ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಕಡ್ಡಾಯಕ್ಕೆ ಆಗ್ರಹಿಸಿ ಧರಣಿ: 15 ಕರವೇ ಕಾರ್ಯಕರ್ತರ ವಿರುದ್ಧ FIR ದಾಖಲು

ನಗರದ ಲಾವೆಲ್ಲೆ ರಸ್ತೆಯನಲ್ಲಿ ಇಂಗ್ಲಿಷ್ ಫಲಕ ಒಡೆದಾಕಿದ್ದಕ್ಕೆ 15 ಕರವೇ ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಬ್ಬನ್​ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಐಪಿಸಿ 504, 506, 143, 147, 427 rw 41, PDLP Act 2a ಅಡಿ ಎಫ್​ಐಆರ್ (FIR) ದಾಖಲು ಮಾಡಲಾಗಿದೆ. ಸದ್ಯ 15 ಕರವೇ ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಕಡ್ಡಾಯಕ್ಕೆ ಆಗ್ರಹಿಸಿ ಧರಣಿ: 15 ಕರವೇ ಕಾರ್ಯಕರ್ತರ ವಿರುದ್ಧ FIR ದಾಖಲು
ಕರವೇ ಕಾರ್ಯಕರ್ತ
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on:Dec 27, 2023 | 8:59 PM

ಬೆಂಗಳೂರು, ಡಿಸೆಂಬರ್​ 27: ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಕಡ್ಡಾಯಕ್ಕೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಧರಣಿ ಮಾಡಿದೆ. ನಗರದ ಲಾವೆಲ್ಲೆ ರಸ್ತೆಯನಲ್ಲಿ ಇಂಗ್ಲಿಷ್ ಫಲಕ ಒಡೆದಾಕಿದ್ದಕ್ಕೆ 15 ಕರವೇ ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಬ್ಬನ್​ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಐಪಿಸಿ 504, 506, 143, 147, 427 rw 41, PDLP Act 2a ಅಡಿ ಎಫ್​ಐಆರ್ (FIR) ದಾಖಲು ಮಾಡಲಾಗಿದೆ. ಸದ್ಯ 15 ಕರವೇ ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

15 ಕರವೇ ಕಾರ್ಯಕರ್ತರ ಬಂಧನ ಖಂಡಿಸಿ ಇತರೆ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಕನ್ನಡ ನಾಡು ನುಡಿಗಾಗಿ ಹೋರಾಟ ಮಾಡಿದ್ದಕ್ಕೆ ಬಟ್ಟೆ ಬಿಚ್ಚಿ ಕೂರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ 15 ಕರವೇ ಕಾರ್ಯಕರ್ತರನ್ನ ಪೊಲೀಸರು ಮೆಡಿಕಲ್ ಟೆಸ್ಟ್​ಗೆ ಕರೆದುಕೊಂಡು ಹೋಗಿದ್ದಾರೆ.

ವಶಕ್ಕೆ ಪಡೆದಿದ್ದ ಕರವೇ ಕಾರ್ಯಕರ್ತರ ಬಿಡುಗಡೆ

ಪ್ರತಿಭಟನೆ ವೇಳೆ ವಶಕ್ಕೆ ಪಡೆದಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಬಿಡುಗಡೆ ಮಾಡಿಲ್ಲ. ಹೀಗಾಗಿ ಅವರನ್ನು ಬಿಡುಗಡೆ ಮಾಡುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ವೇಳೆ ಯಲಹಂಕದಲ್ಲಿರುವ ಪೊಲೀಸ್​ ಡ್ರೈವಿಂಗ್​ ಸ್ಕೂಲ್ ಬಳಿಯ ರಸ್ತೆ ತಡೆದು ಮಹಿಳಾ ಕಾರ್ಯಕರ್ತೆಯರು ಹೈಡ್ರಾಮಾ ಮಾಡಿದ್ದಾರೆ.

ಇದನ್ನೂ ಓದಿ: ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಕರವೇ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ?

ಸಾದಹಳ್ಳಿ ಬಳಿಯ ಟೋಲ್​ ಪ್ಲಾಜಾ ಬಳಿ ಹಾಕಲಾಗಿದ್ದ ಮಾಲ್​ ಆಫ್​ ಏಷಿಯಾದ ಜಾಹಿರಾತು ಫಲಕ ಹರಿದು ಹಾಕಿದ್ದಾರೆ. ಕನ್ನಡ ಬೋರ್ಡ್​ ಅಳವಡಿಸುವಂತೆ ಘೋಷಣೆ ಕೂಗಿದ್ದಾರೆ. ಕರವೇ ಮಹಿಳಾ ಕಾರ್ಯಕರ್ತೆಯರೂ ಕೂಡ ಬೀದಿಗಿಳಿದಿದ್ದು ನ್ಯಾಯ ಬೇಕು ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಇಷ್ಟೇ ಅಲ್ಲ ರಸ್ತೆ ತಡೆದು ಕಿಡಿಕಾರಿದ ಕನ್ನಡ ಹೋರಾಟಗಾರರು ಕನ್ನಡ ನಾಮಫಲಕ ಹಾಕೋವರೆಗೂ ಹೋರಾಟ ಬಿಡಲ್ಲ ಅಂತ ಪಟ್ಟು ಹಿಡಿದಿದ್ದರು. ಈ ವೇಳೆ ಪೊಲೀಸರು ಮನವೊಲಿಸೋಕೆ ಮುಂದಾಗಿದ್ದರು. ಆಗ ಕೊಂಚ ತಳ್ಳಾಟ, ನೂಕಾಟವೂ ನಡೆದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂಗ್ಲಿಷ್​ ಬೋರ್ಡ್​ಗಳು ಪೀಸ್​ ಪೀಸ್​: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ರಸ್ತೆಯ ಬದಿ ಇಂಗ್ಲೀಷ್ ಬೋರ್ಡ್ ಮಳಿಗೆಗಳಿಗೆ ಕಲ್ಲು ತೂರಿದ್ದಾರೆ. ಅಂಗಡಿ ಮುಂಗಟ್ಟು ಮುಂಭಾಗದ ಇಂಗ್ಲೀಷ್ ಫ್ಲೆಕ್ಸ್ ಹಾಗೂ ಆಸ್ಪತ್ರೆ ಬೋರ್ಡ್​ಗಳನ್ನ ಹರಿದು ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:52 pm, Wed, 27 December 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ