ವಾಹನ ಸವಾರರೇ ಗಮನಿಸಿ; ಫೆ.17 ರಿಂದ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಫಿಕ್ಸ್

ಹೆಚ್‌ಎಸ್‌ಆರ್‌ಪಿ ಹಾಕಿಸಲು ಸಾರಿಗೆ ಇಲಾಖೆ 2024ರ ಫೆ.17ರವರೆಗೆ ಗಡುವು ವಿಧಿಸಿದೆ. ಆದರೆ, ವಾಹನ ಮಾಲೀಕರು ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ ದಂಡ ಪ್ರಯೋಗಕ್ಕೆ ಇಲಾಖೆ ಮುಂದಾಗಿದೆ. ಫೆ.17ರ ನಂತರ ಯಾರು ಯಾರು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕಿಸಿಲ್ಲವೋ ಅವರ ಮೇಲೆ ದಂಡ ಬೀಳಲಿದೆ. ಮೊದಲ ಬಾರಿಗೆ 1000 ರೂ ದಂಡ. ಎರಡನೇ ಬಾರಿ ಸಿಕ್ಕಿಬಿದ್ದರೆ 2000 ರೂ ವಿಧಿಸಲು ಇಲಾಖೆ ಮುಂದಾಗಿದೆ.

ವಾಹನ ಸವಾರರೇ ಗಮನಿಸಿ; ಫೆ.17 ರಿಂದ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಫಿಕ್ಸ್
ಸಾಂದರ್ಭಿಕ ಚಿತ್ರ
Follow us
Kiran Surya
| Updated By: ಆಯೇಷಾ ಬಾನು

Updated on: Feb 01, 2024 | 3:06 PM

ಬೆಂಗಳೂರು, ಫೆ.01: ಈಗಾಗಲೇ ರಾಜ್ಯ ಸಾರಿಗೆ ಇಲಾಖೆ ಹೆಚ್ಎಸ್ಆರ್​ಪಿ (HSRP Name Board) ನೇಮ್ ಬೋರ್ಡ್ ಹಾಕಿಸಿಕೊಳ್ಳಲು ವಾಹನ ಸವಾರರಿಗೆ ಡೆಡ್ಲೈನ್ ನೀಡಿದೆ. ಅದರೆ ಜನರು ಯಾರು ಕೂಡ ಹೊಸ ನಂಬರ್ ಪ್ಲೇಟ್ ಗಳನ್ನು ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ (Karnataka Transport Department) ದಂಡ ಪ್ರಯೋಗಕ್ಕೆ ಮುಂದಾಗಿದೆ. ಫೆ.17 ರಿಂದ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಫಿಕ್ಸ್. ಮೊದಲನೆ ಬಾರಿ ಸಿಕ್ಕಿಬಿದ್ದರೆ ಸಾವಿರ, 2ನೇ ಬಾರಿ ಸಿಕ್ಕಿಬಿದ್ದರೆ 2 ಸಾವಿರ ದಂಡ ಹಾಕಲಾಗುತ್ತೆ.

2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್‌ಗಳನ್ನು (ಹೆಚ್‌ಎಸ್‌ಆರ್‌ಪಿ) ಹಾಕಿಸಿಕೊಳ್ಳುವಂತೆ ನೀಡಲಾಗಿದ್ದ ಗಡುವು ಸಮೀಪಿಸುತ್ತಿದ್ದರೂ ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು ಆಸಕ್ತಿ ತೋರಿಲ್ಲ. ಹೀಗಾಗಿ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಸಾರಿಗೆ ಇಲಾಖೆ ಫೆ.17ರ ನಂತರ ದಂಡಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಹೆಚ್‌ಎಸ್‌ಆರ್‌ಪಿ ಹಾಕಿಸಲು ಸಾರಿಗೆ ಇಲಾಖೆ 2023ರ ನ.17ರ ಗಡುವು ವಿಧಿಸಿತ್ತು. ಆದರೆ, ವಾಹನ ಮಾಲೀಕರು ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ 2024ರ ಫೆ.17ರವರೆಗೆ ವಿಸ್ತರಣೆ ಮಾಡಲಾಗಿತ್ತು. ನಿಗದಿಪಡಿಸಿರುವ ಗಡುವು ಅಂತ್ಯವಾಗಲು ಇನ್ನು 16 ದಿನಗಳಷ್ಟೇ ಬಾಕಿ ಉಳಿದಿವೆ. ಆದರೆ, ಈವರೆಗೆ ಬರೀ 10 ಲಕ್ಷ ವಾಹನಗಳಿಗಷ್ಟೇ ಹೆಚ್‌ಎಸ್‌ಆರ್‌ಪಿ ಹಾಕಿಸಿಕೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:  ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್​ಗೆ ವಿರೋಧ, ಲೋಕಾಯುಕ್ತಕ್ಕೆ ದೂರು ನೀಡಿದ ನಂಬರ್ ಪ್ಲೇಟ್ ಅಸೋಸಿಯೇಷನ್

ಇನ್ನು ಆರ್​ಟಿಓ ನೋಂದಣಿ ಪ್ರಕಾರ ರಾಜ್ಯದಲ್ಲಿ 2.15 ಕೋಟಿ ಹಳೇ ವಾಹನಗಳಿವೆ. 2019ರಿಂದ ಹಿಂದಿನ 15 ವರ್ಷದಲ್ಲಿ ನೋಂದಣಿಯಾಗಿರುವ ವಾಹನಗಳ ಲೆಕ್ಕ ತೆಗೆದುಕೊಂಡರೆ ಅಂದಾಜು 1.70 ಕೋಟಿ ವಾಹನಗಳಿವೆ. ಅವಧಿ ವಿಸ್ತರಣೆ ಮಾಡಿದರೂ ವಾಹನ ಮಾಲೀಕರು ಎಚ್ಚೆತ್ತುಕೊಂಡಿಲ್ಲ. ಹೀಗಾಗಿ ಗಡುವು ಫೆ.17ಕ್ಕೆ ಮುಗಿಯುತ್ತಿದೆ. ಅಷ್ಟರಲ್ಲಿ ಹಾಕಿಸಿಕೊಳ್ಳದಿದ್ದರೆ ಸಂಚಾರ ಪೊಲೀಸರು ಹಾಗೂ ಆರ್‌ಟಿಓ ಅಧಿಕಾರಿಗಳು ಜಂಟಿಯಾಗಿ ದಂಡ ವಿಧಿಸುವ ಪ್ರಕ್ರಿಯೆ ಆರಂಭಿಸಲಿದ್ದಾರೆ. ಆದರೆ ಇದಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಒಂದು ವರ್ಷವಾದ್ರು ಅವಧಿ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡ್ತಿದ್ದಾರೆ.

ಒಟ್ಟಿನಲ್ಲಿ ರಾಜ್ಯ ಸಾರಿಗೆ ಇಲಾಖೆ ಏನೋ ಈಗಾಗಲೇ ಎರಡ್ ಎರಡು ಬಾರಿ ಕಾಲಾವಕಾಶ ನೀಡಿದೆ. ಫೆಬ್ರವರಿ 17 ರೊಳಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಂಡಿಲ್ಲ ಅಂದ್ರೆ ದಂಡ ಗ್ಯಾರೆಂಟಿ. ಆದರೆ ವಾಹನ ಸವಾರರು ಮಾತ್ರ ಒಂದು ವರ್ಷವಾದ್ರು ಕಾಲಾವಕಾಶ ಬೇಕು ಎಂದು ಮನವಿ ಮಾಡ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ