AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಆರ್.ಅಶೋಕ್​​ ವಿರುದ್ಧ FIR; ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ಆಕ್ರೋಶ

ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಸಂಬಂಧ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ನಾನು ಇಂದಿರಾಗಾಂಧಿ ವಿರುದ್ಧವೇ ಹೋರಾಟ ಮಾಡಿ ಬಂದವನು. ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ಆರ್.ಅಶೋಕ್​ ಆಕ್ರೋಶ ಹೊರ ಹಾಕಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್​​ ವಿರುದ್ಧ FIR; ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ಆಕ್ರೋಶ
ಆರ್.ಅಶೋಕ್
ಕಿರಣ್​ ಹನಿಯಡ್ಕ
| Edited By: |

Updated on: Sep 19, 2024 | 12:23 PM

Share

ಬೆಂಗಳೂರು, ಸೆ.19: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಕೇಸ್​ಗೆ ಸಂಬಂಧಿಸಿ ಸುಳ್ಳು ಮಾಹಿತಿ ಹಂಚಿಕೆ ಆರೋಪದಡಿ ವಿಪಕ್ಷ ನಾಯಕ ಆರ್.ಅಶೋಕ್​​ (R Ashok) ವಿರುದ್ಧ FIR ದಾಖಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಆರ್ ಅಶೋಕ್ ಅವರು ಕಾಂಗ್ರೆಸ್ (Congress) ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ತನಿಖೆ ಮಾಡಿ ಎಂದು ಹೇಳಿದ್ದಕ್ಕೆ ನನ್ನ ವಿರುದ್ಧವೇ ಕೇಸ್ ಹಾಕಿದ್ದಾರೆ. ಹಾಗಾದರೆ ವಿಪಕ್ಷವಾಗಿ ಬಾಯಿ ಮುಚ್ಕೊಂಡು ಕುಳಿತುಕೊಳ್ಳಬೇಕಾ? ನಾನು ಹೋಗಿದ್ದಾಗ ಜನರು ಹೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಎಂದು ಕೂಗಿಲ್ಲ ಎಂದರು. ಹಾಗಾದರೆ ನಿಮ್ಮ ಮೇಲೆ ಯಾಕೆ FIR ಹಾಕಬಾರದು? ವಿಪಕ್ಷ ನಾಯಕನಾಗಿ ತನಿಖೆ ಮಾಡಿ ಅಂತಾನೂ ಹೇಳಬಾರದ? ಬಾಯಿ ಮುಚ್ಚಿಸುವ ಕೆಲಸ ಸರ್ಕಾರ ಮಾಡುತ್ತಿದೆ. ವಿಪಕ್ಷ ಬಾಯಿ ಮುಚ್ಚಿಸಬೇಕು ಅಂತಾ ಇವರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: D Kempanna Death: ಡಿ ಕೆಂಪಣ್ಣ ನಿಧನ: ಕಾಂಗ್ರೆಸ್​ ‘ಪೇ ಸಿಎಂ’ ಅಭಿಯಾನಕ್ಕೆ ಕಾರಣರಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಇನ್ನಿಲ್ಲ

ಕರ್ನಾಟಕದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಜಾರಿಯಾಗಿದೆ. ಈ ಬಗ್ಗೆ ಹೋರಾಟ ಮಾಡಲು ಪಕ್ಷದಲ್ಲಿ ಚರ್ಚೆ ಮಾಡುತ್ತೇವೆ. ಪೊಲೀಸ್ ಇಲಾಖೆ ಸರ್ಕಾರದ ಕೈಗೊಂಬೆಯಾಗಿದೆ. ರಾಜ್ಯಪಾಲರ ಮೇಲೂ ಕಾಂಗ್ರೆಸ್ಸಿಗರು ಗದಾಪ್ರಹಾರ ಮಾಡುತ್ತಿದ್ದಾರೆ. ವಿವಿಗಳಲ್ಲಿ ರಾಜ್ಯಪಾಲರ ಅಧಿಕಾರ ಕಸಿಯುವ ಪ್ರಯತ್ನ ಮಾಡ್ತಿದ್ದಾರೆ. ನಾನು ಇಂದಿರಾಗಾಂಧಿ ವಿರುದ್ಧವೇ ಹೋರಾಟ ಮಾಡಿ ಬಂದವನು. ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ಆರ್.ಅಶೋಕ್​ ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರ ಸಚಿವ ರವನೀತ್ ಸಿಂಗ್ ವಿರುದ್ಧ ಎಫ್​ಐಆರ್

ಇನ್ನು ಮತ್ತೊಂದೆಡೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಹುಲ್ ಗಾಂಧಿ ಉಗ್ರ ಎಂದು ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕೆಪಿಸಿಸಿ ಲೀಗಲ್ ಸೆಲ್​ನಿಂದ ದೂರು ದಾಖಲಾಗಿದೆ. ಅಮೆರಿಕ ಪ್ರವಾಸದ ವೇಳೆ ಭಾರತದಲ್ಲಿ ಸಿಖ್​ರ ಪರಿಸ್ಥಿತಿ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ರವನೀತ್ ಸಿಂಗ್ ಅವರು ಆ ಬಾಂಬ್ ತಯಾರಕರು ರಾಹುಲ್​ರನ್ನು ಬೆಂಬಲಿಸುತ್ತಿದ್ದಾರೆ ಅಂದರೆ ಆತ ನಂಬರ್​ 1 ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ