ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು

ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್, ಕಾಂಗ್ರೆಸ್ ಪಕ್ಷ ಹಂಚಿಕೊಂಡಿತ್ತು. ಆದ್ದರಿಂದ ಫೋರ್ಜರಿ, ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಇದೀಗ ಡಿಕೆ ಶಿವಕುಮಾರ್​ ಮತ್ತು ಬಿ.ಆರ್.ನಾಯ್ಡು ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು
ಡಿಕೆ ಶಿವಕುಮಾರ್​​ ವಿರುದ್ದ ಎಫ್​ಐಆರ್​ ದಾಖಲು
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 01, 2024 | 4:10 PM

ಬೆಂಗಳೂರು, ಏ.01: ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಕರ್ನಾಟಕ ಕಾಂಗ್ರೆಸ್​ ಸಾಮಾಜಿಕ ಜಾಲತಾಣ(Congress Social media) ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಅವರು ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದರು. ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್, ಕಾಂಗ್ರೆಸ್ ಪಕ್ಷ ಹಂಚಿಕೊಂಡಿತ್ತು. ಆದ್ದರಿಂದ ಫೋರ್ಜರಿ, ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಇದೀಗ ಡಿಕೆ ಶಿವಕುಮಾರ್​ ಮತ್ತು ಬಿ.ಆರ್.ನಾಯ್ಡು ವಿರುದ್ಧ 153(a), 504, 506,464 ಸೆಕ್ಷನ್​​ ಅಡಿ ಎಫ್​ಐಆರ್​ ದಾಖಲಿಸಲಾಗಿದೆ.

ಇದನ್ನೂ ಓದಿ:ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ; ತಮಿಳುನಾಡು ಸಚಿವರ ವಿರುದ್ಧ ಪ್ರಕರಣ ದಾಖಲು

ಇನ್ನು ಕಳೆದ ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಟುಟಿಕೋರಿನ್ ಪೊಲೀಸರು ತಮಿಳುನಾಡಿನ ಮೀನುಗಾರಿಕಾ ಸಚಿವ ಅನಿತ ಆರ್ ರಾಧಾಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಿಜೆಪಿ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ನಾವು 294B (ಸಾರ್ವಜನಿಕವಾಗಿ ಅಶ್ಲೀಲ ಪದಗಳನ್ನು ಬಳಸುವುದು) ಅಡಿಯಲ್ಲಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಮೇಘನಪುರಂ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಎನ್​​​ಡಿಟಿವಿ ವರದಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Mon, 1 April 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM