ಬೆಂಗಳೂರು: ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ಯುವಕರ ನಡುವೆ ಗಲಾಟೆ
ಬೆಂಗಳೂರು ನಗರದಲ್ಲಿ ಇಂದು ಹಲವೆಡೆ ಈದ್ ಮಿಲಾದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಆದರೆ, ಕಾರ್ಪೋರೇಷನ್ ಸರ್ಕಲ್ ಬಳಿ ಯುವಕರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಬೆಂಗಳೂರು, ಸೆ.28: ನಗರದಲ್ಲಿ ಇಂದು ಹಲವೆಡೆ ಈದ್ ಮಿಲಾದ್ (Eid Milad) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಆದರೆ, ಕಾರ್ಪೋರೇಷನ್ ಸರ್ಕಲ್ ಬಳಿ ಯುವಕರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ.
ಇಂದು ರಾಜ್ಯಾದ್ಯಂತ ಮುಸ್ಲಿಂ ಸಮುದಾಯದ ಜನರು ಸಂಭ್ರಮ ಸಡಗರದಿಂದ ಮೊಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆಯನ್ನು (ಈದ್ ಮಿಲಾದ್) ಆಚರಿಸಿದ್ದಾರೆ. ಹಲವೆಡೆ ಮೆರವಣಿಗೆ ನಡೆಸಿ ಸಿಹಿ ಹಂಚಿ ಸಂಭ್ರಮಿಸಿದರು. ಅದಾಗ್ಯೂ, ಕೆಲವೆಡೆ ಅಹಿತಕರ ಘಟನೆಗಳು ನಡೆದಿವೆ.
ಬೆಂಗಳೂರಿನಲ್ಲಿ ಯುವಕರ ನಡುವೆ ಮಾರಾಮಾರಿ ನಡೆದರೆ, ಇತ್ತ ವಿಜಯಪುರ ನಗರದ ಶಿವಾಜಿ ವೃತ್ತದಲ್ಲಿ ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಅವರ ಭಾವಚಿತ್ರ ಇದ್ದ ಬ್ಯಾನರ್ ಅನ್ನು ಹಸಿರು ಬಾವುಟದಿಂದ ಚುಚ್ಚಿ ಹರಿದು ಹಾಕಿದ ಘಟನೆ ನಡೆದಿದೆ.
ಇದನ್ನೂ ಓದಿ: ವಿಜಯಪುರ: ಈದ್ ಮಿಲಾದ್ ಮೆರವಣಿಗೆಯಲ್ಲಿದ್ದ ಯುವಕರಿಂದ ಶಾಂತಿ ಸೌಹಾರ್ದತೆ ಕದಡಲು ಯತ್ನ
ಗಣೇಶ ಹಬ್ಬಕ್ಕೆ ಶುಭಕೋರಿ ಯತ್ನಾಳ್ ಅವರ ಭಾವಚಿತ್ರ ಇರುವ ಬ್ಯಾನರ್ ಹಾಕಲಾಗಿತ್ತು. ಆದರೆ ಈದ್ ಮೆರವಣಿಗೆಯಲ್ಲಿ ಸಾಗುತ್ತಿದ್ದ ಯುವಕ ಚುಚ್ಚಿ ಹರಿದು ಹಾಕಿದ್ದಾನೆ. ಈ ದೃಶ್ಯವನ್ನು ಮೊಬೈಲ್ ಮೂಲಕ ಸೆರೆಹಿಡಿಯಲಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಇನ್ನೊಂದೆಡೆ, ಕೋಲಾರ ನಗರದ ಕ್ಲಾಕ್ ಟವರ್ನಲ್ಲಿ ವಿವಾದಿತ ಕತ್ತಿ ಸಂದೇಶ ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕತ್ತಿ ತೆರವುಗೊಳಿಸದಿದ್ದರೆ ತ್ರೀಶೂಲ ಹಾಕುವುದಾಗಿ ಕೋಲಾರ ಸಂಸದ ಎಸ್.ಮುನಿಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿ ಹಾಗೂ ಎಸ್ಪಿ ವಿವಾದಿತ ಕತ್ತಿಯನ್ನು ತೆರವುಗೊಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:03 pm, Thu, 28 September 23