ವಕೀಲ ಸುದರ್ಶನ್ ಮತ್ತು ಪತ್ನಿ ಮೇಲೆ ಹಲ್ಲೆ; ಅಮೃತಹಳ್ಳಿ ಠಾಣೆಯ ನಾಲ್ವರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು

ಮೇ 15ರ ರಾತ್ರಿ ಬಾರ್ ಬಳಿ ಗಲಾಟೆಯಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದಿದ್ದ ಅಮೃತಹಳ್ಳಿ ಪೊಲೀಸರು ಫೋನ್ ನಲ್ಲಿ ಮಾತನಾಡುತ್ತಿದ್ದ ವಕೀಲ ಸುದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ.

ವಕೀಲ ಸುದರ್ಶನ್ ಮತ್ತು ಪತ್ನಿ ಮೇಲೆ ಹಲ್ಲೆ; ಅಮೃತಹಳ್ಳಿ ಠಾಣೆಯ ನಾಲ್ವರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು
ಅಮೃತಹಳ್ಳಿ ಠಾಣೆ
Follow us
TV9 Web
| Updated By: ಆಯೇಷಾ ಬಾನು

Updated on:Jun 22, 2022 | 4:03 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಕೀಲ ಸುದರ್ಶನ್ ಮತ್ತು ಪತ್ನಿ ಮೇಲೆ ಹಲ್ಲೆ(Assault)  ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಅಮೃತಹಳ್ಳಿ ಠಾಣೆಯ(Amruthahalli Police Station) ನಾಲ್ವರು ಸಿಬ್ಬಂದಿ ವಿರುದ್ಧ ಎಫ್ಐಆರ್(FIR) ದಾಖಲಾಗಿದೆ. ವಕೀಲ ಸುದರ್ಶನ್ ನೀಡಿರುವ ದೂರಿನನ್ವಯ ಅಮೃತಹಳ್ಳಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506, 34, 504, 307, 323, 324, 354ರಡಿ ಪ್ರಕರಣ ದಾಖಲಾಗಿದೆ.  ಮೇ 15ರ ರಾತ್ರಿ ಅಮೃಹಳ್ಳಿಯ ಮಾರುತಿ ಬಾರ್ ಬಳಿ ಘಟನೆ ನಡೆದಿದೆ.

ಮೇ 15ರ ರಾತ್ರಿ ಬಾರ್ ಬಳಿ ಗಲಾಟೆಯಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದಿದ್ದ ಅಮೃತಹಳ್ಳಿ ಪೊಲೀಸರು ಫೋನ್ ನಲ್ಲಿ ಮಾತನಾಡುತ್ತಿದ್ದ ವಕೀಲ ಸುದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಬಂದ ಸುದರ್ಶನ್ ಪತ್ನಿಯನ್ನ ಎಳೆದಾಡಿ ಹಲ್ಲೆ ಮಾಡಿರುವುದಾಗಿ ಅಮೃತಹಳ್ಳಿ ಠಾಣೆಯ ನಾಲ್ವರು ಕ್ರೈಂ ಸಿಬ್ಬಂದಿ ವಿರುದ್ಧ ಆರೋಪಿಸಿ ಸುದರ್ಶನ್ ದೂರು ದಾಖಲಿಸಿದ್ದಾರೆ. ಆದ್ರೆ ಘಟನಾ ದಿನವೇ ಅಮೃತಹಳ್ಳಿ ಪೊಲೀಸರು ಸುದರ್ಶನ್ ವಿರುದ್ಧವೇ ಪ್ರಕರಣ ದಾಖಲಿಸಿದ್ದರು. ಸದ್ಯ ಸುದರ್ಶನ್ ದೂರಿನನ್ವಯ ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Breaking : ಆಸ್ಪತ್ರೆಯಿಂದ ಹೊರಬಂದ ಎರಡು ದಿನಗಳ ನಂತರ ವಿಚಾರಣೆ ಮಾಡುವಂತೆ ಸೋನಿಯಾ ಮನವಿ

ಪ್ರೇಮ ವಿವಾಹಕ್ಕೆ ಬೆಂಬಲ ನೀಡಿದಕ್ಕೆ ಥಳಿತ ಪ್ರೇಮ ವಿವಾಹ ವಿಚಾರಕ್ಕೆ ಬೆಂಬಲ ನೀಡಿದ ಯುವಕನಿಗೆ ಕಾಂಗ್ರೆಸ್ ಮುಖಂಡ ಥಳಿಸಿರುವ ಆರೋಪ ಕೇಳಿ ಬಂದಿದೆ. ಮೆಹಬೂಬ್ ಬಾಷ ಎಂಬ ಯುವಕನಿಗೆ ಪಾವಗಡ ಕಾಂಗ್ರೆಸ್ ನಗರಾಧ್ಯಕ್ಷ ಸುರೇಶ್ ಬಾಬು ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು ಪಾವಗಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪಾವಗಡ ಪಟ್ಟಣದಲ್ಲಿ ಇತ್ತೀಚೆಗೆ ಬೇರೆ ಬೇರೆ ಜಾತಿಯ ಹುಡುಗ ಹುಡುಗಿ ಮದುವೆಯಾಗಿದ್ದರು. ಈ ಬಗ್ಗೆ ಪಾವಗಡ ಪೊಲೀಸ್ ಠಾಣೆ ಮೇಟ್ಟೇಲೆರಿದ್ದ ಪೋಷಕರು. ಬಳಿಕ‌ ಇಬ್ಬರು ಮೇಜರ್ ಆಗಿದ್ದ ಹಿನ್ನೆಲೆ ಪ್ರಕರಣ ಇತ್ಯರ್ಥವಾಗಿತ್ತು. ಆದರೆ ಇದಕ್ಕೆ ಬೆಂಬಲ ನೀಡಿದ ಆರೋಪದಡಿ ಹುಡುಗನ ಸ್ನೇಹಿತನ ಕರೆಸಿ ಹಲ್ಲೆ ಮಾಡಲಾಗಿದೆ. ತಡರಾತ್ರಿ ಪಾವಗಡ ಕಾಂಗ್ರೆಸ್ ಕಚೇರಿಗೆ ಮಾತನಾಡಬೇಕೆಂದು ಬಾ ಎಂದು ಕರೆಸಿ ಹಲ್ಲೆ ಮಾಡಿರುವ ಆರೋಪ. ಸುರೇಶ್ ಬಾಬು ಬೆಂಬಲಿಗರು ಹಾಗೂ ವೈಎನ್ ಹೊಸಕೋಟೆ ಎಎಸ್ ಐ ಮಗನೋರ್ವ ಕಬ್ಬಿಣದ ಕುರ್ಚಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:44 pm, Wed, 22 June 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ