ಬೆಂಗಳೂರು, ಫೆ.01: ಈಗಾಗಲೇ ರಾಜ್ಯ ಸಾರಿಗೆ ಇಲಾಖೆ ಹೆಚ್ಎಸ್ಆರ್ಪಿ (HSRP Name Board) ನೇಮ್ ಬೋರ್ಡ್ ಹಾಕಿಸಿಕೊಳ್ಳಲು ವಾಹನ ಸವಾರರಿಗೆ ಡೆಡ್ಲೈನ್ ನೀಡಿದೆ. ಅದರೆ ಜನರು ಯಾರು ಕೂಡ ಹೊಸ ನಂಬರ್ ಪ್ಲೇಟ್ ಗಳನ್ನು ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ (Karnataka Transport Department) ದಂಡ ಪ್ರಯೋಗಕ್ಕೆ ಮುಂದಾಗಿದೆ. ಫೆ.17 ರಿಂದ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಫಿಕ್ಸ್. ಮೊದಲನೆ ಬಾರಿ ಸಿಕ್ಕಿಬಿದ್ದರೆ ಸಾವಿರ, 2ನೇ ಬಾರಿ ಸಿಕ್ಕಿಬಿದ್ದರೆ 2 ಸಾವಿರ ದಂಡ ಹಾಕಲಾಗುತ್ತೆ.
2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್‌ಗಳನ್ನು (ಹೆಚ್‌ಎಸ್‌ಆರ್‌ಪಿ) ಹಾಕಿಸಿಕೊಳ್ಳುವಂತೆ ನೀಡಲಾಗಿದ್ದ ಗಡುವು ಸಮೀಪಿಸುತ್ತಿದ್ದರೂ ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು ಆಸಕ್ತಿ ತೋರಿಲ್ಲ. ಹೀಗಾಗಿ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಸಾರಿಗೆ ಇಲಾಖೆ ಫೆ.17ರ ನಂತರ ದಂಡಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಹೆಚ್‌ಎಸ್‌ಆರ್‌ಪಿ ಹಾಕಿಸಲು ಸಾರಿಗೆ ಇಲಾಖೆ 2023ರ ನ.17ರ ಗಡುವು ವಿಧಿಸಿತ್ತು. ಆದರೆ, ವಾಹನ ಮಾಲೀಕರು ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ 2024ರ ಫೆ.17ರವರೆಗೆ ವಿಸ್ತರಣೆ ಮಾಡಲಾಗಿತ್ತು. ನಿಗದಿಪಡಿಸಿರುವ ಗಡುವು ಅಂತ್ಯವಾಗಲು ಇನ್ನು 16 ದಿನಗಳಷ್ಟೇ ಬಾಕಿ ಉಳಿದಿವೆ. ಆದರೆ, ಈವರೆಗೆ ಬರೀ 10 ಲಕ್ಷ ವಾಹನಗಳಿಗಷ್ಟೇ ಹೆಚ್‌ಎಸ್‌ಆರ್‌ಪಿ ಹಾಕಿಸಿಕೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ಗೆ ವಿರೋಧ, ಲೋಕಾಯುಕ್ತಕ್ಕೆ ದೂರು ನೀಡಿದ ನಂಬರ್ ಪ್ಲೇಟ್ ಅಸೋಸಿಯೇಷನ್
ಇನ್ನು ಆರ್‌ಟಿಓ ನೋಂದಣಿ ಪ್ರಕಾರ ರಾಜ್ಯದಲ್ಲಿ 2.15 ಕೋಟಿ ಹಳೇ ವಾಹನಗಳಿವೆ. 2019ರಿಂದ ಹಿಂದಿನ 15 ವರ್ಷದಲ್ಲಿ ನೋಂದಣಿಯಾಗಿರುವ ವಾಹನಗಳ ಲೆಕ್ಕ ತೆಗೆದುಕೊಂಡರೆ ಅಂದಾಜು 1.70 ಕೋಟಿ ವಾಹನಗಳಿವೆ. ಅವಧಿ ವಿಸ್ತರಣೆ ಮಾಡಿದರೂ ವಾಹನ ಮಾಲೀಕರು ಎಚ್ಚೆತ್ತುಕೊಂಡಿಲ್ಲ. ಹೀಗಾಗಿ ಗಡುವು ಫೆ.17ಕ್ಕೆ ಮುಗಿಯುತ್ತಿದೆ. ಅಷ್ಟರಲ್ಲಿ ಹಾಕಿಸಿಕೊಳ್ಳದಿದ್ದರೆ ಸಂಚಾರ ಪೊಲೀಸರು ಹಾಗೂ ಆರ್‌ಟಿಓ ಅಧಿಕಾರಿಗಳು ಜಂಟಿಯಾಗಿ ದಂಡ ವಿಧಿಸುವ ಪ್ರಕ್ರಿಯೆ ಆರಂಭಿಸಲಿದ್ದಾರೆ. ಆದರೆ ಇದಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಒಂದು ವರ್ಷವಾದ್ರು ಅವಧಿ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡ್ತಿದ್ದಾರೆ.
ಒಟ್ಟಿನಲ್ಲಿ ರಾಜ್ಯ ಸಾರಿಗೆ ಇಲಾಖೆ ಏನೋ ಈಗಾಗಲೇ ಎರಡ್ ಎರಡು ಬಾರಿ ಕಾಲಾವಕಾಶ ನೀಡಿದೆ. ಫೆಬ್ರವರಿ 17 ರೊಳಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಂಡಿಲ್ಲ ಅಂದ್ರೆ ದಂಡ ಗ್ಯಾರೆಂಟಿ. ಆದರೆ ವಾಹನ ಸವಾರರು ಮಾತ್ರ ಒಂದು ವರ್ಷವಾದ್ರು ಕಾಲಾವಕಾಶ ಬೇಕು ಎಂದು ಮನವಿ ಮಾಡ್ತಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ