‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಎಂದಿದ್ದ ಬಿಕೆ ಹರಿಪ್ರಸಾದ್ ವಿರುದ್ಧ ದೂರು ದಾಖಲು
ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ವಿರುದ್ಧ ಹಿಂದೂಪರ ಹೋರಾಟಗಾರ ತೇಜಸ್ ಗೌಡ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಉಮರ್ ಖಾಲಿದ್ ರಾಷ್ಟ್ರೀಯವಾದಿ ಎಂದಿರುವ ಹರಿಪ್ರಸಾದ್, ಎಬಿವಿಪಿ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದರು. ಈ ಹೇಳಿಕೆಗಳು ಸಮಾಜದಲ್ಲಿ ದ್ವೇಷಭಾವನೆ ಮೂಡಿಸುತ್ತಿವೆ ಎಂದು ಆರೋಪಿಸಿ ಹರಿಪ್ರಸಾದ್ ವಿರುದ್ಧ ಪ್ರಕರಣ ದಾಖಲಿಸಲು ಮನವಿ ಮಾಡಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 16: 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿ, ಜೈಲಿನಲ್ಲಿರುವ ಉಮರ್ ಖಾಲಿದ್ ರಾಷ್ಟ್ರೀಯವಾದಿ. ಆತನ ಬಗ್ಗೆ ಮಾತನಾಡಲು ಎಬಿವಿಪಿಗೆ ಯಾವುದೇ ಹಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಸದ್ಯ ರಾಜ್ಯದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಇದೇ ವಿಚಾರವಾಗಿ ಬಿ.ಕೆ.ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಕೆ ಹರಿಪ್ರಸಾದ್ ವಿರುದ್ಧ ಕೇಸ್ ದಾಖಲಿಸುವಂತೆ ಮನವಿ
ಎಬಿವಿಪಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಹಿನ್ನೆಲೆಯಲ್ಲಿ ಬಿಕೆ ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಗೆ ಹಿಂದೂಪರ ಹೋರಾಟಗಾರ ತೇಜಸ್ ಗೌಡ ದೂರು ನೀಡಿದ್ದಾರೆ. ಸಮಾಜದಲ್ಲಿ ದ್ವೇಷಭಾವನೆ ಮೂಡಿಸುತ್ತಿದ್ದು ಕೇಸ್ ದಾಖಲಿಸುವಂತೆ ಮನವಿ ಮಾಡಿದ್ದಾರೆ.
ಭಯೋತ್ಪಾದಕರ ಬಗ್ಗೆ ಮಾತನಾಡುವವರು ಭಯೋತ್ಪಾದಕರಿಗೆ ಸಮ: ತೇಜಸ್ ಗೌಡ
ದೂರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ದೂರುದಾರ ತೇಜಸ್ ಗೌಡ, ‘ನಿನ್ನೆ ಸಂಜೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಒಂದು ಹೇಳಿಕೆ ನೀಡಿದ್ದಾರೆ. ಉಮರ್ ಖಾಲಿದ್ ರಾಷ್ಟ್ರೀಯವಾದಿ ಅಂತ ಹೇಳಿದ್ದಾರೆ. ಒಬ್ಬ ಭಯೋತ್ಪಾದಕನ ಬಗ್ಗೆ ವಿಧಾನಸೌಧದಲ್ಲಿ ನಿಂತು ಹೇಳಿಕೆ ಕೊಡುತ್ತಾರೆ’ ಎಂದಿದ್ದಾರೆ.
ಇದನ್ನೂ ಓದಿ: ‘ಉಮರ್ ಖಾಲಿದ್ ದೇಶ ಪ್ರೇಮಿ’: ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಬಣ್ಣನೆ, ಎಬಿವಿಪಿ ವಿರುದ್ಧ ವಾಗ್ದಾಳಿ
‘ದೆಹಲಿಯಲ್ಲಿ ಗಲಭೆ ಎಬ್ಬಿಸಿದವನ ಬಗ್ಗೆ ಮಾತನಾಡುತ್ತಾರೆ. ಸಮಾಜದಲ್ಲಿ ದ್ವೇಷ ಮೂಡುವಂತ ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಿಕೆ ಹರಿಪ್ರಸಾದ್ ಹೇಳಿಕೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಭಯೋತ್ಪಾದಕರ ಬಗ್ಗೆ ಮಾತನಾಡುವವರು ಭಯೋತ್ಪಾದಕರಿಗೆ ಸಮ. ಪೊಲೀಸರು ಕಾನೂನು ತಜ್ಞರ ಸಲಹೆ ಪಡೆದು ಕ್ರಮಕೈಗೊಳ್ಳುತ್ತೇನೆ ಹೇಳಿದ್ದಾರೆ’ ಎಂದರು.
ಉಮರ್ ಖಾಲಿದ್ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ
ಇನ್ನು ಉಮರ್ ಖಾಲಿದ್ ಕುರಿತಾಗಿ ನಿರ್ದೇಶಕ ಲಲಿತ್ ವಾಚಾನಿಯವ್ರು ಪ್ರಿಸರ್ನ್ ನಂಬರ್ 626710 ಈಸ್ ಪ್ರೆಸೆಂಟ್ ಸಾಕ್ಷ್ಯಚಿತ್ರ ನಿರ್ಮಿಸಿದ್ದಾರೆ. ಇದನ್ನ ಬೆಂಗಳೂರಿನ ನಾಗರಬಾವಿಯಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಕಾನೂನು ಮತ್ತು ಸಮಾಜ ಸಮಿತಿಯೂ ಸೆಪ್ಟೆಂಬರ್ 14ರ ಸಂಜೆ 7ಗಂಟೆಗೆ ಪ್ರದರ್ಶನಕ್ಕೆ ಸಜ್ಜಾಗಿತ್ತು.
ಇದನ್ನೂ ಓದಿ: ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧ: ಅನುಮತಿ ಕೊಟ್ಟರೆ ಉಗ್ರ ಹೋರಾಟದ ಎಚ್ಚರಿಕೆ
ಆದರೆ ಈ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಎಬಿವಿಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೇ, ಸಾಕ್ಷ್ಯಚಿತ್ರ ಪ್ರದರ್ಶನ ರದ್ದತಿಗೆ ಕೇಂದ್ರ ಸಚಿವರ ಮಧ್ಯಪ್ರವೇಶಕ್ಕೆ ಒತ್ತಾಯಿಸಿತ್ತು. ವಿವಾದ ಬೆನ್ನಲ್ಲೇ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:09 pm, Wed, 16 September 26




