ಹಿಂಗಾರು ಹಂಗಾಮಿನಲ್ಲಿ ರೈತರ ಜಮೀನಿಗೆ ನೀರು ಹರಿಸುವ ವಿಚಾರವಾಗಿ ನೀರಾವರಿ ಸಲಹಾ ಸಮಿತಿ ಸಭೆ
ಬೆಂಗಳೂರಿನಲ್ಲಿ ನಡೆದ ನೀರಾವರಿ ಇಲಾಖೆ ಅಧಿಕಾರಿಗಳ ಔಪಚಾರಿಕ ಸಭೆಯಲ್ಲಿ ಸೂಚನೆ ನೀಡಲಾಗಿದೆ. ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ, ಎಸಿಎಸ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯಕ್ಕೆ ಸೂಚನೆ ಕೊಡಲಾಗಿದೆ.
ಬೆಂಗಳೂರು: ಹಿಂಗಾರು ಹಂಗಾಮಿನಲ್ಲಿ ರೈತರ ಜಮೀನುಗಳಿಗೆ ನೀರಾವರಿ ಕಾಲುವೆಗಳ ಮೂಲಕ ನೀರು ಹರಿಸುವ ವಿಚಾರವಾಗಿ ಎಸಿಎಸ್ ನೇತೃತ್ವದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ರೈತರ ಹಿತದೃಷ್ಟಿಯಿಂದ ನಿರ್ಣಯ ಕೈಗೊಳ್ಳುವಂತೆ ಸೂಚನೆ ಕೊಡಲಾಗಿದೆ. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಈ ಬಗ್ಗೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ನೀರಾವರಿ ಇಲಾಖೆ ಅಧಿಕಾರಿಗಳ ಔಪಚಾರಿಕ ಸಭೆಯಲ್ಲಿ ಸೂಚನೆ ನೀಡಲಾಗಿದೆ. ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ, ಎಸಿಎಸ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯಕ್ಕೆ ಸೂಚನೆ ಕೊಡಲಾಗಿದೆ.
ಇತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃಷಿ ಬೆಲೆ ಆಯೋಗದ ಸಭೆ ನಡೆಸಿದ್ದಾರೆ. ರೇಸ್‌ಕೋರ್ಸ್ ರಸ್ತೆಯ ಸರ್ಕಾರಿ ಬಂಗಲೆಯಲ್ಲಿ ಸಭೆ ನಡೆದಿದೆ. ಕೃಷಿ, ತೋಟಗಾರಿಕೆ ಬೆಳೆಗಳ ವಿಸ್ತೀರ್ಣ, ಇಳುವರಿ, ಉತ್ಪಾದನೆ, ಸಾಗುವಳಿ ವೆಚ್ಚ, ಮಾರುಕಟ್ಟೆ ಬೆಲೆಯ ವಸ್ತುಸ್ಥಿತಿ ಬಗ್ಗೆ ಚರ್ಚೆ ಮಾಡಲಾಗಿದೆ. ರೈತರು- ಗ್ರಾಹಕರ ನಡುವಿನ ಬೆಲೆ ಪ್ರಸರಣ ವಿಶ್ಲೇಷಣೆ ಕುರಿತು ಚರ್ಚೆ ಮಾಡಲಾಗಿದೆ. ಸಿಎಂ ಬೊಮ್ಮಾಯಿಗೆ ಕೃಷಿ ಬೆಲೆ ಆಯೋಗ ವರದಿ ಸಲ್ಲಿಸಿದೆ.
ಇದನ್ನೂ ಓದಿ: ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!
ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮಳೆಗೆ ಬೆಳೆ ನಾಶ; ದುಬಾರಿಯಾಗಲಿದೆ ತರಕಾರಿ, ಹೂವು, ಹಣ್ಣಿನ ಬೆಲೆ
Published On - 3:12 pm, Tue, 23 November 21