ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್

ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಕರ್ನಾಟಕ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಘರ್ಷಣೆ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಿಜೆಪಿ ನಾಯಕರು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್
Edited By:

Updated on: Jan 01, 2025 | 5:34 PM

ಬೆಂಗಳೂರು, ಜನವರಿ 01: ಬೀದರ್​ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಳು ಜೋರಾಗಿವೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ನಿನ್ನೆ ಬೆಳಗ್ಗೆ ರೇಸ್ ಕೋರ್ಸ್ ರಸ್ತೆಯ ಸಾರ್ವಜನಿಕ ಶೌಚಾಲಯದ ಗೋಡೆಗೆ ಪ್ರಿಯಾಂಕ್​​ ಖರ್ಗೆ ರಾಜೀನಾಮೆ ನೀಡಿ, ಸೂಸೈಡ್​ ಹಾಗೂ ಸುಫಾರಿ ಭಾಗ್ಯ ನೀಡಿದ ಕಾಂಗ್ರೆಸ್​ ಸರ್ಕಾರಕ್ಕೆ ಧಿಕ್ಕಾರ ಎಂಬ ಪೋಸ್ಟರ್ ಅಂಟಿಸಿದ್ದರು. ಆ ಮೂಲಕ ಬೆಂಗಳೂರು ನಗರದ ಸೌಂದರ್ಯಕ್ಕೂ ಧಕ್ಕೆ ತರುವಂತೆ ಅಂಟಿಸುತ್ತಿದದ್ದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸಚಿನ್ ಪ್ರಕರಣದಲ್ಲಿ ಎಲ್ಲೂ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖವಾಗಿಲ್ಲ, ರಾಜೀನಾಮೆ ಯಾಕೆ ನೀಡಬೇಕು? ಸಿದ್ದರಾಮಯ್ಯ

ಈ ಹಿನ್ನಲೆ ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ನೀಡಿದ ಆರೋಪದ ಮೇಲೆ ವಿಧಾ‌ನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್ ಸೇರಿ ಒಟ್ಟು 13 ಬಿಜೆಪಿ ನಾಯಕರ ವಿರುದ್ಧ ಪಿಎಸ್ಐ ಶಶಿಧರ ವಣ್ಣೂರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇನ್ನು ಗುತ್ತಿಗೆದಾರನ ಆತ್ಮಹತ್ಯೆ ವಿಚಾರವಾಗಿ ಬಿಜೆಪಿ ನಾಯಕರು ಉರಿದುರಿದು ಬೀಳುತ್ತಿದ್ದಾರೆ. ನಾವು ದಾಖಲೆ ತೋರಿಸಿದರೂ ಪ್ರಿಯಾಂಕ್​ಗೆ ಅದು ದಾಖಲೆ ಅಲ್ಲ ಅಂತಾ ಛಲವಾದಿ ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ. ಕಲ್ಬುರ್ಗಿ ರಿಪಬ್ಲಿಕ್, ಬೆಳಗಾವಿ ರಿಪಬ್ಲಿಕ್, ಕನಕಪುರ ರಿಪಬ್ಲಿಕ್ ಅಂತಾ ಒಂದೊಂದು ಜಿಲ್ಲೆಯನ್ನು ಒಂದೊಂದು ರಿಪಬ್ಲಿಕ್ ಮಾಡಿಕೊಂಡುಬಿಟ್ಟಿದ್ದಾರೆ ಅಂತಾ ಸಿ.ಟಿ ರವಿ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಆಂದೋಲ ಸಿದ್ದಲಿಂಗ ಸ್ವಾಮಿ ಹೆಸರೇಕೆ? ಬೆಂಬಲಿಗರು ಹೇಳೋದೇನು? ಇಲ್ಲಿದೆ ವಿವರ

ಇನ್ನು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ವಿಶ್ವಕರ್ಮ ಸಮಾಜದಿಂದ ಬೃಹತ್ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಹಲವು ಸ್ವಾಮೀಜಿಗಳು ಭಾಗಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:33 pm, Wed, 1 January 25

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us