ಬಿಬಿಎಂಪಿ ದುಬಾರಿ ನಕ್ಷೆ ಶುಲ್ಕಕ್ಕೆ ಬೇಸತ್ತ ಸಚಿವರಿಂದ ಹೈಕೋರ್ಟ್ ಮೊರೆ

ವಾಣಿಜ್ಯ ಕಟ್ಟಡ ನಿರ್ಮಾಣದ ನಕ್ಷೆ ಮಂಜೂರಾತಿಗೆ ಬಿಬಿಎಂಪಿ(BBMP) 41.55 ಲಕ್ಷ ರೂ. ಶುಲ್ಕ ವಿಧಿಸಿದೆ. ಈ ಹಿನ್ನಲೆ ಬಿಬಿಎಂಪಿ ಡಿಮಾಂಡ್ ನೋಟಿಸ್ ಪ್ರಶ್ನಿಸಿ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಹಾಗೂ ಅವರ ಪತ್ನಿ ತಬಸ್ಸುಮ್ ಗುಂಡೂರಾವ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಬಿಬಿಎಂಪಿ ದುಬಾರಿ ನಕ್ಷೆ ಶುಲ್ಕಕ್ಕೆ ಬೇಸತ್ತ ಸಚಿವರಿಂದ ಹೈಕೋರ್ಟ್ ಮೊರೆ
ಬಿಬಿಎಂಪಿ ದುಬಾರಿ ನಕ್ಷೆ ಶುಲ್ಕಕ್ಕೆ ಬೇಸತ್ತ ಸಚಿವರಿಂದ ಹೈಕೋರ್ಟ್ ಮೊರೆ
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 17, 2024 | 8:43 PM

ಬೆಂಗಳೂರು, ಸೆ.17: ಬಿಬಿಎಂಪಿ ದುಬಾರಿ ನಕ್ಷೆ ಶುಲ್ಕಕ್ಕೆ ಬೇಸತ್ತು ಸಚಿವರೇ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೌದು, ವಾಣಿಜ್ಯ ಕಟ್ಟಡ ನಿರ್ಮಾಣದ ನಕ್ಷೆ ಮಂಜೂರಾತಿಗೆ ಬಿಬಿಎಂಪಿ(BBMP) 41.55 ಲಕ್ಷ ರೂ. ಶುಲ್ಕ ವಿಧಿಸಿದೆ. ಈ ಹಿನ್ನಲೆ ಬಿಬಿಎಂಪಿ ಡಿಮಾಂಡ್ ನೋಟಿಸ್ ಪ್ರಶ್ನಿಸಿ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಹಾಗೂ ಅವರ ಪತ್ನಿ ತಬಸ್ಸುಮ್ ಗುಂಡೂರಾವ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರ ಮಠದಹಳ್ಳಿ ಬಳಿ ವಾಣಿಜ್ಯ ಕಟ್ಟಡ ನಿರ್ಮಾಣದ ನಕ್ಷೆ ಮಂಜೂರಾತಿಗೆ ದುಬಾರಿ ನಕ್ಷೆ ತೆರಿಗೆ ಪ್ರಶ್ನಿಸಿರುವ ದಿನೇಶ್ ಗುಂಡೂರಾವ್, ಕರ್ನಾಟಕ ಪೌರ ನಿಗಮ ತಿದ್ದುಪಡಿ ರದ್ದತಿಗೂ ಮನವಿ ಸಲ್ಲಿಸಿದ್ದಾರೆ. ಹೌದು, ನೆಲ ಬಾಡಿಗೆ, ರಿಂಗ್ ರೋಡ್ ಶುಲ್ಕ, ತ್ವರಿತ ಸಂಚಾರ ಶುಲ್ಕ, ಸ್ಲಮ್ ಅಭಿವೃದ್ದಿ ಶುಲ್ಕ, ಭದ್ರತಾ ಠೇವಣಿ, ಕೆರೆ ಜೀರ್ಣೋದ್ಧಾರ ಶುಲ್ಕ, ನೀರು ಸರಬರಾಜು ಶುಲ್ಕ, ಕಾರ್ಮಿಕರ ಸೆಸ್ ಹೀಗೆ ಹಲವು ವಿಧದ ತೆರಿಗೆಗಳು ಕಾನೂನುಬಾಹಿರವೆಂದು ಘೋಷಿಸಲು ಮನವಿ ಮಾಡಿದ್ದಾರೆ. ಈ ಹಿನ್ನಲೆ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ನೀಡಿದೆ.

ಇದನ್ನೂ ಓದಿ:ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಾಡಿ ಬಿಬಿಎಂಪಿ ಸುಸ್ತು! ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳ ಪರಿಶೀಲನೆ

ಇನ್ನು ಇತ್ತೀಚೆಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಒಂದು ಬಾರಿ ಪಾವತಿ ಮಾಡಲು ನೀಡಿರುವ ಅವಕಾಶದ ಗಡುವನ್ನು ರಾಜ್ಯ ಸರ್ಕಾರ ಎರಡನೇ ಬಾರಿ ವಿಸ್ತರಣೆ ಮಾಡಿದ್ದು, ಗಡುವನ್ನು ನವೆಂಬರ್ 30 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಫೆಬ್ರವರಿಯಲ್ಲಿ ಪ್ರಾರಂಭಿಸಲಾದ ಒಟಿಎಸ್ ಯೋಜನೆಯು ಬಾಕಿಯ ಮೇಲಿನ ಚಕ್ರಬಡ್ಡಿಯನ್ನು ಮನ್ನಾ ಮಾಡುವ ಮೂಲಕ ಮತ್ತು ದಂಡವನ್ನು ಶೇ 50 ರಷ್ಟು ಕಡಿಮೆ ಮಾಡುವ ಮೂಲಕ ತೆರಿಗೆ ಬಾಕಿ ಇರಿಸಿಕೊಂಡಿರುವವರಿಗೆ ರಿಲೀಫ್ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ