ಬೆಂಗಳೂರು: ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಸಂಜೀವಿನಿ ಆಸ್ಪತ್ರೆ ವಿರುದ್ಧ FIR
ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಕಂದಮ್ಮ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಮಾಡಿದ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ. ಸಹನ ಕ್ಷಮೆ ಕೇಳಿದ್ದು, ಸಿಬ್ಬಂದಿಯನ್ನು ಅಮಾನುತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು, ನ.4: ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಕಂದಮ್ಮ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಮಾಡಿದ ಬೆಂಗಳೂರಿನ (Bengaluru) ಸಂಜೀವಿನಿ ಆಸ್ಪತ್ರೆ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎರಡು ವರ್ಷದ ಯಾದ್ವಿ ಎಂಬ ಹೆಣ್ಣುಮಗುವನ್ನು ಪೋಷಕರು ಸಂಜೀವಿನಿ ಆಸ್ಪತ್ರೆಗೆ ಕೊಂಡೊಯ್ದಿದ್ದರು. ಈ ವೇಳೆ ಜ್ವರ ಹೆಚ್ಚಾಗಿದ್ದರಿಂದ ವೈದ್ಯರು, ಡ್ರಿಪ್ಸ್ ಮೂಲಕ ಇಂಜೆಕ್ಷನ್ ನೀಡಿದ್ದರು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಬೇರೊಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೇ ವೇಳೆ ಸಂಜೀವಿನಿ ಆಸ್ಪತ್ರೆಯ ಸಿಬ್ಬಂದಿಗಳು ಹಣದ ಆಮಿಷ ಒಡ್ಡಿರುವ ಆರೋಪ ಕೇಳಿಬಂದಿದೆ. ಅಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ವಿರುದ್ಧ ಮಗುವಿನ ತಂದೆ ಕಿರಣ್ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಏನಿದು ಪ್ರಕರಣ?
ಮಗುವಿಗೆ ಅಕ್ಟೋಬರ್ 29 ರಂದು ಜ್ವರ ಬಂದಿದ್ದು, ಪೋಷಕರು ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ ಮಗು ಸುಸ್ತಾಗಿದೆ ಅಂತ ವೈದ್ಯರು ಡ್ರಿಪ್ಸ್ ಹಾಕಿದ್ದಾರೆ. ಈ ಮದ್ದು ಮಗುವಿನ ದೇಹಕ್ಕೆ ಹೋಗುತ್ತಿದ್ದಂತೆ ಮಗುವಿನ ತುಟಿಯಲ್ಲಿ ಸೌಲ್ಲಿಂಗ್, ರಕ್ತ ಬರಲು ಆರಂಭವಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ಹೆಂಡತಿಗೆ ಹಲ್ಲೆ ಮಾಡೋ ದೃಶ್ಯ ಕಂಡು ಹಾರ್ಟ್ ಅಟ್ಯಾಕ್ನಿಂದ ಪ್ರಾಣಬಿಟ್ಟ ಗಂಡ
ಇದನ್ನ ಗಮನಿಸಿದ ಪೋಷಕರಿಗೆ, ವೈದ್ಯರು ಅವಧಿ ಮುಗಿದ ಡ್ರಿಪ್ಸ್ ಕೊಟ್ಟಿರುವುದು ಗೊತ್ತಾಗಿದೆ. ಇದನ್ನ ಪ್ರಶ್ನಿಸಿದ್ದಕ್ಕೆ ವೈದ್ಯರು ತಪ್ಪನ್ನೆ ಸಮರ್ಥಿಸಿಕೊಂಡಿದ್ದಾರೆ. ಕೂಡಲೇ ಮಗುವನ್ನು ಪೋಷಕರು ಬೇರೊಂದು ಆಸ್ಪತ್ರೆಗೆ ದಾಖಲಿಸಿ ಸಂಜೀವಿನಿ ಆಸ್ಪತ್ರೆಯ ವಿರುದ್ಧ ಪೋಲಿಸರಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೆ, ಆಸ್ಪತ್ರೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿರುವ ಮಗುವಿನ ಪೋಷಕರು ಏರಿಯಾದ ಎಂಒಎಚ್ ಅವರಿಗೂ ಮಗುವಿನ ಪೋಷಕರು ದೂರು ನೀಡಿದ್ದರು.
ಘಟನೆ ಸಂಬಂಧ ಮಾತನಾಡಿದ್ದ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ. ಸಹನ, ಮಗುವಿಗೆ ಅವಧಿ ಮೀರಿದ ಚುಚ್ಚು ಮದ್ದು ಕೊಟ್ಟಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಡ್ರಿಪ್ಸ್ನಿಂದ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ. ನಾವು ಕ್ಷಮೆ ಕೇಳುತ್ತೇವೆ. ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನುತುಗೊಳಿಸಲಾಗಿದೆ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ