AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್​ನಲ್ಲಿ ಐಡಿ ಕಾರ್ಡ್​ ಕೇಳಿದ್ದಕ್ಕೆ ಇನ್​ಸ್ಪೆಕ್ಟರ್ ಕಪಾಳಕ್ಕೆ ಬಾರಿಸಿದ ಐಎಎಸ್​ ಅಧಿಕಾರಿ! ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು

ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯ ಪಬ್‌ನಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್ ಮೇಲೆಯೇ ಹಲ್ಲೆ ನಡೆಸಿ, ಗಲಾಟೆ ಮಾಡಿದ ಆಂಧ್ರ ಕೇಡರ್‌ನ ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್ ಹಾಗೂ ಅವರ ಮೂವರು ಸ್ನೇಹಿತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಪರಿಶೀಲನೆ ವೇಳೆ ಐಡಿ ಕಾರ್ಡ್ ಕೇಳಿದ್ದಕ್ಕೆ ಕೋಪಗೊಂಡು ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.

ಪಬ್​ನಲ್ಲಿ ಐಡಿ ಕಾರ್ಡ್​ ಕೇಳಿದ್ದಕ್ಕೆ ಇನ್​ಸ್ಪೆಕ್ಟರ್ ಕಪಾಳಕ್ಕೆ ಬಾರಿಸಿದ ಐಎಎಸ್​ ಅಧಿಕಾರಿ! ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು
ಐಡಿ ಕೇಳಿದಕ್ಕೆ ಇನ್‌ಸ್ಪೆಕ್ಟರ್ ಮೇಲೆ ಹಲ್ಲೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 13, 2026 | 10:43 AM

Share

ಮುಖ್ಯಾಂಶಗಳು

  • ಪಬ್‌ನಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್ ಕಪಾಳಕ್ಕೆ ಹೊಡೆದು ಐಎಎಸ್ ಅಧಿಕಾರಿ ಗಲಾಟೆ ನಡೆಸಿದ್ದಾರೆ.
  • 'ನಾನು ಐಎಎಸ್ ಅಧಿಕಾರಿ' ಎಂದು ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.
  • ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್.

ಬೆಂಗಳೂರು, ಅಕ್ಟೋಬರ್ 13: ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐಎಎಸ್ ಅಧಿಕಾರಿಯೊಬ್ಬರು ಮಧ್ಯರಾತ್ರಿ ಪಬ್‌ನಲ್ಲಿ ಕುಡಿದು ಹಂಗಾಮಾ ಸೃಷ್ಟಿಸಿ, ಪೊಲೀಸ್ ಅಧಿಕಾರಿಯ ಮೇಲೆಯೇ ಹಲ್ಲೆ ನಡೆಸಿದ ಗಂಭೀರ ಘಟನೆ ನಡೆದಿದೆ. ಆಂಧ್ರಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್ ಹಾಗೂ ಅವರ ಸ್ನೇಹಿತರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಾವೂರ್’ ಪಬ್‌ಗೆ ಬಂದಿದ್ದ ಅಧಿಕಾರಿ

ಆಂಧ್ರಪ್ರದೇಶದ ಕುಪ್ಪಂನಲ್ಲಿ ವಿಶೇಷ ಅಧಿಕಾರಿಯಾಗಿ (ಕಡ ಪ್ರಾಜೆಕ್ಟ್ ಡೈರೆಕ್ಟರ್) ಸೇವೆಯಲ್ಲಿರುವ ವಿಕಾಸ್ ಮರ್ಮಠ್, ತಮ್ಮ ಗೆಳೆಯರಾದ ನಿತೇಶ್, ಅಭಯ್ ಉದಯ್ ಸಿಂಗ್ ಮತ್ತು ರೋಷನ್ ಅವರೊಂದಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿರುವ ‘ಕಾವೂರ್’ ಪಬ್‌ಗೆ ಬಂದಿದ್ದರು. ರಾತ್ರಿ ಸುಮಾರು 1:30ರ ವೇಳೆಯಲ್ಲಿ ಸಿಸಿಬಿ (ಸಿಟಿ ಕ್ರೈಮ್ ಬ್ರಾಂಚ್) ಅಧಿಕಾರಿಗಳು ಸಮವಸ್ತ್ರದಲ್ಲೇ ಪಬ್ ಪರಿಶೀಲನೆಗಾಗಿ ತೆರಳಿದ್ದರು.

ಐಡಿ ಕೇಳಿದಕ್ಕೆ ಇನ್‌ಸ್ಪೆಕ್ಟರ್ ಮೇಲೆ ಹಲ್ಲೆ

ಈ ವೇಳೆ ಸಿಸಿಬಿ ಅಧಿಕಾರಿಗಳು ನಿಯಮಿತ ಪರಿಶೀಲನೆಯ ಭಾಗವಾಗಿ ಐಡಿ ಕಾರ್ಡ್ ಕೇಳಿದ್ದಾರೆ. ಇದರಿಂದ ತೀವ್ರ ಕೋಪಗೊಂಡ ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್, ಅಧಿಕಾರಿಗಳ ವಿರುದ್ಧ ಅಸಭ್ಯ ಪದ ಬಳಸಿ ಬೈಯಲು ಪ್ರಾರಂಭಿಸಿದ್ದಾರೆ. ಇದನ್ನು ಪ್ರಶ್ನಿಸಲು ಹೋದ ಪೊಲೀಸ್ ಇನ್‌ಸ್ಪೆಕ್ಟರ್ ಕಪಾಳಕ್ಕೆ ಹೊಡೆದು ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, “ನಾನು ಐಎಎಸ್ ಅಧಿಕಾರಿ, ನಿಮ್ಮಿಂದ ಏನು ಮಾಡಲು ಸಾಧ್ಯವೋ ನೋಡಿಕೊಳ್ಳಿ” ಎಂದು ಬೆದರಿಕೆ ಹಾಗೂ ಆವಾಜ್ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ನಂತರ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಭದ್ರತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ದೂರಿನ ಅನ್ವಯ ಪೊಲೀಸರು ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್ ಹಾಗೂ ಅವರ ಮೂವರು ಸ್ನೇಹಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 am, Tue, 13 October 26

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ