ರಾಜ್ಯದ ರೈತರ ಕೈಗೆ ಇನ್ನೂ‌ ಸೇರದ ಬೆಳೆ ಪರಿಹಾರ ಹಣ; ಸರ್ಕಾರ ವಿರುದ್ಧ ಅನ್ನದಾತ ಅಸಮಾಧಾನ

ಬರ ಘೋಷಿತ 223 ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ.ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಆದರೆ ಈಗ ಘೋಷಣೆ ಮಾಡಿ ತಿಂಗಳುಗಳು ಕಳೆದರೂ ಪರಿಹಾರದ ಬಿಡಿಗಾಸು ಹಣ ಕೂಡ ರೈತರ ಕೈ ಸೇರಿಲ್ಲ.

ರಾಜ್ಯದ ರೈತರ ಕೈಗೆ ಇನ್ನೂ‌ ಸೇರದ ಬೆಳೆ ಪರಿಹಾರ ಹಣ; ಸರ್ಕಾರ ವಿರುದ್ಧ ಅನ್ನದಾತ ಅಸಮಾಧಾನ
ಸಿಎಂ ಸಿದ್ದರಾಮಯ್ಯ
Follow us
| Updated By: ಆಯೇಷಾ ಬಾನು

Updated on: Dec 28, 2023 | 10:20 AM

ಬೆಂಗಳೂರು, ಡಿ.28: ಬರಗಾಲ(Draft)ದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂ. ಬರ ಪರಿಹಾರ(Drought relief)ವನ್ನು ನೀಡಲಿದೆ ಎಂದು ರಾಜ್ಯ ಸರ್ಕಾರ (Karnataka Government) ಘೋಷಣೆ ಮಾಡಿತ್ತು. ಆದರೆ ಘೋಷಣೆ ಮಾಡಿ ತಿಂಗಳುಗಳೇ ಕಳೆದರೂ ರಾಜ್ಯದ ರೈತರ ಕೈಗೆ ಇನ್ನೂ ಕೂಡ ಬೆಳೆ ಪರಿಹಾರದ ಹಣ ಕೈಗೆ ಸಿಕ್ಕಿಲ್ಲ. ಕೇವಲ ಘೋಷಣೆಗೆ ಮಾತ್ರ ಸೀಮಿತವಾದಂತಿದೆ. ಹೀಗಾಗಿ ರಾಜ್ಯದ ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬರ ಘೋಷಿತ 223 ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ.ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಅಷ್ಟೇ ಅಲ್ಲದೆ ವಾರದ ಅಂತ್ಯದೊಳಗೆ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂ. ಬರ ಪರಿಹಾರ ಬೀಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೂಡ ತಿಳಿಸಿದ್ದರು. ಆದರೆ ಈಗ ಘೋಷಣೆ ಮಾಡಿ ತಿಂಗಳುಗಳು ಕಳೆದರೂ ಪರಿಹಾರದ ಬಿಡಿಗಾಸು ಹಣ ಕೂಡ ರೈತರ ಕೈ ಸೇರಿಲ್ಲ.

ಇದನ್ನೂ ಓದಿ: ಬರಿದಾಗುತ್ತಿರುವ ಕೆಆರ್​ಎಸ್: ನಾಲೆಗಳಿಗೆ ನೀರು ಹರಿಸದಿರಲು ಸರ್ಕಾರ ತೀರ್ಮಾನ, ಬೆಳೆ ಬೆಳೆಯದಂತೆ ಕೃಷಿ ಸಚಿವರ ಸೂಚನೆ

ಕೇಂದ್ರ ಬಿಡುಗಡೆಗೂ ಮುನ್ನ ಮೊದಲ ಕಂತಿನಲ್ಲಿ‌ 2 ಸಾವಿರ ರೂ. ಬೆಳೆ ಪರಿಹಾರ ಮಾಡುವುದಾಗಿ ಬೆಳಗಾವಿ ಅಧಿವೇಶ ಪ್ರಾರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಕೊಟ್ಟಿದ್ದ ಮಾತನ್ನು ತಪ್ಪಿದ್ದಾರೆ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ಇದೆಲ್ಲದರ ಜೊತೆಗೆ ಮತ್ತೊಂದೆಡೆ ನ.‌ 30ರಂದು ರೈತರಿಗೆ ಬೆಳೆ ಪರಿಹಾರವಾಗಿ 2 ಸಾವಿರ ರೂ. ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದರು. ಈಗಾಗಲೇ ರಾಜ್ಯ ಸರ್ಕಾರ ಬರಗಾಲ ಕುರಿತು ಕೇಂದ್ರದ ಬಳಿ 18 ಸಾವಿರ ಕೋಟಿ ರೂ. ಪರಿಹಾರ ಕೇಳಿದೆ. ಸದ್ಯ ಕೇಂದ್ರದಿಂದ ಈವರೆಗೆ ರಾಜ್ಯಕ್ಕೆ ಯಾವುದೇ ಪರಿಹಾರ ಹಣ ಬಿಡುಗಡೆ ಆಗಿಲ್ಲ. ಕೇಂದ್ರ ಹಣ ಬಿಡುಗಡೆ ಮುನ್ನವೇ ರಾಜ್ಯದ ರೈತರಿಗೆ ಬೆಳೆ ಪರಿಹಾರ ಹಣ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ರೈತರಿಗೆ ಬಿಡಿಗಾಸು ಕೂಡ ಕೈಗೆ ಸೇರಿಲ್ಲ.

ಇನ್ನು ರಾಜ್ಯದ 236 ತಾಲೂಕುಗಳ ಪೈಕಿ ಎನ್‌ಡಿಆರ್‌ಎಫ್ ಮಾರ್ಗಸೂಚಿಯ ಪ್ರಕಾರ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 48.19 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟ ಆಗಿದೆ. 18,171.44 ಕೋಟಿ ರೂ. ಆರ್ಥಿಕ ನೆರವಿಗಾಗಿ ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ