ಪ್ರಿಯಾಂಕ್ ಖರ್ಗೆ ದೂರು, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ವಿರುದ್ದ ಎಫ್​ಐಆರ್​ ದಾಖಲು

|

Updated on: Jun 28, 2023 | 12:00 PM

ಕರ್ನಾಟಕ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ದೂರಿನ ಮೇರೆಗೆ ಬಿಜೆಪಿ ಐಟಿ ಸೆಲ್​ ಮುಖ್ಯಸ್ಥನ ವಿರುದ್ಧ ಬೆಂಗಳೂರಿನ ಗೈಗ್ರೌಂಡ್ಸ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಪ್ರಿಯಾಂಕ್ ಖರ್ಗೆ ದೂರು, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ವಿರುದ್ದ ಎಫ್​ಐಆರ್​ ದಾಖಲು
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ
Follow us on

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪ ಮೇಲೆ ಬಿಜೆಪಿ(BJP) ಐಟಿ ಸೆಲ್​ ಮುಖ್ಯಸ್ಥ ಅಮಿತ್ ಮಾಳವಿಯಾ(Amit Malviya) ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ರಾಹುಲ್ ಗಾಂಧಿ ವಿರುದ್ಧ ಅಮಿತ್ ಮಾಳವಿಯಾ ಅವರು ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಇವರ ವಿರುದ್ಧ ಕ್ರಮಕೈಗೋಳ್ಳುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಹೈಗ್ರೌಂಡ್ಸ್ ಠಾಣೆಗೆ ಜೂನ್ 17ರಂದು ದೂರು ನೀಡಿದ್ದರು. ಇದರ ಆಧಾರದ ಮೇಲೆ ಇದೀಗ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ ವಿರುದ್ದ ಅವಹೇಳನಕಾರಿ ಪೋಸ್ಟ್: ಜೆಪಿ ನಡ್ಡಾ ಮತ್ತಿಬ್ಬರ ವಿರುದ್ಧ ದೂರು ನೀಡಿದ ಪ್ರಿಯಾಂಕ್ ಖರ್ಗೆ

ಆ್ಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ವೀಡಿಯೋ ಹರಿಬಿಟ್ಟ ಹಿನ್ನೆಲೆಯಲ್ಲಿ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಿಯಾಂಕ್ ಖರ್ಗೆ ದೂರು ನೀಡಿದ್ದರು. ಅದರಂತೆ ಇದೀಗ  ಬಿಜೆಪಿ ಐಟಿ ಸೆಲ್​ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಪ್ರಕರಣ ಹಿನ್ನೆಲೆ

‘ಅಮಿತ್ ಮಾಳವೀಯ ಅವರು ಹಂಚಿಕೊಂಡಿದ್ದ ವೀಡಿಯೊದಲ್ಲಿ ರಾಹುಲ್ ಗಾಂಧಿಯನ್ನು ದುರುದ್ದೇಶಪೂರಿತ 3ಡಿ ಅನಿಮೇಟೆಡ್ ವೀಡಿಯೋ ಮೂಲಕ ಅವಮಾನಿಸಲಾಗಿದೆ. ಇದನ್ನು ಬಿಜೆಪಿಯ ಪ್ರಮುಖ ನಾಯಕರಾದ ಜೆಪಿ ನಡ್ಡಾ ಮತ್ತು ಅರುಣ್ ಸೂದ್ ಅನುಮೋದಿಸಿದ್ದಾರೆ’ ಎಂದು ಪ್ರಿಯಾಂಕ್ ಖರ್ಗೆ ದೂರಿನಲ್ಲಿ ಉಲ್ಲೇಖಿಸಿದ್ದರು.

‘ವಿಡಿಯೋವನ್ನು ಜೂನ್ 17, 2023 ರಂದು ಮಾಳವೀಯಾ ಅವರ ಟ್ವಿಟರ್‌ ಖಾತೆಯಲ್ಲಿ ರಾಹುಲ್ ಗಾಂಧಿ ಮತ್ತು INCಯ ಪ್ರತಿಷ್ಠೆಗೆ ಕಳಂಕ ತರುವ ಉದ್ದೇಶದಿಂದ ಅಪಲೋಡ್‌ ಮಾಡಲಾಗಿದೆ. ಕೋಮು ವೈಷಮ್ಯವನ್ನು ಪ್ರಚೋದಿಸಲು ಮತ್ತು ಪಕ್ಷ ಮತ್ತು ಅದರ ನಾಯಕರ ವ್ಯಕ್ತಿತ್ವವನ್ನು ತಪ್ಪಾಗಿ ನಿರೂಪಿಸಲು ಈ ವಿಡಿಯೋದಲ್ಲಿ ಕಾಂಗ್ರೆಸ್ ಮತ್ತು ಅದರ ನಾಯಕರನ್ನು ದೇಶವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಈ ವಿಡಿಯೋದಲ್ಲಿ ರಾಹುಲ್ ಗಾಂಧಿ ಭಾಷಣದ ಬದಲಾದ ಆವೃತ್ತಿಗಳಿದ್ದು, ಸುಳ್ಳು ನಿರೂಪಣೆಗಳನ್ನು ಪ್ರಚಾರ ಮಾಡಲಾಗಿದೆ. ವೀಡಿಯೋದ ಆತಂಕಕಾರಿ ಅಂಶವೆಂದರೆ ಇಸ್ಲಾಮಿಕ್ ನಂಬಿಕೆಯುಳ್ಳ ಜನರೊಂದಿಗೆ ರಾಹುಲ್ ಗಾಂಧಿಯವರ ಸಂವಹನದ ಅನಿಮೇಟೆಡ್ ವಿಡಿಯೋವನ್ನು ತಪ್ಪಾಗಿ ನಿರೂಪಿಸಲಾಗಿದೆ’ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ