AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೀಟ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೇಶದೆಲ್ಲೆಡೆ ಭಾರೀ ಪ್ರತಿಭಟನೆಗಳು ನಡೆದಿದ್ದು, ವಿದ್ಯಾರ್ಥಿಗಳ ಆಕ್ರೋಶ ವಿಕೋಪಕ್ಕೆ ಹೋಗುವ ಲಕ್ಷಣಗಳು ಕಾಣುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ನಡೆದ ನೀಟ್ ಪತ್ರಿಭಟನೆ ವೇಳೆ ಯುವತಿಯೋರ್ವಳು ಆಕ್ಷೇಪಾರ್ಹ ಪೋಸ್ಟರ್ ಪ್ರದರ್ಶಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರಿನಲ್ಲಿ ನೀಟ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR
Neet Protest
ಪ್ರದೀಪ್​ ಚಿಕ್ಕಾಟಿ
| Edited By: |

Updated on: Jul 26, 2026 | 5:50 PM

Share

ಬೆಂಗಳೂರು, (ಜುಲೈ 26): 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ (Umar Khalid) ಮತ್ತು ಶಾರ್ಜೀಲ್ ಇಮಾಮ್ ಪರ ಪೋಸ್ಟರ್‌ ಪ್ರದರ್ಶಿಸಿದ್ದ ಯುವತಿ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಅಧಿಕಾರಿಯೊಬ್ಬರು ಬೆಂಗಳೂರಿನ ಉಪ್ಪಾರಪೇಟೆ ಠಾಣೆಗೆ (Upparpet Police Station) ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ. ʻಗಲಭೆ ಉದ್ದೇಶದಿಂದ ಪ್ರಚೋದನೆʼ ನೀಡುವ ಆರೋಪದ ಮೇಲೆ ಕೇಸ್‌ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಏನಿದು ವಿವಾದ?

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ (ಜು.24) ಯುವತಿಯೊಬ್ಬಳು ಹಿಡಿದಿದ್ದ ಪೋಸ್ಟರ್‌ ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರತಿಭಟನೆಗೆ ಬಂದಿದ್ದ ಆಕೆ ಗಲಭೆ ಪ್ರಕರಣದ ಆರೋಪಿಗಳಾದ ಉಮರ್‌ ಖಾಲಿದ್‌ ಹಾಗೂ ಶಾರ್ಜೀಲ್ ಇಮಾಮ್ ಪರವಾಗಿ ಘೋಷಣೆಗಳಿರುವ ಪೋಸ್ಟರ್‌ಗಳನ್ನ ಪ್ರದರ್ಶಿಸಿದ್ದಳು. ಅಷ್ಟೇ ಅಲ್ಲದೇ ʻUkhad Le BLR Policeʼ ಎಂಬ ಬರಹವನ್ನು ಪೋಸ್ಟರ್‌ನಲ್ಲಿ ಪ್ರದರ್ಶಿಸಿ, ಬೆಂಗಳೂರು ಪೊಲೀಸರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಳು.

ಇದನ್ನೂ ಓದಿ: Cockroach Janta Party: ಏನಿದು ‘ಕಾಕ್ರೋಚ್ ಜನತಾ ಪಾರ್ಟಿ’? ಇಂಟರ್‌ನೆಟ್ ಮೀಮ್‌ನಿಂದ ಶಿಕ್ಷಣ ಸಚಿವರ ರಾಜೀನಾಮೆಯವರೆಗೆ ಯುವ ಕ್ರಾಂತಿಯ ಪೂರ್ಣ ವರದಿ

ಈ ಪೋಸ್ಟರ್‌ಗಳು ಅಲ್ಲಿದ್ದ ಪೊಲೀಸರ ಗಮನ ಸೆಳೆದು, ಪರಿಸ್ಥಿತಿ ಉದ್ವಿಗ್ನವಾಗದಂತೆ ಪೊಲೀಸರು ತಕ್ಷಣವೇ ಪೋಸ್ಟರ್‌ಗಳನ್ನ ವಶಪಡಿಸಿಕೊಂಡಿದ್ದರು. ಇದೇ ವೇಳೆ ಅಲ್ಲಿದ್ದ ಇತರ ವಿದ್ಯಾರ್ಥಿಗಳು ಆಕೆಗೆ ಕ್ಲಾಸ್‌ ತೆಗದುಕೊಂಡು, ಪ್ರತಿಭಟನಾ ಸ್ಥಳದಿಂದ ಕಳುಹಿಸಿದ್ದರು. ಇದೀಗ ಈ ಸಂಬಂಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್