ಸಿಎಂ ಮನೆಗೆ ಮುತ್ತಿಗೆ ವಿಚಾರ; ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಸೇರಿ 36 ಜನರ ವಿರುದ್ಧ ಎಫ್ಐಆರ್ ದಾಖಲು

| Updated By: ಆಯೇಷಾ ಬಾನು

Updated on: Apr 18, 2022 | 11:40 AM

ಏಪ್ರಿಲ್ 13ರಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಹೀಗಾಗಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 36 ಜನರ ವಿರುದ್ಧ ಎಫ್ಐಆರ್ ದಾಖಲು

ಸಿಎಂ ಮನೆಗೆ ಮುತ್ತಿಗೆ ವಿಚಾರ; ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಸೇರಿ 36 ಜನರ ವಿರುದ್ಧ ಎಫ್ಐಆರ್ ದಾಖಲು
ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುವಾಗ ಕಾಂಗ್ರೆಸ್​ ನಾಯಕರನ್ನು ವಶಕ್ಕೆ ಪಡೆದ ಪೊಲೀಸ್ (ಚಿತ್ರ ಪಿಟಿಐ)
Follow us on

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah), ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಸೇರಿದಂತೆ 36 ಜನರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಏಪ್ರಿಲ್ 13ರಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಹೀಗಾಗಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 36 ಜನರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 103 ಐಪಿಸಿ ಸೆಕ್ಷನ್ 341, 143ರ ಅಡಿ ಎಫ್ಐಆರ್ ದಾಖಲಿಸಲಾಗಿದೆ.

ಇನ್ನು ಕಾಂಗ್ರೆಸ್ ನಾಯಕರ ವಿರುದ್ಧ ಎಫ್​ಐಆರ್ ದಾಖಲು ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ, ಸಿಎಂ ಮನೆಗೆ ಹೋಗುವಾಗ ಬಂಧಿಸಿ ಬಿಡುಗಡೆ ಮಾಡಿದ್ದರು. ಈಗ ಎಫ್​ಐಆರ್ ಹಾಕಿದ್ದಾರೆ. ಈಶ್ವರಪ್ಪ ಜತೆ ನೂರಾರು ಜನರು ಮೆರವಣಿಗೆ, ಪ್ರತಿಭಟನೆ ಮಾಡಿದ್ದರು. K.S.ಈಶ್ವರಪ್ಪ ಮೇಲೆ ಯಾಕೆ ಯಾವುದೇ ಕೇಸ್ ಹಾಕಿಲ್ಲ. ರಾಜ್ಯ ಸರ್ಕಾರ ನಮ್ಮ ಮೇಲೆ ಮಾತ್ರ ಕೇಸ್ ಹಾಕುತ್ತಿದೆ. ನೈತಿಕ ಪೊಲೀಸ್​ಗಿರಿಯಲ್ಲಿ ತಪ್ಪೇನು ಅಂತ ಸಿಎಂ ಹೇಳಿದ್ರು. ಮುಖ್ಯಮಂತ್ರಿಯಿಂದಲೇ ನೈತಿಕ ಪೊಲೀಸ್​ಗಿರಿಗೆ ಕುಮ್ಮಕ್ಕು ನೀಡಲಾಗುತ್ತಿದೆ. ಚರ್ಚ್​ನಲ್ಲಿ ಆಂಜನೇಯ ಮಂತ್ರ ಪಠಣ ಮಾಡಿದರು, ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅಡ್ಡಿ ಮಾಡಿದ್ರು, ಅಡ್ಡಿಪಡಿಸಿದವರ ಮೇಲೆ ಸಿಎಂ ಯಾಕೆ ಕೇಸ್ ಹಾಕಲಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಗಲಾಟೆ ಮಾಡಿದವರನ್ನು ಯಾವುದೇ ಕಾರಣಕ್ಕೂ ಬಿಡಬೇಡಿ, ಆದರೆ ಮುಗ್ಧರಿಗೆ ತೊಂದರೆ ಕೊಡುವುದು ಬೇಡ; ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್

ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ

Published On - 10:38 am, Mon, 18 April 22