ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲು
ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಕುಟುಂಬಸ್ಥರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಭ್ರಷ್ಟಾಚಾರ ಆರೋಪ ಪ್ರಕರಣ ಮರುಜೀವ ಪಡೆದಿದೆ.
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದ ಮೇರೆಗೆ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಕುಟುಂಬಸ್ಥರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಾಂತರ ರೂಪಾಯಿ ನಗದು ಪಡೆದಿದ್ದಾರೆ. ಜೊತೆಗೆ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ಖಾಸಗಿ ದೂರು ದಾಖಲಿಸಿದ್ದರು. ಆದರೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ದೂರನ್ನ ವಜಾಗೊಳಿಸಿತ್ತು. ಬಳಿಕ ಟಿ.ಜೆ.ಅಬ್ರಾಹಂ ಇದನ್ನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಲೋಕಾಯುಕ್ತಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚಿಸಿದೆ. ಹೀಗಾಗಿ FIR ದಾಖಲಿಸಿ ಲೋಕಾಯುಕ್ತ ತನಿಖೆಗೆ ಮುಂದಾಗಿದೆ. ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ: ಎಫ್ಐಆರ್ ದಾಖಲಿಸಿ, ತನಿಖೆಗೆ ವಿಶೇಷ ಕೋರ್ಟ್ ಆದೇಶ
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ಅವರು ಯಡಿಯೂರಪ್ಪ ಮತ್ತು ಆರೋಪ ಹೊತ್ತ ಇತರರ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ಹಾಗೂ ನವೆಂಬರ್ 2 ರ ಒಳಗೆ ವರದಿ ನೀಡುವಂತೆ ಲೋಕಾಯುಕ್ತ ಪೋಲಿಸರಿಗೆ ಆದೇಶ ನೀಡಿದ್ದಾರೆ. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಶಶಿಧರ ಮರಡಿ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ವಿರುಪಾಕ್ಷಪ್ಪ, ಕೆ.ರವಿ ಅವರ ವಿರುದ್ಧ ಎಫ್ಐಆರ್ ದಾಖಲಾಗಲಿದೆ. ಇದನ್ನೂ ಓದಿ: Telangana Liberation Day: ಇಂದು ತೆಲಂಗಾಣ ವಿಮೋಚನಾ ದಿನ -ಮಿಸುಕಾಡಿದರೆ ಚರ್ಮ ಸುಲಿಯುತ್ತೇವೆ -ಹೈದ್ರಾಬಾದ್ ಪೊಲೀಸರಿಂದ ನೇರ ಎಚ್ಚರಿಕೆ
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:03 am, Sat, 17 September 22