AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಬಾಡಿ ಶೇಮಿಂಗ್ ಮಾಡಿದ ನಾಲ್ವರ ವಿರುದ್ಧ FIR

Bengaluru News: ಬೆಂಗಳೂರಿನ ಕೆ.ಆರ್. ಪುರಂನಲ್ಲಿ ಸಂಚಾರಿ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಬಾಡಿ ಶೇಮಿಂಗ್ ಮಾಡಿದ ನಾಲ್ವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಈ ಸಂಪೂರ್ಣ ಕೃತ್ಯ ಬಾಡಿವೋರ್ನ್ ಕ್ಯಾಮರಾದಲ್ಲಿ ವಿಡಿಯೋ ಸೆರೆಯಾಗಿದ್ದು, ಸದ್ಯ ಅದನ್ನ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು: ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಬಾಡಿ ಶೇಮಿಂಗ್ ಮಾಡಿದ ನಾಲ್ವರ ವಿರುದ್ಧ FIR
ಮಹಿಳಾ ಪೊಲೀಸ್​ ಅಧಿಕಾರಿ ಮೇಲೆ ಹಲ್ಲೆImage Credit source: tv9 kannada
ರಾಚಪ್ಪಾಜಿ ನಾಯ್ಕ್
| Edited By: |

Updated on: Aug 16, 2026 | 3:11 PM

Share

ಮುಖ್ಯಾಂಶಗಳು

  • ಮಹಿಳಾ ಪೊಲೀಸ್​ ಅಧಿಕಾರಿ ಮೇಲೆ ಹಲ್ಲೆ, ಬಾಡಿ ಶೇಮಿಂಗ್
  • ಬೆಂಗಳೂರಿನ K.R.ಪುರಂ ಠಾಣೆಯಲ್ಲಿ ನಾಲ್ವರ ವಿರುದ್ಧ FIR
  • ಬಾಡಿವೋರ್ನ್ ಕ್ಯಾಮರಾದಲ್ಲಿ ವಿಡಿಯೋ ರೆಕಾರ್ಡ್

ಬೆಂಗಳೂರು, ಆಗಸ್ಟ್​​ 16: ಕರ್ತವ್ಯನಿರತ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಕೆಲ ವ್ಯಕ್ತಿಗಳಿಂದ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅತ್ಯಂತ ಕೀಳುಮಟ್ಟದ ಪದಗಳಿಂದ ಬಾಡಿ ಶೇಮಿಂಗ್ (Body Shaming) ಮಾಡಿ ಅವಮಾನಿಸಿರುವ ಘಟನೆ ಬೆಂಗಳೂರಿನ (bengaluru) ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಚಾರಿ ಮಹಿಳಾ ಪಿಎಸ್ಐ ನಯಾನಾ ಮೇಲೆ ಹಲ್ಲೆ ನಡೆದಿದ್ದು, ಹೇಮಂತ್ ರೆಡ್ಡಿ, ರಾಧಾಕೃಷ್ಣ ರೆಡ್ಡಿ, ಹರ್ಷಿತ್ ರೆಡ್ಡಿ ಹಾಗೂ ರಾಹುಲ್ ಎಂಬುವವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ನಡೆದಿದ್ದೇನು?

ಭಟ್ಟರಹಳ್ಳಿ ಜಂಕ್ಷನ್ ಬಳಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಎಂಬುವವರೊಂದಿಗೆ ಆರೋಪಿಗಳು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡುತ್ತಿದ್ದರು. ಇದನ್ನು ಗಮನಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಗಲಾಟೆ ಬಿಡಿಸಲು ಸಂಚಾರಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನಯನಾ, ಸ್ಥಳಕ್ಕೆ ಬಂದಿದ್ದಾರೆ.

‘ಎಮ್ಮೆ ತರ ಇದ್ದೀಯಾ, ಹೊಟ್ಟೆಗೇನು ತಿಂತೀಯಾ?’

ಒಬ್ಬ ಜವಾಬ್ದಾರಿಯುತ ಮಹಿಳಾ ಅಧಿಕಾರಿಯಾಗಿ ಕರ್ತವ್ಯ ಪಾಲನೆಗೆ ಮುಂದಾದ ಅವರ ಮೇಲೆಯೇ ಆರೋಪಿಗಳು ದರ್ಪ ಮೆರೆದಿದ್ದಾರೆ. ಘಟನೆ ವೇಳೆ ಆರೋಪಿಗಳು ಪಿಎಸ್‌ಐ ನಯನಾ ಮೇಲೆ ಹಲ್ಲೆ ನಡೆಸಿರುವುದಲ್ಲದೆ, ‘ಎಮ್ಮೆ ತರ ಇದ್ದೀಯಾ, ಹೊಟ್ಟೆಗೇನು ತಿಂತೀಯಾ?’ ಎಂದು ಬಾಡಿ ಶೇಮಿಂಗ್​ ಮಾಡಿದ್ದಾರೆ.​ ಅಷ್ಟೇ ಅಲ್ಲದೆ ‘ಇವಳನ್ನ ಇವತ್ತೇ ಸಸ್ಪೆಂಡ್ ಮಾಡಿಸುತ್ತೇನೆ’ ಎಂದು ಅಹಂಕಾರದ ಮಾತುಗಳನ್ನಾಡಿ ಬೆದರಿಕೆ ಹಾಕಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ, ನೂರಾರು ಜನರ ಎದುರು ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಂದಿಗೆ ಹೀಗೆ ವರ್ತಿಸಿರುವ ಆರೋಪಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರ ಬಲಿ ಪ್ರಕರಣ: ಮೃತರ ಕುಟುಂಬಸ್ಥರ ಒಪ್ಪಿಗೆ ಇಲ್ಲದೆಯೇ ಮುಗಿಯಿತಾ ಪೋಸ್ಟ್​ಮಾರ್ಟಮ್?

ಇನ್ನು ಈ ಸಂಪೂರ್ಣ ಕೃತ್ಯವು ಕರ್ತವ್ಯದಲ್ಲಿದ್ದ ಸಿಬ್ಬಂದಿಯ ಬಾಡಿವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಕ್ಷ್ಯವನ್ನು ಆಧರಿಸಿ ನಾಲ್ವರು ಆರೋಪಿಗಳ ವಿರುದ್ಧ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ