ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾಂಗ್ರೆಸ್‌ ಪೋಷಿತ, ಟೂಲ್‌ಕಿಟ್‌ನ ಮುಂದುವರಿದ ಭಾಗ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ

R Ashoka Leader of Opposition: ಲೋಕಸಭೆ ಚುನಾವಣೆಯಲ್ಲಿ ಸೋಲುವುದು ಗ್ಯಾರಂಟಿ ಎಂದು ಕಾಂಗ್ರೆಸ್ ನಿಶ್ಚಯ ಮಾಡಿಕೊಂಡಿದೆ. ಹೇಗಿದ್ದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ರಾಹುಲ್‌ ಗಾಂಧಿ ಮತ್ತಿತರ ಕಾಂಗ್ರೆಸ್‌ ನಾಯಕರು ಬೇಕಾಬಿಟ್ಟಿ ಹೇಳಿಕೆ ನೀಡುವ ಮೂಲಕ ರೈತರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ - ಆರ್. ಅಶೋಕ ಕಿಡಿ

ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾಂಗ್ರೆಸ್‌ ಪೋಷಿತ, ಟೂಲ್‌ಕಿಟ್‌ನ ಮುಂದುವರಿದ ಭಾಗ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ
ಸ್ವಾಮಿನಾಥನ್‌ ವರದಿ ತಿರಸ್ಕರಿಸಿದ್ದ ಕಾಂಗ್ರೆಸ್‌ ಬುರುಡೆ ಬಿಡ್ತಿದೆ - ಅಶೋಕ
Follow us
ಸಾಧು ಶ್ರೀನಾಥ್​
|

Updated on: Feb 15, 2024 | 3:34 PM

ಬೆಂಗಳೂರು, ಫೆಬ್ರವರಿ 15: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ (Farmers Protest) ಕಾಂಗ್ರೆಸ್‌ ಪೋಷಿತವಾಗಿದ್ದು, ಹಿಂದಿನಂತೆಯೇ ಟೂಲ್‌ಕಿಟ್‌ನ ಒಂದು ಭಾಗವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka, Leader of Opposition) ಹೇಳಿದರು. ಈ ಕುರಿತು ಮಾತನಾಡಿದ ಅವರು, ಈ ಹಿಂದೆ ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಕೃಷಿ ಮಸೂದೆಗಳ ವಿಚಾರದಲ್ಲೂ ಕಾಂಗ್ರೆಸ್‌ ಇದೇ ಟೂಲ್‌ಕಿಟ್‌ ತಂತ್ರವನ್ನು ಅನುಸರಿಸಿತ್ತು. ಹಿಂದಿನ ಯುಪಿಎ ಸರ್ಕಾರಕ್ಕಿಂತ ಹೆಚ್ಚು ನೆರವನ್ನು ರೈತರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಸ್ಥಗಿತಗೊಳಿಸಿದೆ. ರೈತ ವಿರೋಧಿ ಮನೋಭಾವದ ಕಾಂಗ್ರೆಸ್ ಈಗ ಪ್ರತಿಭಟನೆಯ ನಾಟಕ ಶುರು ಮಾಡಿದೆ ಎಂದು ದೂರಿದರು.

ಸ್ವಾಮಿನಾಥನ್ ವರದಿ ತಿರಸ್ಕೃತ

ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಗ್ಯಾರಂಟಿ ನೀಡುತ್ತೇವೆಂದು ಕಾಂಗ್ರೆಸ್ ಬುರುಡೆ ಬಿಟ್ಟಿದೆ. 2010 ರಲ್ಲಿ ತಮ್ಮದೇ ಯುಪಿಎ ಸರ್ಕಾರ ಇದ್ದಾಗ ಡಾ.ಎಂ.ಎಸ್.ಸ್ವಾಮಿನಾಥನ್ ಅವರು ಕನಿಷ್ಠ ಬೆಂಬಲ ಬೆಲೆ ಬಗ್ಗೆ ನೀಡಿದ್ದ ವರದಿಯನ್ನು ಸಾರಾಸಗಟಾಗಿ ತಿರಸ್ಕಾರ ಮಾಡಿತ್ತು ಎಂದು ಆರ್.ಅಶೋಕ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಸೋಲುವುದು ಗ್ಯಾರಂಟಿ ಎಂದು ಕಾಂಗ್ರೆಸ್ ನಿಶ್ಚಯ ಮಾಡಿಕೊಂಡಿದೆ. ಹೇಗಿದ್ದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ರಾಹುಲ್‌ ಗಾಂಧಿ ಮತ್ತಿತರ ಕಾಂಗ್ರೆಸ್‌ ನಾಯಕರು ಬೇಕಾಬಿಟ್ಟಿ ಹೇಳಿಕೆ ನೀಡುವ ಮೂಲಕ ರೈತರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ರೈತರ ಆದಾಯ ಹೆಚ್ಚಿಸಲು, ಅನ್ನದಾತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿಸಲು ಯಾರಾದರೂ ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾತ್ರ ಎಂದು ಹೇಳಿದರು.

ಎಂಎಸ್‌ಪಿ ದುಪ್ಪಟ್ಟು

2014-15 ರಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ರೈತರಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಗೆ 1.06 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಆದರೆ 2022-23 ರಲ್ಲಿ ಪ್ರಧಾನಿ ಮೋದಿ ಅವರ ಸರ್ಕಾರ 2.28 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಈ ಮೂಲಕ ಬೆಂಬಲ ಬೆಲೆಯನ್ನು ದುಪ್ಪಟ್ಟು ಮಾಡಿದೆ ಎಂದು ಆರ್.ಅಶೋಕ ವಿವರಿಸಿದ್ದಾರೆ.

ಭತ್ತದ ಬೆಂಬಲ ಬೆಲೆ 67% ಹೆಚ್ಚಳವಾಗಿದೆ. 2013-14 ರಲ್ಲಿ ಭತ್ತಕ್ಕೆ ಕ್ವಿಂಟಾಲ್‌ಗೆ 1,310 ರೂ. ಇದ್ದರೆ, 2023-24 ರಲ್ಲಿ ಕ್ವಿಂಟಾಲ್‌ಗೆ 2,183 ರೂ. ಆಗಿದೆ. ರಾಗಿಯ ಬೆಂಬಲ ಬೆಲೆ 156% ಹೆಚ್ಚಳವಾಗಿದೆ. 2013-14 ರಲ್ಲಿ ರಾಗಿಗೆ ಕ್ವಿಂಟಾಲ್‌ಗೆ 1,500 ರೂ. ಇದ್ದರೆ, 2023-24 ರಲ್ಲಿ ಕ್ವಿಂಟಾಲ್‌ಗೆ 3,846 ರೂ. ಆಗಿದೆ. ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ 59% ಹೆಚ್ಚಳವಾಗಿದೆ. 2013-14 ರಲ್ಲಿ ಮೆಕ್ಕೆಜೋಳಕ್ಕೆ ಕ್ವಿಂಟಾಲ್‌ಗೆ 1,310 ರೂ. ಇದ್ದರೆ, 2023-24 ರಲ್ಲಿ ಕ್ವಿಂಟಾಲ್‌ಗೆ 2,090 ರೂ. ಆಗಿದೆ. ಈ ರೀತಿ 23 ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದರ ಜೊತೆಗೆ, ಬೆಂಬಲ ಬೆಲೆಯಲ್ಲಿ ಅಗಾಧ ಸುಧಾರಣೆ ತಂದಿದ್ದೇ ಮೋದಿ ಸರ್ಕಾರ ಎಂದು ಅವರು ತಿಳಿಸಿದ್ದಾರೆ.

ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಈವರೆಗೆ ದೇಶದ 11.8 ಕೋಟಿ ರೈತರಿಗೆ 2.80 ಲಕ್ಷ ಕೋಟಿ ರೂ. ನೀಡಲಾಗಿದೆ. ಕಿಸಾನ್‌ ರೈಲು ಮೂಲಕ ಕೃಷಿ ಉತ್ಪನ್ನಗಳನ್ನು ಸಾಗಣೆ ಮಾಡಲು 50% ಸಾರಿಗೆ ಸಹಾಯಧನ ನೀಡಲಾಗುತ್ತಿದೆ. 7.48 ಕೋಟಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ವಿತರಿಸಿ 9 ಲಕ್ಷ ಕೋಟಿ ರೂ. ಸಾಲ ನೀಡಲಾಗಿದೆ. ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯಡಿ 47.4 ಕೋಟಿ ರೈತರು ಹೆಸರು ನೋಂದಾಯಿಸಿದ್ದಾರೆ. ಪಿಎಂ ಕೃಷಿ ಸಿಂಚಾಯಿ ಯೋಜನೆಯಡಿ ರೈತರಿಗೆ 2021-2023 ರವರೆಗೆ 93,063 ಕೋಟಿ ರೂ. ನೀಡಲಾಗಿದೆ ಎಂದು ವಿವರಿಸಿದರು.

ಬಜೆಟ್‌ಗೆ 5 ಪಟ್ಟು ಅಧಿಕ

ಎನ್‌ಡಿಎ ಸರ್ಕಾರ ಕೃಷಿ ಆಯವ್ಯಯಕ್ಕಾಗಿ 5 ಪಟ್ಟು ಅಧಿಕ ಅನುದಾನ ನೀಡಿದೆ. 2013-2014 ರಲ್ಲಿ 21,933 ಕೋಟಿ ರೂ. ನೀಡಿದ್ದರೆ, 2023-24 ರಲ್ಲಿ 1,25,036 ಕೋಟಿ ರೂ. ನೀಡಲಾಗಿದೆ ಎಂದು ಆರ್.ಅಶೋಕ ತಿಳಿಸಿದ್ದಾರೆ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್