ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ
ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ನಿರ್ಬಂಧಿಸಲಾಗಿದೆ. ಮತ್ತು ಚಿತ್ರೀಕರಣಕ್ಕೆ ಪೊಲೀಸರು ಅಥವಾ ಕೆಎಫ್‌ಸಿಸಿ ಅನುಮತಿ ನೀಡಲು ಸಾಧ್ಯವಿಲ್ಲ. ಅದೊಂದು ಜನನಿಬಿಡ ರಸ್ತೆ. ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಹೀಗಾಗಿ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧಿಸಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ಬೆಂಗಳೂರು, ಫೆಬ್ರವರಿ 27: ಸಂಚಾರ ದಟ್ಟಣೆ (Traffic) ಕಾರಣ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಜನನಿಬಿಡ ಚರ್ಚ್ ಸ್ಟ್ರೀಟ್‌ನಲ್ಲಿ (Church Street) ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ವಿಶೇಷವಾಗಿ ವಾರಾಂತ್ಯದಲ್ಲಿ ಪಾರ್ಟಿಗೆ ಹೋಗುವವರಿಗೆ ಮತ್ತು ಖರೀದಿದಾರರಿಗೆ ಚರ್ಚ್ ಸ್ಟ್ರೀಟ್ ಬೆಂಗಳೂರಿನ (Bengaluru) ಪ್ರಮುಖ ಆಕರ್ಷಣೆಯಾಗಿದೆ. ಕಳೆದ ಭಾನುವಾರ ಚರ್ಚ ಸ್ಟ್ರೀಟ್‌ನಲ್ಲಿ ಸಿನಿಮಾ ಚಿತ್ರೀಕರಣ (Film Shooting) ನಡೆಯುತ್ತಿದ್ದುದನ್ನು ಗಮನಿಸಿದ ಬಿಬಿಎಂಪಿ ಈ ಆದೇಶ ಹೊರಡಿಸಿದೆ. ಸೂಕ್ತ ಅನುಮತಿ ಪಡೆಯದೆ ಸಿನಿಮಾ ಚಿತ್ರೀಕರಣ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಆದರೆ ನಾವು ಪೊಲೀಸರಿಂದ ಅನುಮತಿ ಪಡೆದಿದ್ದೇವೆ ಎಂದು ಮಲಯಾಳಂ ಚಿತ್ರದ ಸಿಬ್ಬಂದಿಯೊಬ್ಬರು ಹೇಳಿದರು. ಈ ಬಗ್ಗೆ ಕೇಂದ್ರೀಯ ಡಿಸಿಪಿ ಶೇಖರ್ ಎಚ್.ತೆಕ್ಕನವರ್ ಮಾತನಾಡಿ, ನಾವು ಸಿನಿಮಾ ಶೂಟಿಂಗ್‌ಗೆ ಅನುಮತಿ ನೀಡಿಲ್ಲ. ಬಹುತೇಕ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ.
ಮತ್ತೊಂದೆಡೆ, ಕೆಎಫ್‌ಸಿಸಿ ಅಧ್ಯಕ್ಷ ಎನ್.ಎಂ.ಸುರೇಶ್ ಮಾತನಾಡಿ ನಾವು ಯಾವುದೇ ಅನುಮತಿ ನೀಡಿಲ್ಲ ಮತ್ತು ಅನುಮತಿ ನೀಡಲು ನಮಗೆ ಯಾವುದೇ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದರು. ಸಿನಿಮಾ ಚಿತ್ರೀಕರಣದಿಂದ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.ಪಾದಚಾರಿ ಮಾರ್ಗದಲ್ಲಿ ಶೂಟಿಂಗ್ ಮಾಡುತ್ತಿದ್ದರೂ, ನೂರಾರು ಜನರು ವೀಕ್ಷಿಸಲು ನಿಂತಿದ್ದರು. ನಾವು ಪ್ರಶ್ನಿಸಿದಾಗ ಅವರು ಅನುಮತಿಯನ್ನು ಪಡೆದಿದ್ದೇವೆ ಎಂದರು. ಆದರೆ ನಾನು ಇಲ್ಲಿ ಚಿತ್ರೀಕರಣಗೊಳ್ಳುತ್ತಿರುವ ಚಲನಚಿತ್ರವನ್ನು ನೋಡುತ್ತಿರುವುದು ಇದೇ ಮೊದಲು. ಅವರ ವಿರುದ್ಧ ಬಿಬಿಎಂಪಿ ಕ್ರಮ ಕೈಗೊಳ್ಳುಬೇಕು ಎಂದು ಚರ್ಚ್ ಸ್ಟ್ರೀಟ್‌ನಲ್ಲಿ ಪಾನ್ ಅಂಗಡಿ ನಡೆಸುತ್ತಿರುವ ರಮೇಶ್ ಎಸ್. ಹೇಳಿದರು.
ಇದನ್ನೂ ಓದಿ: ಬಂಡೀಪುರ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಕ್ಯಾಮೆರಾ, ಡ್ರೋನ್ ಚಿತ್ರೀಕರಣ ನಿಷೇಧ
ಶೂಟಿಂಗ್ ಕೇವಲ ಸಂಚಾರಕ್ಕೆ ಅಡ್ಡಿಯಾಗುವುದಿಲ್ಲ, ವ್ಯಾಪಾರಕ್ಕೂ ನಿಧಾನಗತಿಯ ಸಂಚಾರದಿಂದ ಜನರು, ಇಲ್ಲಿಗೆ ಬರದೆ ಬೇರೆ ಬೇರೆ ಪ್ರದೇಶಗಳಿಗೆ ಹೋಗುತ್ತಾರೆ. ಇದರಿಂದ ಪೀಕ್ ಅವರ್‌ನಲ್ಲಿ ನನ್ನ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ ಎಂದು ಅಡ್ಡಿಪಡಿಸುತ್ತದೆ ಎಂದು ಹೋಟೆಲ್ ಉದ್ಯಮಿಯೊಬ್ಬರು ಹೇಳಿದರು.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ನಿರ್ಬಂಧಿಸಲಾಗಿದೆ. ಮತ್ತು ಚಿತ್ರೀಕರಣಕ್ಕೆ ಪೊಲೀಸರು ಅಥವಾ ಕೆಎಫ್‌ಸಿಸಿ ಅನುಮತಿ ನೀಡಲು ಸಾಧ್ಯವಿಲ್ಲ. ಅದೊಂದು ಜನನಿಬಿಡ ರಸ್ತೆ. ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಹೀಗಾಗಿ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧಿಸಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ