Bengaluru News: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್​ಐಆರ್; ಕಾರಣವೇನು ಗೊತ್ತಾ?

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 01, 2023 | 10:43 AM

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ(rikki rai) ವಿರುದ್ಧ 8ನೇ ಎಸಿಎಂಎಂ ಕೋರ್ಟ್(Acmm Court) ಆದೇಶದ ಮೇಲೆ ಇದೀಗ ಎಫ್​ಐಆರ್(FIR) ದಾಖಲಾಗಿದೆ.

Bengaluru News: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್​ಐಆರ್; ಕಾರಣವೇನು ಗೊತ್ತಾ?
ರಿಕ್ಕಿ ರೈ ವಿರುದ್ದ ಎಫ್​ಐಆರ್​
Follow us on

ಬೆಂಗಳೂರು, ಆ.1: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ(rikki rai) ವಿರುದ್ಧ 8ನೇ ಎಸಿಎಂಎಂ ಕೋರ್ಟ್(Acmm Court) ಆದೇಶದ ಮೇಲೆ ಇದೀಗ ಎಫ್​ಐಆರ್(FIR) ದಾಖಲಾಗಿದೆ. ಹೌದು, ಕಳೆದ ಎರಡು ತಿಂಗಳ ಹಿಂದೆ ರಿಚ್ಮಂಡ್ ರಸ್ತೆಯ ಕೇಝ್ ಹೋಟೆಲ್​ನಲ್ಲಿ ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬುವರಿಗೆ ಹಲ್ಲೆ ಮಾಡಿದ ಆರೋಪದ ಜೊತೆಗೆ ನಂತರ ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿಯಿಂದ ಶ್ರೀನಿವಾಸ್ ನಾಯ್ಡು ಅವರಿಗೆ ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಬೆದರಿಕೆ ಆರೋಪ ಕೇಳಿಬಂದಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಶ್ರೀನಿವಾಸ್ ನಾಯ್ಡು ವಿರುದ್ಧವೇ ಪ್ರಕರಣ ದಾಖಲಾಗಿತ್ತು.

ಕೋರ್ಟ್ ಪಿಸಿಆರ್​ ಅನ್ವಯ ಕೌಂಟರ್ ಎಫ್​ಐಆರ್ ದಾಖಲು

ಇನ್ನು ಮೇ 26 2023 ರಂದು ಈ ಗಲಾಟೆ ನಡೆದಿತ್ತು. ಈ ಘಟನೆಯ ಬಳಿಕ ಶ್ರೀನಿವಾಸ್ ನಾಯ್ಡು ವಿರುದ್ಧವೇ ಪ್ರಕರಣ ದಾಖಲಾಗಿತ್ತು. ಹೌದು, ರಿಕ್ಕಿ ರೈ ಮೇಲೆ ಶ್ರೀನಿವಾಸ್ ನಾಯ್ಡು ಹಲ್ಲೆ ಮಾಡಿದ್ದಾಗಿ ಕಾರು ಚಾಲಕ ಸೋಮಶೇಖರ್​ ಎಂಬಾತನಿಂದ ಶ್ರೀನಿವಾಸ್ ನಾಯ್ಡು ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಕೋರ್ಟ್ ಪಿಸಿಆರ್ ಅನ್ವಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೌಂಟರ್ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ:ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ; ಉದ್ಯಮಿ ಶ್ರೀನಿವಾಸ್ ನಾಯ್ಡು ವಿರುದ್ಧ ದೂರು ದಾಖಲು

2021 ರಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು ಅವರಿಗೆ ಸೇರಿದ್ದ 3 ಕೋಟಿ ರೇಂಜ್ ರೋವರ್ ಕಾರಿಗೆ ಬೆಂಕಿ

ಹೌದು, 2021 ಅಕ್ಟೋಬರ್​ನಲ್ಲಿ ಸದಾಶಿವ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಶ್ರೀನಿವಾಸ್ ನಾಯ್ಡು ಎಂಬುವವರಿಗೆ ಸೇರಿದ್ದ 3 ಕೋಟಿ ಬೆಲೆ ಬಾಳುವ ರೇಂಜ್ ರೋವರ್ ಕಾರಿಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈಗೆ ಹಾಗೂ ಐವರ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಲು ಸಿದ್ದತೆ ಮಾಡಲಾಗಿತ್ತು. ಹಣಕಾಸು ವ್ಯವಹಾರದ ವೈಶ್ಯಮದ ಹಿನ್ನೆಲೆ, ರಿಕ್ಕಿ ರೈ ಅಣತಿಯಂತೆ ದುಷ್ಕರ್ಮಿಗಳು ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಹಚ್ಚಿದ್ದರು. ಈ ಕುರಿತು ಸದಾಶಿವನಗರ ಠಾಣೆ ಪೊಲೀಸರು ರಿಕ್ಕಿ ರೈ ಸೇರಿದಂತೆ ಆರು ಜನರನ್ನು ಬಂಧನ ಮಾಡಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:35 am, Tue, 1 August 23