ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ: ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗುರುವಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ದೂರವಾಣಿ ಮೂಲಕ ಗೃಹ ಸಚಿವ ಡಾ. ಜಿ. ಪರಮೇಶ್ವರ್​ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ: ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 30, 2023 | 9:41 PM

ಬೆಂಗಳೂರು, ನವೆಂಬರ್​​ 30: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female feticide) ವನ್ನು ರಾಜ್ಯ ಸರ್ಕಾರ ಗುರುವಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ದೂರವಾಣಿ ಮೂಲಕ ಗೃಹ ಸಚಿವ ಡಾ. ಜಿ. ಪರಮೇಶ್ವರ್​ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರಿಂದ ಭ್ರೂಣ ಹತ್ಯೆ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ. ಒಟ್ಟು ಇಬ್ಬರು ವೈದ್ಯರು ಸೇರಿದಂತೆ 9 ಜನರನ್ನು ಸದ್ಯ ಬಂಧಿಸಲಾಗಿದೆ.

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಕೇಸ್​ನಲ್ಲಿ ಇಲಾಖೆ ತನಿಖೆ ಬಾಕಿ ಇರಿಸಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣ ಬೆಳಕಿಗೆ ಬಂದ ನಂತರ ಹಳೇ ನೋಟಿಸುವ ಮೂಲಕ ಕರ್ತವ್ಯಲೋಪ ಆರೋಪದಡಿ ಮೈಸೂರು ಟಿಹೆಚ್​ಒ ರಾಜೇಶ್ವರಿ ಅಮಾನತು ಮಾಡಲಾಗಿದೆ. ಹಳೇ ನೋಟಿಸ್ ಅಂಟಿಸಿ ಆರೋಗ್ಯ ಇಲಾಖೆಗೆ ಮುಜುಗರ ತಂದಿದ್ದಾರೆ.

ಇದನ್ನೂ ಓದಿ: ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ರಾತ್ರೋ ರಾತ್ರಿ ಮಾತಾ ಆಸ್ಪತ್ರೆ ಗೋಡೆ ಮೇಲೆ 5 ತಿಂಗಳ ಹಳೆ ನೋಟಿಸ್; ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ

ಅನಧಿಕೃತ ಆಸ್ಪತ್ರೆ ವಿರುದ್ಧ ಕ್ರಮಕೈಗೊಳ್ಳದ ಮೈಸೂರು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿ ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಮಾನತಿಗೆ ನಿರ್ಧರಿಸಲಾಗಿದೆ.

ಭ್ರೂಣ ಹತ್ಯೆ ತಡೆಯಲು ಅಧಿಕಾರಿಗಳು ವಿಫಲ ಆಗಿದ್ದಾರೆ: ಸಚಿವ ದಿನೇಶ್ ಗುಂಡೂರಾವ್

ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್​, ಇದು ರಾಜ್ಯಾದ್ಯಂತ ಇರುವ ಜಾಲ. ಭ್ರೂಣ ಹತ್ಯೆ ತಡೆಯಲು ಅಧಿಕಾರಿಗಳು ವಿಫಲ ಆಗಿದ್ದಾರೆ. ನಮ್ಮ ಇಲಾಖೆಯಲ್ಲಿ ಆಗಿರುವ ಲೋಪದ ಬಗ್ಗೆ ಮುಚ್ಚುಮರೆ ಇಲ್ಲ. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಾಗುತ್ತೆ. ಯಾವುದೇ ಮುಲಾಜು ನೋಡಬೇಡಿ ಎಂದು ಸಿಎಂ ಹೇಳಿದ್ದಾರೆ ಎಂದರು.

ಇದೊಂದು ವ್ಯವಸ್ಥಿತ ಜಾಲ. ಕೇವಲ ಮಂಡ್ಯ, ಮೈಸೂರು, ದಾವಣಗೆರೆ ಅಂತ ಹೇಳಲು ಸಾಧ್ಯವಿಲ್ಲ. ಈ ರೀತಿಯ ಚಟುವಟಿಕೆ ರಾಜ್ಯಾದ್ಯಂತ ನಡೆದಿರಬಹುದು. ಹಾಗಾಗಿ ಪ್ರಕರಣದ ಸಮಗ್ರ ತನಿಖೆಯಾಗಬೇಕಿದೆ. ರಾಜ್ಯಕ್ಕೆ ಅನ್ವಯ ಆಗುವ ರೀತಿ ತನಿಖೆ ನಡೆಸಲು ಸೂಕ್ತ ತೀರ್ಮಾನ ಸಿಎಂ ಹಾಗೂ ಗೃಹ ಮಂತ್ರಿ ಮಾಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ‌ಭ್ರೂಣ ಹತ್ಯೆ ಹೇಗೆ ನಡೆಯುತ್ತೆ ಗೊತ್ತಾ? ಎಳೆಎಳೆಯಾಗಿ ಬಿಚ್ಚಿಟ್ಟ ಪುರಸಭೆ ಸದಸ್ಯ

ಕೇವಲ ಕಾನೂನು ಜಾರಿ ಮಾಡುವುದರಿಂದ ಸಮಸ್ಯೆ ಬಗೆಹರಿವುದಿಲ್ಲ. ಹೆಣ್ಣು ಎನ್ನುವ ಕಾರಣಕ್ಕೆ ಕೊಲೆ ಮಾಡುತ್ತಾರೆ ಎಂದರೆ ಇವರದು ಎಂತ ಮನಸ್ಥಿತಿ. ಇದು ಹೇಯ ಕೃತ್ಯ. ದಾಖಲೆ ಪ್ರಕಾರ 270 ಭ್ರೂಣ ಹತ್ಯೆಯಾಗಿದೆ. ಇದಕ್ಕಿಂತ ಹೆಚ್ಚು ಆಗಿರಬಹದು. ಇದನ್ನು ಎಷ್ಟು ವರ್ಷದಿಂದ ಮಾಡಿಕೊಂಡು ಬಂದಿದ್ದಾರೆ ಗೊತ್ತಿಲ್ಲ. ತನಿಖೆ ಮಾಡಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇರುವ ಕಾನೂನನ್ನು ಮತ್ತಷ್ಟು ಬಿಗಿಗೊಳಿಸುತ್ತೇವೆ‌ ಎಂದು ತಿಳಿಸಿದ್ದಾರೆ.

ಈಗ ಬಂಧಿತರಾಗಿರುವವರು ಯಾರು ವೈದ್ಯರಲ್ಲ. ಎಲ್ಲಾ ಲ್ಯಾಬ್ ಟೆಕ್ನಿಷಿಯನ್ ಗಳಿದ್ದಾರೆ. ಮೈಸೂರು ಮಾತಾ ಆಸ್ಪತ್ರೆ ಮಾಲೀಕ ವೈದ್ಯ ಚಂದನ್ ಬಲ್ಲಾಳ್ ಕೂಡ ವೈದ್ಯನಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:18 pm, Thu, 30 November 23

ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್