ಸನಾತನ ಧರ್ಮಕ್ಕಾಗಿ ಒಗ್ಗೂಡುವ ಸಮಯ ಬಂದಿದೆ; ದ್ವೇಷದ ಪೋಸ್ಟ್ ಹಾಕಿದ್ದಕ್ಕೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ಕಾಂಗ್ರೆಸ್ ಸಹ-ಮಾಲೀಕ ರಾಹುಲ್ ಗಾಂಧಿ ಅವರು ಹಿಂದೂಗಳಾದ ನಮ್ಮ ವಿರುದ್ಧ ಸಮರ ಸಾರಿದ್ದಾರೆ. ಸನಾತನ ಧರ್ಮವನ್ನು ನಾಶಮಾಡಲು ಹೊರಟಿರುವವರಿಂದ ಪ್ರತಿಭಟಿಸಲು ಮತ್ತು ರಕ್ಷಿಸಲು ನಾವು ಒಗ್ಗೂಡುವ ಸಮಯ ಬಂದಿದೆ ಎಂದು ಎಕ್ಸ್​ನಲ್ಲಿ ಪೋಸ್ಟ್ ಹಾಕಿದ್ದ ಸಿ,ಟಿ.ರವಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗ ದೂರು ದಾಖಲಿಸಿದೆ.

ಸನಾತನ ಧರ್ಮಕ್ಕಾಗಿ ಒಗ್ಗೂಡುವ ಸಮಯ ಬಂದಿದೆ; ದ್ವೇಷದ ಪೋಸ್ಟ್ ಹಾಕಿದ್ದಕ್ಕೆ ಸಿ.ಟಿ. ರವಿ ವಿರುದ್ಧ ಎಫ್ಐಆರ್
ಸಿಟಿ ರವಿ
Follow us
ಆಯೇಷಾ ಬಾನು
|

Updated on:Mar 22, 2024 | 7:39 AM

ಬೆಂಗಳೂರು, ಮಾರ್ಚ್.22: ಸಾಮಾಜಿಕ ಜಾಲತಾಣದಲ್ಲಿ ಧರ್ಮದ ಆಧಾರದ ಮೇಲೆ ದ್ವೇಷವನ್ನು ಹುಟ್ಟುಹಾಕಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್ ದಾಖಲಿಸಿದೆ. ಸಿ.ಟಿ. ರವಿ (CT Ravi) ಅವರು ತಮ್ಮ ಎಕ್ಸ್ ಖಾತೆಯಲ್ಲಿ ರಾಹುಲ್ ಗಾಂಧಿ ಹೇಳಿಕೆ ಉಲ್ಲೇಖಿಸಿ ದ್ವೇಷ ಹುಟ್ಟುಹಾಕುವ ಪೋಸ್ಟ್ ಹಾಕಿದ್ದರು. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣ ಸಮಿತಿಯ ಸಹಾಯಕ ಚುನಾವಣಾಧಿಕಾರಿಯೊಬ್ಬರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.

ಸಿ.ಟಿ.ರವಿ ಅವರು ಎಕ್ಸ್ ನಲ್ಲಿ, ” ಸಾಗರದ ಆಳವನ್ನಾದರೂ ಅಳೆಯಬಹುದು, ಆದರೆ ರಾಹುಲ್ ಗಾಂಧಿ ಮನಸಿನಲ್ಲಿ ಹಿಂದೂಗಳು ಮತ್ತು ಹಿಂಧೂ ಧರ್ಮದ ಬಗ್ಗೆ ಇರುವ ದ್ವೇಷವನ್ನು ಅಳೆಯಲಾಗದು. ರಾಹುಲ್ ಗಾಂಧಿ ಅವರು, ಶಕ್ತಿ ವಿರುದ್ಧ ನಮ್ಮ ಹೋರಾಟ ಎಂದಿದ್ದಾರೆ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬುದಕ್ಕೆ ವಿಶೇಷ ಅರ್ಥ, ಗೌರವ ಇದೆ, ಇದರ ವಿರುದ್ಧ ಹೋರಾಟ ಮಾಡುವವರು, ಹಿಂದೂ ಧರ್ಮದ ವಿರೋಧಿಗಳು”

”ಕಾಂಗ್ರೆಸ್ ಸಹ-ಮಾಲೀಕ ರಾಹುಲ್ ಗಾಂಧಿ ಅವರು ಹಿಂದೂಗಳಾದ ನಮ್ಮ ವಿರುದ್ಧ ಸಮರ ಸಾರಿದ್ದಾರೆ. ಸನಾತನ ಧರ್ಮವನ್ನು ನಾಶಮಾಡಲು ಹೊರಟಿರುವವರಿಂದ ಪ್ರತಿಭಟಿಸಲು ಮತ್ತು ರಕ್ಷಿಸಲು ನಾವು ಒಗ್ಗೂಡುವ ಸಮಯ ಬಂದಿದೆ” ಎಂದು ಬರೆದುಕೊಂಡಿದ್ದರು.

ಸಿ.ಟಿ. ರವಿ ಪೋಸ್ಟ್

ಇದನ್ನೂ ಓದಿ: ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ, ಸಚಿವರ ಮಕ್ಕಳಿಗೆ ಮಣೆ

ಇದನ್ನು ಗಮನಿಸಿದ ಚುನಾವಣಾ ಆಯೋಗ ಈ ಬರಹ ನೀತಿ ಸಂಹಿತೆಯಡಿಯಲ್ಲಿ ಧ್ವೇಷ ಕಾರುವ ಹೇಳಿಕೆಯಾಗಿದ್ದು, ಹೇಳಿಕೆ ವಿರುದ್ಧ ದೂರು ದಾಖಲಿಸಿ ವರದಿ ನೀಡುವಂತೆ ಜಿಲ್ಲಾ ಮಟ್ಟದ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ.

ಭಾರತೀಯ ದಂಡ ಸಂಹಿತೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ 126, ಎಫ್‌ಐಆರ್‌ಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, “ಕಾಂಗ್ರೆಸ್ ನನ್ನ ವಿರುದ್ಧ ದಾಖಲಿಸಿದ ಎಫ್‌ಐಆರ್‌ನ ವಿವರಗಳನ್ನು ನಾನು ಸ್ವೀಕರಿಸಿದ್ದೇನೆ. ಸನಾತನಿಯಾಗಿ ನಾನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿದ್ದ ಬೇಜವಾಬ್ದಾರಿ ಮತ್ತು ಸಂವೇದನಾರಹಿತ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ್ದೇನೆ.

ಸನಾತನ ಧರ್ಮವನ್ನು ಅನುಸರಿಸುವವರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಹೇಳಿಕೆಗಳಿಗಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ನ ವಿವರಗಳನ್ನು ಚುನಾವಣಾ ಆಯೋಗವು ಹಂಚಿಕೊಂಡರೆ ಅದನ್ನು ನಾನು ಪ್ರಶಂಸಿಸುತ್ತೇನೆ ಎಂದು ಅವರು ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:27 am, Fri, 22 March 24

45 ವರ್ಷಗಳ ನಂತರ ತೆರೆದ ಸಂಭಾಲ್‌ನ ದೇವಾಲಯ; ವಿಡಿಯೋ ವೈರಲ್
45 ವರ್ಷಗಳ ನಂತರ ತೆರೆದ ಸಂಭಾಲ್‌ನ ದೇವಾಲಯ; ವಿಡಿಯೋ ವೈರಲ್
ಭಾರತವನ್ನು ವಿಶ್ವವು ಪ್ರಜಾಪ್ರಭುತ್ವದ ತಾಯಿಯೆಂದು ಆದರಿಸುತ್ತದೆ: ಪ್ರಧಾನಿ
ಭಾರತವನ್ನು ವಿಶ್ವವು ಪ್ರಜಾಪ್ರಭುತ್ವದ ತಾಯಿಯೆಂದು ಆದರಿಸುತ್ತದೆ: ಪ್ರಧಾನಿ
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್
ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್