ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್, ಪ್ರಕರಣ ಸಿಐಡಿಗೆ ವರ್ಗಾವಣೆ
ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಈವರೆಗೂ 10 ಜನರು ಅರೆಸ್ಟ್ ಆಗಿದ್ದಾರೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್ ಮಂಜುಳಾ ಅವರು ಕೆಲಸ ಬಿಟ್ಟಿದ್ದರು. ಬಳಿಕ ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದರು. ಇನ್ನು ಮತ್ತೊಂದೆಡೆ ಈ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಮಾಡಲು ತಯಾರಿ ನಡೆದಿದೆ.
ಬೆಂಗಳೂರು, ಡಿ.02: ಬೆಂಗಳೂರು ಸೇರಿ 3 ಜಿಲ್ಲೆಗಳಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್ (Female Foeticide) ಸಂಬಂಧ ದಿನೇ ದಿನೇ ಮಹತ್ವದ ಬೆಳವಣಿಗೆಗಳು ನಡೆಯುತ್ತಲೇ ಇವೆ. ಸದ್ಯ ಈ ಕೇಸ್ ಸಂಬಂಧ ಮತ್ತೊಬ್ಬ ಆರೋಪಿಯನ್ನು ಬೈಯಪ್ಪನಹಳ್ಳಿ ಪೊಲೀಸರು (Byappanahalli Police) ಬಂಧಿಸಿದ್ದಾರೆ. ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಅವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಈವರೆಗೂ 10 ಜನರು ಅರೆಸ್ಟ್ ಆಗಿದ್ದಾರೆ. ಇನ್ನು ಮತ್ತೊಂದೆಡೆ ಈ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಮಾಡಲು ತಯಾರಿ ನಡೆದಿದೆ.
ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್ ಮಂಜುಳಾ ಅವರು ಕೆಲಸ ಬಿಟ್ಟಿದ್ದರು. ಬಳಿಕ ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದರು. ಕಳೆದ ಹಲವಾರು ದಿನಗಳಿಂದ ಪೊಲೀಸರು ಮಂಜುಳಾರನ್ನು ಹುಡುಕಾಟ ನಡೆಸುತ್ತಿದ್ದರು. ಸದ್ಯ ಮಂಜುಳಾ ಕೆಲಸ ಮಾಡ್ತಿದ್ದ ಖಾಸಗಿ ಆಸ್ಪತ್ರೆಗೆ ತೆರಳಿ ಬೈಯ್ಯಪ್ಪಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು
ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್ ಸಿಐಡಿಗೆ ವರ್ಗಾವಣೆ
ಇನ್ನು ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧದ ಕೇಸ್ ಫೈಲ್ ಹಾಗು ಬಂಧಿತ ಆರೋಪಿಗಳನ್ನು ಇಂದು ಸಿಐಡಿಗೆ ನೀಡಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಸಿಐಡಿಯ ಡಿವೈಎಸ್ ಪಿ ನಾಗರಾಜ್ ರನ್ನು ಪ್ರಕರಣದ ಮುಂದಿನ ತನಿಖಾ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇದುವರೆಗೆ ಪ್ರಕರಣದ ತನಿಖೆ ನಡೆಸಿದ್ದ ಬೈಯಪ್ಪನಹಳ್ಳಿ ಇನ್ಸ್ಪೆಕ್ಟರ್ ಎಂ ಪ್ರಶಾಂತ್ ಅವರು ಕೇಸನ್ನು ವರ್ಗಾಯಿಸಲಿದ್ದಾರೆ.
ಬೈಯಪ್ಪನಹಳ್ಳಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪ್ರಕರಣ ಬಯಲಿಗೆ ತರಲಾಗಿತ್ತು. ಪ್ರಕರಣ ತನಿಖೆ ವೇಳೆ ದಾಖಲಾತಿಗಳ ಸಹಿತ 88 ದಿನಗಳಲ್ಲಿ 242 ಭ್ರೂಣ ಹತ್ಯೆ ಪತ್ತೆಯಾಗಿತ್ತು. ಮಾಹಿತಿ ಮೇರೆಗೆ 900 ಕ್ಕೂ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಮಾಡಿದ್ದು ಬೆಳಕಿಗೆ ಬಂದಿತ್ತು. ಪ್ರಕರಣದ ಗಂಭೀರತೆ ಅರಿತು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ