ಬೆಂಗಳೂರು ಖಾಸಗಿ ಕಾಲೇಜು ಯುವತಿಯರ ನಡುವೆ ಜಡೆ ಜಗಳ, ಕೆಟ್ಟದಾಗಿ ಬೆರಳು ತೋರಿಸಿ ಜಗಳ ಮಾಡಿದ ವಿಡಿಯೋ ವೈರಲ್

ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಕ್ಯಾಂಟೀನ್​ನಲ್ಲಿ ಯುವತಿಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಬೆಂಗಳೂರು ಖಾಸಗಿ ಕಾಲೇಜು ಯುವತಿಯರ ನಡುವೆ ಜಡೆ ಜಗಳ, ಕೆಟ್ಟದಾಗಿ ಬೆರಳು ತೋರಿಸಿ ಜಗಳ ಮಾಡಿದ ವಿಡಿಯೋ ವೈರಲ್
ಬೆಂಗಳೂರು ಖಾಸಗಿ ಕಾಲೇಜು ಯುವತಿಯರ ನಡುವೆ ಜಡೆ ಜಗಳ
Follow us
TV9 Web
| Updated By: ಆಯೇಷಾ ಬಾನು

Updated on:Oct 11, 2022 | 11:12 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಇಬ್ಬರು ಹುಡುಗಿಯರ ನಡುವೆ ಜಗಳವಾಗಿದ್ದು ಯುವತಿಯ ಕಿತ್ತಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಕ್ಯಾಂಟೀನ್​ನಲ್ಲಿ ಯುವತಿಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ವೈರಲ್ ಆದ ವಿಡಿಯೋದಲ್ಲಿ ಮೊದಲಿಗೆ, ಇಬ್ಬರು ಯುವತಿಯರ ನಡುವೆ ಜಗಳ ಶುರುವಾಗುತ್ತೆ. ವಾಗ್ವಾದ ನಡೆಯುತ್ತೆ. ಬಳಿಕ ಮಾತಿಗೆ ಮಾತು ಬೆಳೆದು ಇಬ್ಬರೂ ಕೈ ಮಿಲಾಯಿಸುವ ಹಂತಕ್ಕೆ ಹೋಗುತ್ತಾರೆ. ಇಬ್ಬರೂ ಪರಸ್ಪರ ಹೊಡೆದಾಡಿಕೊಂಡು ಕೆಟ್ಟ ಕೆಟ್ಟ ಶಬ್ದಗಳಿಂದ ಜಗಳವಾಡಿ, ಕೆಟ್ಟದಾಗಿ ಬೆರಳು ತೋರಿಸುತ್ತ ವರ್ತಿಸಿರುವುದನ್ನು ವಿಡಿಯೋ ಮಾಡಲಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಇದನ್ನೂ ಓದಿ: ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಸಹಾಯದ ಅಗತ್ಯವಿದೆ ಎಂದು ಸೂಚಿಸುವ ಚಿಹ್ನೆಗಳಿವು

ಈ ಯುವತಿಯರ ನಡುವೆ ಜಗಳ ಆಗಲು ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಆದ್ರೆ ಯುವತಿಯರು ಹೊಡೆದಾಡಿಕೊಂಡರೂ ಯಾರು ಸಹಾಯಕ್ಕೆ ಬರಾದಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಇನ್ನು ಇದೇ ರೀತಿಯ ಘಟನೆ ಇತ್ತೀಚೆಗೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇಬ್ಬರು ಮಹಿಳೆಯರು ತೂಕದ ಯಂತ್ರಕ್ಕಾಗಿ ಜಗಳ ಮಾಡಿದ್ದರು. ವೀಡಿಯೊದಲ್ಲಿ, ಗುಲಾಬಿ ಬಣ್ಣದ ಬಿಗಿಯುಡುಪು ಧರಿಸಿದ ಮಹಿಳೆ ತೂಕದ ಯಂತ್ರವನ್ನು ಬಳಸಲು ತನ್ನ ಸರದಿಗಾಗಿ ಕಾಯುತ್ತಿದ್ದಳು. ಅಷ್ಟರಲ್ಲಿ ಹಸಿರು ಟೀ ಶರ್ಟ್ ತೊಟ್ಟ ಮತ್ತೊಬ್ಬ ಮಹಿಳೆ ಆ ಯಂತ್ರದತ್ತ ಧಾವಿಸಿ ಅವಳನ್ನು ತಳ್ಳುತ್ತಾಳೆ. ನಂತರ ಇಬ್ಬರೂ ಮಹಿಳೆಯರು ಜಗಳವಾಡುತ್ತಾರೆ, ಒಬ್ಬರನ್ನೊಬ್ಬರು ಕಪಾಳಮೋಕ್ಷ ಮಾಡುತ್ತಾರೆ ಮತ್ತು ಪರಸ್ಪರರ ಕೂದಲನ್ನು ಎಳೆದಾಡಿಕೊಂಡು ಜಗಳವಾಡಿದ್ದರು. ಈ ವಿಡಿಯೋ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:03 am, Tue, 11 October 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ