ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣ: ಸ್ಕ್ಯಾನಿಂಗ್ ಯಂತ್ರಗಳ ಸರಬರಾಜು ಮಾಡಿದ್ದ ಆರೋಪಿ ಬಂಧನ
ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಯಂತ್ರಗಳನ್ನ ಸರಬರಾಜು ಮಾಡಿದ್ದ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣ್ ಗೌಡ ಬಂಧಿತ ಆರೋಪಿ. ಆಯುರ್ವೇದಿಕ್ ವೈದ್ಯ ಮಲ್ಲಿಕಾರ್ಜುನಗೆ ಸ್ಕ್ಯಾನಿಂಗ್ ಯಂತ್ರ ಕೊಟ್ಟಿದ್ದ. ಬಳಿಕ 3 ಸ್ಕ್ಯಾನಿಂಗ್ ಯಂತ್ರಗಳನ್ನ ಭ್ರೂಣ ಪತ್ತೆ ಗ್ಯಾಂಗ್‌ಗೆ ಮಾರಾಟ ಮಾಡಿದ್ದ.
ಬೆಂಗಳೂರು, ಫೆಬ್ರವರಿ 22: ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣ (Fetus gender detection, murder case) ಕ್ಕೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಯಂತ್ರಗಳನ್ನ ಸರಬರಾಜು ಮಾಡಿದ್ದ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣ್ ಗೌಡ ಬಂಧಿತ ಆರೋಪಿ. ಲಕ್ಷ್ಮಣ್ ಗೌಡ ಮಂಗಳೂರಿನಲ್ಲಿ ಆವಿಷ್ಕಾರ ಬ್ರದರ್ಸ್ ಬಯೋ ಮೆಡಿಕಲ್ ಪ್ರೈ.ಲಿ ಕಂಪನಿ ಹೊಂದಿದ್ದ. ಮೂರು ಸ್ಕ್ಯಾನಿಂಗ್ ಯಂತ್ರಗಳನ್ನು ಅಕ್ರಮವಾಗಿ ನೀಡಿದ್ದ. ಆಯುರ್ವೇದಿಕ್ ವೈದ್ಯ ಮಲ್ಲಿಕಾರ್ಜುನಗೆ ಸ್ಕ್ಯಾನಿಂಗ್ ಯಂತ್ರ ಕೊಟ್ಟಿದ್ದ. ಬಳಿಕ 3 ಸ್ಕ್ಯಾನಿಂಗ್ ಯಂತ್ರಗಳನ್ನ ಭ್ರೂಣ ಪತ್ತೆ ಗ್ಯಾಂಗ್‌ಗೆ ಮಾರಾಟ ಮಾಡಿದ್ದ. ಈ ಪೈಕಿ ಒಂದು ಸ್ಕ್ಯಾನಿಂಗ್ ಮಷಿನ್ ನನ್ನು ಸಿಐಡಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಸದ್ಯ ಪ್ರಕರಣದಲ್ಲಿ 12 ಜನರನ್ನು ಬಂಧಿಸಲಾಗಿದ್ದು, ಸಿಐಡಿ ತಂಡ ಬಹುತೇಕ ತನಿಖೆಯನ್ನು ಮುಕ್ತಾಯಗೊಳಿಸಿದೆ. ಕೆಲವೇ ದಿನಗಳಲ್ಲಿ ಆರೋಗ್ಯ ಇಲಾಖೆಗೆ ವರದಿ ಸಲ್ಲಿಕೆ ಮಾಡಲಿದೆ. ಇತ್ತೀಚಿನ ಸಿಐಡಿ ತಂಡದ ತನಿಖೆಯ ಪ್ರಕಾರ ಭ್ರೂಣ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರಗಳ ಮೂಲ ಸಿಕ್ಕಿರಲಿಲ್ಲ. ಕಳೆದ ಎರಡು ತಿಂಗಳಿಂದ ತನಿಖೆ ನಡೆಸುತ್ತಿದ್ದರೂ ಸಿಐಡಿಗೆ ಸ್ಕ್ಯಾನಿಂಗ್ ಯಂತ್ರಗಳ ಖರೀದಿ ಮೂಲ ಮಾತ್ರ ಪತ್ತೆಯಾಗಿರಲಿಲ್ಲ.
ಇದನ್ನೂ ಓದಿ: ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ದಂಧೆ ಪ್ರಕರಣ: ತನಿಖೆ ಮುಕ್ತಾಯಗೊಳಿಸಿದ ಸಿಐಡಿ ತಂಡ
ಈ ಬಗ್ಗೆ ಆರೋಗ್ಯ ಇಲಾಖೆಗೆ ಪತ್ರ ಬರೆದರೂ ಏನೂ ಪ್ರಯೋಜನವಾಗಿರಲ್ಲಿ. ಹೀಗಾಗಿ ಸರ್ಕಾರದಿಂದ ಅನುಮತಿ ಪಡೆದು ಆರೋಗ್ಯ ಇಲಾಖೆಗೆ ವರದಿ ನೀಡಲು ಸಿದ್ದತೆ ಮಾಡಲಾಗಿತ್ತು. ಸ್ಕ್ಯಾನಿಂಗ್ ಯಂತ್ರಗಳ ಮಾರಾಟ ಹಾಗೂ ಬಳಕೆ ಅಕ್ರಮ ಕಂಡುಬಂದಿದ್ದು, ಆದರೆ ಭ್ರೂಣ ಪತ್ತೆಗೆ ಬಳಸುತ್ತಿದ್ದ ಯಂತ್ರಗಳು ತಂದಿದ್ದು ಎಲ್ಲಿ ಎನ್ನುವುದು ನಿಗೂಢವಾಗಿತ್ತು. ಆದರೆ ಸದ್ಯ ಸಿಐಡಿ ಪೊಲೀಸರು ಸ್ಕ್ಯಾನಿಂಗ್ ಯಂತ್ರಗಳನ್ನ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಭ್ರೂಣ ಹತ್ಯೆ ಪತ್ತೆ: ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಲರ್ಟ್, ಟಾಸ್ಕ್ ಪೋರ್ಸ್ ರಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಸದ್ದಿದ್ದಲ್ಲದೆ ಭ್ರೂಣಹತ್ಯೆ ನಡೀತಿತ್ತು. ಡಿಸೆಂಬರ್ 13 ರಂದು ಅಬಾರ್ಷನ್ ಮಾಡುವಾಗ ರೆಡ್ ಹ್ಯಾಂಡ್ ಆಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದರು. ಇದೇ ಆಸ್ಪತ್ರೆಯಲ್ಲಿ ನಡೀತಿದ್ದ ಕರಾಳ ದಂಧೆ ಈಗ ಬಟಾಬಯಲಾಗಿತ್ತು.
ರಾಜ್ಯದಲ್ಲಿ ಅವ್ಯಾಹತವಾಗಿ ನಡೀತಿದ್ದ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದ ಬಯಲಾಗುತ್ತಿದ್ದಂತೆ ಸರ್ಕಾರ ಫುಲ್ ಅಲರ್ಟ್ ಆಗಿತ್ತು. 900 ಭ್ರೂಣಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದಂತೆ ಆರೋಗ್ಯ ಸಚಿವರು ಕೂಡ ಅಲರ್ಟ್ ಆಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:12 pm, Thu, 22 February 24