ಬೆಂಗಳೂರು, ಏ.01: ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣ(Congress Social media) ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಅವರು ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ್ದರು. ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್, ಕಾಂಗ್ರೆಸ್ ಪಕ್ಷ ಹಂಚಿಕೊಂಡಿತ್ತು. ಆದ್ದರಿಂದ ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಇದೀಗ ಡಿಕೆ ಶಿವಕುಮಾರ್ ಮತ್ತು ಬಿ.ಆರ್.ನಾಯ್ಡು ವಿರುದ್ಧ 153(a), 504, 506,464 ಸೆಕ್ಷನ್ ಅಡಿ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ; ತಮಿಳುನಾಡು ಸಚಿವರ ವಿರುದ್ಧ ಪ್ರಕರಣ ದಾಖಲು
ಇನ್ನು ಕಳೆದ ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಟುಟಿಕೋರಿನ್ ಪೊಲೀಸರು ತಮಿಳುನಾಡಿನ ಮೀನುಗಾರಿಕಾ ಸಚಿವ ಅನಿತ ಆರ್ ರಾಧಾಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಿಜೆಪಿ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ನಾವು 294B (ಸಾರ್ವಜನಿಕವಾಗಿ ಅಶ್ಲೀಲ ಪದಗಳನ್ನು ಬಳಸುವುದು) ಅಡಿಯಲ್ಲಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಮೇಘನಪುರಂ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:07 pm, Mon, 1 April 24