲು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಿಸಲು ವಿರೋಧ ಪಕ್ಷದವರು ತಮ್ಮ ಪ್ರಭಾವ ಬಳಸಲಿ’ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




