Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು

ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಎರಡು ಪಕ್ಷಗಳು ಅಬ್ಬರ ಪ್ರಚಾರದಲ್ಲಿ ತೊಡಗಿದೆ. ಈ ಮಧ್ಯೆ ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪೋಸ್ಟ್​ ಮಾಡಿತ್ತು. ಈ ಹಿನ್ನಲೆ ದ್ವೇಷ ಮತ್ತು ಎರಡು ಗುಂಪುಗಳ ನಡುವೆ ಸ್ವಾಸ್ಥ್ಯ ಕೆಡಿಸಲು ಯತ್ನಿಸಿದ ಆರೋಪ ಮೇಲೆ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು
ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 24, 2024 | 8:06 PM

ಬೆಂಗಳೂರು, ಏ.24: ಬಿಜೆಪಿ(BJP) ಅಧಿಕೃತ ಎಕ್ಸ್​ ಖಾತೆ ಮೇಲೆ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆ (Malleshwaram Police Station) ಯಲ್ಲಿ ಎಫ್ಐಆರ್(FIR) ದಾಖಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಕುರಿತು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿತ್ತು. ಈ ಬಗ್ಗೆ ಎಫ್ಎಸ್​ಟಿ ತಂಡ ಮಲ್ಲೇಶ್ವರಂ ಠಾಣೆಗೆ ದೂರು ನೀಡಿತ್ತು. ಈ ಹಿನ್ನಲೆ ಆರ್ ಪಿ ಆಕ್ಟ್ 125 ಮತ್ತು ಐಪಿಸಿ 153 ಅಡಿಯಲ್ಲಿ ದ್ವೇಷ ಮತ್ತು ಎರಡು ಗುಂಪುಗಳ ನಡುವೆ ಸ್ವಾಸ್ಥ್ಯ ಕೆಡಿಸಲು ಯತ್ನಿಸಿದ ಆರೋಪ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಇನ್ನು ಇದೇ ಏ.20 ರಂದು ಕೋಮು ಸೌಹಾರ್ದತೆಗೆ ದಕ್ಕೆ ತರಲು ಯತ್ನಿಸಿದ ಆರೋಪದ ಹಿನ್ನಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ದ ಎಫ್​ಐಆರ್​ ದಾಖಲಾಗಿತ್ತು. ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ತರುವಂತಹ ಪೋಸ್ಟ್​ ಹಾಕಲಾಗಿತ್ತು. ಹೀಗಾಗಿ ಬಿವೈ ವಿಜಯೇಂದ್ರ ಹಾಗೂ ಖಾತೆ ನಿರ್ವಹಣೆ ಮಾಡುವವರ ವಿರುದ್ದ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು

ಇನ್ನು ಪ್ರಚಾರದ ವೇಳೆ ಬೆದರಿಕೆ ಹಾಕಿದ ಆರೋಪದ ಮೇಲೆ ಡಿಸಿಎಂ ಡಿಕೆ ಶಿವಕುಮಾರ್​​ ಮೇಲೂ ಎಫ್​ಐಆರ್​ ದಾಖಲಾಗಿತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್​ ಪರ ಪ್ರಚಾರದ ವೇಳೆ ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Wed, 24 April 24