ದಸರಾ ಹಾಗೂ ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್; ತುಮಕೂರಿನ ವ್ಯಕ್ತಿ ವಿರುದ್ಧ ಎಫ್ಐಆರ್
ಸಿಎಂ ಹಾಗೂ ಮೈಸೂರು ದಸರಾ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಈ ಸಂಬಂಧ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ಆಧರಿಸಿ ತುಮಕೂರಿನ ವ್ಯಕ್ತಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಬೆಂಗಳೂರು, ಅ.21: ನಾಡಹಬ್ಬ ದಸರಾ (Mysuru Dasara) ಹಾಗೂ ಸಿಎಂ ಸಿದ್ದರಾಮಯ್ಯ (Siddaramaiah) ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪ ಸಂಬಂಧ ತುಮಕೂರಿನ ಶ್ರೀನಿವಾಸಮೂರ್ತಿ ಎಂಬಾತನ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಸಿಎಂ ಹಾಗೂ ಮೈಸೂರು ದಸರಾ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಈ ಸಂಬಂಧ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ಆಧರಿಸಿ ತುಮಕೂರಿನ ವ್ಯಕ್ತಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ವಿವಾದಾತ್ಮಕ ಪೋಸ್ಟ್ನಲ್ಲೇನಿತ್ತು?
ಸೀನಾ ಹಿಂದೂಸ್ಥಾನಿ ಸೇನಾ ಎಂಬ ಫೇಸ್ ಬುಕ್ ಖಾತೆಯಲ್ಲಿ ಮಹಿಷಾಸುರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಫೋಟೋವನ್ನು ಎಡಿಟ್ ಮಾಡಿ ಅವಹೇಳನ ಮಾಡಲಾಗಿತ್ತು. ತೋಲಾಂಡಿಗಳು ಸೇರಿಕೊಂಡು ಮುಂದಿನ ವರ್ಷ ಸಿದ್ದಸುರಾ ದಸರಾ ಮಾಡಿದರೂ ಆಚ್ಚರಿ ಇಲ್ಲ ಎಂದು ಟ್ಯಾಗ್ ಲೈನ್ ನೀಡಲಾಗಿತ್ತು. ಇದನ್ನು ಗಮನಿಸಿದ್ದ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮಹಿಷಾಸುರ ಪ್ರತಿಮೆ ವಿರೂಪಗೊಳಿಸಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ದಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಪೋಸ್ಟ್ ಹಾಕಿದ ವ್ಯಕ್ತಿ ಮತ್ತು ಖಾತೆ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಸದ್ಯ ದೂರಿನ ಆಧಾರದ ಮೇಲೆ ತುಮಕೂರಿನ ವ್ಯಕ್ತಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಬಿಟ್ ಕಾಯಿನ್ ನೆಪದಲ್ಲಿ ಲಕ್ಷಾಂತರ ಹಣ ದೋಖಾ!ಹಣ ಡಬಲ್ ಮಾಡ್ತೀವೆಂದು ಬಂಡಲ್ ಬಿಡ್ತಿದ್ದ ಅಪ್ಪ-ಮಗ ಅಂದರ್
ಸಿದ್ದರಾಮಯ್ಯರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಫೋಸ್ಟ್, ದೂರು ದಾಖಲು
ಇನ್ನು ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣ ವಾಟ್ಸಾಪ್ನಲ್ಲಿ ಪೋಸ್ಟ್ ಹರಿಬಿಟ್ಟ ಆರೋಪದ ಮೇಲೆ ಓರ್ವನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೋಮನಗೌಡ ಎಂಬಾತ ಜೈ ಕರ್ನಾಟಕ ಎನ್ನುವ ವಾಟ್ಸಾಪ್ ಗ್ರೂಪ್ ನಲ್ಲಿ ಸಿಎಂ ಅವರನ್ನು ಅವಹೇಳನಕಾರಿಯಾಗಿ ಚಿಂತಿಸಿ ಪೋಸ್ಟ್ ಹರಿಬಿಟ್ಟಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಂದಾವರ ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಸೋಮನಗೌಡನ ವಿರುದ್ಧ ಪ್ರಕರಣ ದಾಖಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:33 am, Sat, 21 October 23