AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲಹಂಕ: ಶಿವರಾಮ ಕಾರಂತ ಬಡಾವಣೆ ಭೂಸ್ವಾಧೀನಕ್ಕೆ ರೈತರ ವಿರೋಧ; ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ

ಶಿವರಾಮ ಕಾರಂತ ಬಡಾವಣೆಗೆ ಸುಮಾರು 3500 ಎಕರೆ ಭೂ ಸ್ವಾಧೀನಕ್ಕೆ ಮುಂದಾಗಿರುವ ಬಿಡಿಎ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆದಿದೆ. ಇದೇ ವೇಳೆ ಧರಣಿ ನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಲಹಂಕ: ಶಿವರಾಮ ಕಾರಂತ ಬಡಾವಣೆ ಭೂಸ್ವಾಧೀನಕ್ಕೆ ರೈತರ ವಿರೋಧ; ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ
ಪ್ರತಿಭಟನಾನಿರತ ರೈತರು
TV9 Web
| Edited By: |

Updated on:Oct 02, 2021 | 11:56 AM

Share

ಯಲಹಂಕ: ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಶಿವರಾಂ ಕಾರಂತ ಬಡಾವಣೆಗಾಗಿ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲೂಕಿನ 17 ಗ್ರಾಮಗಳ ರೈತರಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು,. ಬಿಳಿ ಪಂಚೆ ಶಾಲು,ಟೋಪಿ ಮತ್ತು ಕೋಲಿನೊಂದಿಗೆ- ಗಾಂಧೀಜಿಯ ವೇಷ ಧರಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರಾಮಗೊಂಡನಹಳ್ಳಿಯಲ್ಲಿ ಧರಣಿನಿರತ  ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಶಿವರಾಂ ಕಾರಂತ ಬಡಾವಣೆಗೆ 3500 ಎಕರೆ ಜಮೀನು ಸ್ವಾಧೀನಕ್ಕೆ ಮುಂದಾಗಿರುವ ಬಿಡಿಎ ನಿರ್ಧಾರವನ್ನು ರೈತರು ವಿರೋಧಿಸಿದ್ದಾರೆ. ರೈತರ ಜಮೀನು ವಶಪಡಿಸಿಕೊಳ್ಳದಂತೆ ರೈತರಿಂದ ಹೋರಾಟ ನಡೆಸಲು ತೀರ್ಮಾನಿಸಲಾಗಿದ್ದು, ನೂರಾರು ರೈತರಿಂದ ಗಾಂಧಿವೇಶ ಧರಿಸಿ ಹೋರಾಟ ನಡೆಸಲಾಗುತ್ತಿದೆ. ಯಲಹಂಕದ ಕೆಂಪೇಗೌಡ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ರೈತರಿಂದ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿತ್ತು. ಪ್ರತಿಭಟನೆಯ ಮುಖಾಂತರ ರೈತರು ಭೂಸ್ವಾಧೀನವನ್ನು ಕೈಬಿಡುವಂತೆ ಸಿಎಂಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿತ್ತು.

ಪ್ರತಿಭಟನೆಯ ಕುರಿತ ವಿಡಿಯೊ ವರದಿ ಇಲ್ಲಿದೆ:

ಇದನ್ನೂ ಓದಿ:

ಮೈಸೂರು: ಅರ್ಧಕ್ಕೆ ಕೈಕೊಟ್ಟ ಇಲೆಕ್ಟ್ರಿಕ್ ಕಾರು; ರಸ್ತೆಯಲ್ಲೇ ಕಾರು ಬಿಟ್ಟು ತೆರಳಿದ ಮಾಲೀಕ

Tumkur soldier martyred: ಜಮ್ಮು-ಕಾಶ್ಮೀರ ಗಡಿಯಲ್ಲಿ ಗುಂಡಿನ ಚಕಮಕಿ, ತುಮಕೂರಿನ ಯೋಧ ರಂಗಯ್ಯ ಹುತಾತ್ಮ

Published On - 10:43 am, Sat, 2 October 21